ಗಂಡ ಮಾಡಿದ ಸಾಲಕ್ಕೆ ಹೆದರಿ ಆತ್ಮಹತ್ಯೆಗೆ ಶರಣಾದ ತಾಯಿ -ಮಗಳು
Team Udayavani, Sep 7, 2021, 4:07 PM IST
ಶಿವಮೊಗ್ಗ: ಗಂಡ ಮಾಡಿದ ಸಾಲದ ವಿಚಾರ ತಿಳಿದು ಮಾನಸಿಕವಾಗಿ ಕುಗ್ಗಿದ ಮಹಿಳೆ ತನ್ನ ಮಗಳೊಂದಿಗೆ ಆತ್ಮಹತ್ಯೆಗೆ ಶರಣಾದ ಘಟನೆ ಜಿಲ್ಲೆಯ ಭದ್ರಾವತಿಯ ಯಾಕ್ಸಿನ್ ನಗರದಲ್ಲಿ ನಡೆದಿದೆ.
ಸಂಗೀತಾ (35 ವ) ಹಾಗೂ ಮಧುಶ್ರೀ (11 ವ) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿಗಳು.
ಇದನ್ನೂ ಓದಿ:ಅನುಮಾನಾಸ್ಪದ ರೀತಿಯಲ್ಲಿ ಶಿಕ್ಷಕಿ ಹಾಗೂ 14 ವರ್ಷದ ಮಗನ ಹತ್ಯೆ : ಪೊಲೀಸರಿಂದ ಶೋಧ ಕಾರ್ಯ
ಸಂಗೀತಾ ಪತಿ ಧನಶೇಖರ್ ಅವರು ಹೋಲ್ ಸೇಲ್ ವ್ಯಾಪಾರ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು. ಆದರೆ ಕೋವಿಡ್ ಬಂದ ಬಳಿಕ ಧನಶೇಖರ್ ವ್ಯವಹಾರದಲ್ಲಿ ಭಾರಿ ಪ್ರಮಾಣದ ನಷ್ಟ ಅನುಭವಿಸಿದ್ದರು. ವ್ಯಾಪಾರದಲ್ಲಿ ನಷ್ಟವಾಗಿದ್ದರಿಂದ ಸಾಕಷ್ಟು ಸಾಲವನ್ನೂ ಮಾಡಿದ್ದರು. ಪತಿ ಸಾಲ ಮಾಡಿದ ವಿಷಯ ತಿಳಿದಿದ್ದ ಪತ್ನಿ ಸಂಗೀತಾ ಮಾನಸಿಕವಾಗಿ ಕುಗ್ಗಿಹೋಗಿದ್ದರು ಎನ್ನಲಾಗಿದೆ.
ಸಾಲಕ್ಕೆ ಹೆದರಿದ ಸಂಗಿತಾ ತನ್ನ ಮಗಳು ಮಧುಶ್ರೀಗೆ ಸೀರೆಯ ಒಂದು ಬದಿಯಿಂದ ನೇಣುಹಾಕಿ ಬಳಿಕ ಸೀರೆಯ ಇನ್ನೊಂದು ಬದಿಯಿಂದ ತಾನೂ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
Shimoga; ಕಾಂಗ್ರೆಸ್ ಸರಕಾರ ಹಿಂದೂ ಸಮಾಜದ ತಾಳ್ಮೆ ಪರೀಕ್ಷೆ ಮಾಡುತ್ತಿದೆ: ಈಶ್ವರಪ್ಪ
Shimoga; ತೇಜೋವಧೆ ಮಾಡಲು ನನ್ನ ಹೆಸರಲ್ಲಿ ಕಳಪೆ ಸ್ವೀಟ್ ಹಂಚಿಕೆ; ಡಾ.ಸರ್ಜಿ
Hosanagara: ರಸ್ತೆ ಅಪಘಾತದಲ್ಲಿ ಪತಿ ಮೃತಪಟ್ಟ ಸುದ್ದಿ ಕೇಳಿ ಆತ್ಮಹತ್ಯೆಗೆ ಶರಣಾದ ಪತ್ನಿ
Thirthahalli: ಅದ್ಧೂರಿಯಾಗಿ ನಡೆದ ಎಳ್ಳಮಾವಾಸ್ಯೆ ರಥೋತ್ಸವ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.