Modi ಕೀಳುಮಟ್ಟಕ್ಕಿಳಿದು ಮಾತನಾಡಬಾರದು: ಸಿಎಂ ಸಿದ್ದರಾಮಯ್ಯ
Team Udayavani, Apr 22, 2024, 11:30 PM IST
ಶಿವಮೊಗ್ಗ: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಹಿಳೆಯರ ಮಾಂಗಲ್ಯ ವನ್ನು ಮುಸ್ಲಿಮರಿಗೆ ಕೊಡುತ್ತಾರೆ ಎಂದು ನರೇಂದ್ರ ಮೋದಿ ಹೇಳಿದ್ದಾರೆ. ಆದರೆ ಪ್ರಧಾನಿಯಾಗಿ ಅವರು ಇಷ್ಟು ಕೆಳಮಟ್ಟದಲ್ಲಿ ಮಾತನಾಡಬಾರದಿತ್ತು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಸುದ್ದಿಗಾರರ ಜತೆ ಮಾತನಾಡಿದ ಅವರು, ಹಿಂದೂಗಳ ಮಂಗಳಸೂತ್ರ ವನ್ನು ತೆಗೆದು ಮುಸ್ಲಿಮರಿಗೆ ನೀಡುತ್ತಾರೆ ಎನ್ನುವುದು ಅವರ ಸ್ಥಾನಕ್ಕೆ ಅಗೌರವ ತರುವಂಥ ಮಾತುಗಳು. ದೇಶದ ಪ್ರಧಾನಿಯಾಗಿ ಎಲ್ಲ ಜನಾಂಗವನ್ನು ಸಮಾನವಾಗಿ ನೋಡಿಕೊಳ್ಳುವ ಕರ್ತವ್ಯ ಅವರದ್ದು. ಇಂಥ ಮಾತುಗಳು ಅವರಿಗೆ ಶೋಭೆ ತರುವುದಿಲ್ಲ. ಸಮಾನವಾಗಿ ಆಸ್ತಿ ಹಂಚಿಕೆಯಾಗುವುದು ಸಾಮಾಜಿಕ ನ್ಯಾಯ, ಸಮಸಮಾಜ ನಿರ್ಮಾಣವಾಗ ಬೇಕಾದರೆ ಎಲ್ಲರೂ ಮುಖ್ಯವಾಹಿನಿಗೆ ಬರಬೇಕು. ಕೆಲವೇ ಜನರ ಕೈಯಲ್ಲಿ ಅಧಿಕಾರ, ಸಂಪತ್ತು ಇದ್ದರೆ ಇದು ಆಗುವುದಿಲ್ಲ ಎಂದರು.
ದೇಶಕ್ಕೆ ಬಿಜೆಪಿಯೇ ಡೇಂಜರ್, ಕಾಂಗ್ರೆಸ್ ಅಲ್ಲ
ಕಾಂಗ್ರೆಸ್ ಜಾಹೀರಾತಿಗೆ ಪ್ರತಿಯಾಗಿ ಬಿಜೆಪಿಯವರು ಕಾಂಗ್ರೆಸ್ ಡೇಂಜರ್ ಎಂಬ ಜಾಹೀರಾತು ಬಿಡುಗಡೆ ಮಾಡಿದ್ದಾರೆ. ದೇಶಕ್ಕೆ ಬಿಜೆಪಿಯೇ ಡೇಂಜರ್ ಹೊರತು, ಕಾಂಗ್ರೆಸ್ ಅಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಪ್ರಧಾನಿ ಮೋದಿ ಕರ್ನಾಟಕಕ್ಕೆ ಖಾಲಿ ಚೊಂಬು ಕೊಟ್ಟಿದ್ದಾರೆ. ರಾಜ್ಯದ ಬಗ್ಗೆ ಮಲತಾಯಿ ಧೋರಣೆ ತೋರಿದ್ದಾರೆ ಎಂದು ಜಾಹೀರಾತು ಬಿಡುಗಡೆ ಮಾಡಲಾಗಿದೆ. ಹೆಣ್ಣುಮಕ್ಕಳಿಗೆ ಉಚಿತ ಬಸ್ ಸೌಲಭ್ಯ, ಉಚಿತ ವಿದ್ಯುತ್, ಅನ್ನಭಾಗ್ಯ ಯೋಜನೆಗಳು ಡೇಂಜರ್ ಆಗುತ್ತವೆಯೇ? ಸಮಾಜ ಒಡೆಯುವಂತಹ ಕಾರ್ಯಗಳು, ಮತಗಳ ಧ್ರುವೀಕರಣ ಮಾಡು ವುದು ಅಪಾಯಕಾರಿಯೇ ಹೊರತು ವಿವಿಧತೆಯಲ್ಲಿ ಏಕತೆ ತರುವುದು ಡೇಂಜರ್ ಅಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್ಮಿಲ್ ಕುಸಿತ:7 ಮಂದಿಗೆ ಗಾಯ
Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ
BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು
Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಪೊಲೀಸರ ವಶಕ್ಕೆ
Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.