Shivamogga: 18 ವರ್ಷದ ಯುವತಿಗೆ ಮಂಗನ ಕಾಯಿಲೆ, ಆರೋಗ್ಯ ಸ್ಥಿತಿ ಗಂಭೀರ
Team Udayavani, Jan 6, 2024, 4:53 PM IST
ಶಿವಮೊಗ್ಗ: ಹೊಸನಗರ ತಾಲ್ಲೂಕಿನ ಅರಮನೆಕೊಪ್ಪದ ಗ್ರಾಮ ವ್ಯಾಪ್ತಿಯ 18 ವರ್ಷದ ಯುವತಿಗೆ ಕೆಎಫ್‌ಡಿ (ಮಂಗನ ಕಾಯಿಲೆ) ಪಾಸಿಟಿವ್ ಬಂದಿದ್ದು ಆರೋಗ್ಯ ಸ್ಥಿತಿ ಗಂಭೀರವಾಗಿದೆ.
ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ಯುವತಿಗೆ ಕೆಎಫ್‌ಡಿ ಟೆಸ್ಟ್ ಮಾಡಲಾಗಿತ್ತು. ಮೊದಲ ಟೆಸ್ಟ್ ನಲ್ಲಿ ನೆಗೆಟಿವ್, ಎರಡನೇ ಬಾರಿ ಆರ್‌ಟಿಸಿಪಿಆರ್ ಟೆಸ್ಟ್ ಮಾಡಿದಾಗ ಪಾಸಿಟಿವ್ ಬಂದಿದೆ. ಮೂರು ದಿನಗಳ ಕಾಲ ಮೆಗ್ಗಾನ್ ಆಸ್ಪತ್ರೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗಿದ್ದು ಶುಕ್ರವಾರ ಸಂಜೆ ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅರಮನೆಕೊಪ್ಪ ವ್ಯಾಪ್ತಿಯಲ್ಲಿ ಈ ಹಿಂದೆ ಕೆಎಫ್‌ಡಿ ಪ್ರಕರಣಗಳು ವರದಿಯಾಗಿಲ್ಲ. ಈ ಬಾರಿ ಶರಾವತಿ ಹಿನ್ನೀರು ತಗ್ಗಿದ ಹಿನ್ನೆಲೆ ಪ್ರಾಣಿಗಳ ಮೂಲಕ ವೈರಸ್‌ಗಳು ವರ್ಗಾವಣೆಯಾಗಿರಬಹುದು ಎನ್ನಲಾಗಿದೆ.
ಉಚಿತ ಚಿಕಿತ್ಸೆ ನೀಡಲಿ
2019ರಲ್ಲಿ ಮಂಗನ ಕಾಯಿಲೆ ಸ್ಫೋಟಗೊಂಡ ಹಿನ್ನೆಲೆ ರೋಗಿಗಳ ಚಿಕಿತ್ಸಾ ವೆಚ್ಚವನ್ನು ಸರಕಾರವೇ ಭರಿಸಿತ್ತು. ಎರಡು ಅವಧಿಯಿಂದ ಸರಕಾರ ಲಸಿಕೆ ಸಹ ನಿಲ್ಲಿಸಿರುವುದರಿಂದ ಉಚಿತ ಚಿಕಿತ್ಸೆಗೆ ವ್ಯವಸ್ಥೆ ಮಾಡಬೇಕಿದೆ. ಆಯುಷ್ಮಾನ್ ಭಾರತ್ ಕಾರ್ಡ್ನಲ್ಲಿ ಚಿಕಿತ್ಸೆ ಪಡೆಯಬಹುದಾದರೂ ಸ್ಕಾö್ಯನಿಂಗ್ ಇತರೆ ಖರ್ಚುಗಳನ್ನು ಸ್ವಂತವಾಗಿ ಭರಿಸಬೇಕಿದೆ. ಕಾಡಂಚಿನ ಬಡ ಕುಟುಂಬಗಳು ಆರ್ಥಿಕವಾಗಿ ಹಿಂದುಳಿದಿದ್ದು ಸರಕಾರ ಚಿಕಿತ್ಸಾ ವೆಚ್ಚ ಭರಿಸಿದರೆ ಆ ಕುಟುಂಬಗಳು ನಿಟ್ಟುಸಿರು ಬಿಡಲಿವೆ.
ಇದನ್ನೂ ಓದಿ: Aditya L1: 15 ಲಕ್ಷ ಕಿ.ಮೀ. ಪ್ರಯಾಣ ಯಶಸ್ವಿ-ಕಕ್ಷೆಗೆ ಸೇರಿದ ಆದಿತ್ಯ: ಪ್ರಧಾನಿ ಅಭಿನಂದನೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ
Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ
Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ
Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ
ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಗೌರವಾರ್ಪಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.