ಮೂಗೂರು ಏತ ನೀರಾವರಿ ಪೂರ್ಣ

ಮಾತಿಗೆ ತಪ್ಪದ ಸಿಎಂ ಯಡಿಯೂರಪ್ಪ­!ಕುಮಾರ್‌ ಬಂಗಾರಪ್ಪ ಶ್ರಮಕ್ಕೆ ಜನರ ಮೆಚ್ಚುಗೆ­! 97 ಕೆರೆಗಳಿಗೆ ಜೀವಕಳೆ

Team Udayavani, Feb 23, 2021, 6:54 PM IST

Muguta Irrigation project

ಸೊರಬ: ತಾಲೂಕಿನ ಆನವಟ್ಟಿ ಭಾಗದ ಜನತೆಯ ಬಹು ನಿರೀಕ್ಷಿತ ಮೂಗೂರು ಏತ ನೀರಾವರಿ ಯೋಜನೆ ಪೂರ್ಣಗೊಂಡಿದೆ. ಮೂಡಿ ಏತ ನೀರಾವರಿ ಯೋಜನೆ ಇನ್ನೆರಡು ತಿಂಗಳಲ್ಲಿ ಪೂರ್ಣಗೊಳ್ಳುವ ಎಲ್ಲ ಲಕ್ಷಣಗಳಿರುವುದು ರೈತರಲ್ಲಿ ಸಂತಸಕ್ಕೆ ಕಾರಣವಾಗಿದೆ.

ರಾಜ್ಯದಲ್ಲಿ ಬಿ.ಎಸ್‌. ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸುತ್ತಿದ್ದಂತೆ ನೀರಾವರಿ ಯೋಜನೆಗಳಿಗೆ ಪ್ರಥಮ ಆದ್ಯತೆ ನೀಡುವುದಾಗಿ ತಿಳಿಸಿದ್ದರು. ಅಂತೆಯೇ, ಮೂಡಿ ಮತ್ತು ಮೂಗೂರು ಏತ ನೀರಾವರಿ ಯೋಜನೆಗಳಿಗೆ ಅನುದಾನವೂ ಬಿಡುಗಡೆಗೊಳಿಸಿ, ಕಳೆದ ವರ್ಷ ಫೆಬ್ರವರಿಯಲ್ಲಿ ಶಂಕುಸ್ಥಾಪನೆ ಸಹ ನೆರವೇರಿಸಿದ್ದರು.

ಏನಿದು ನೀರಾವರಿ ಯೋಜನೆ?: ಮೂಗೂರು ಏತ ನೀರಾವರಿ ಯೋಜನೆ 105 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗುತ್ತಿದ್ದು, 0.328 ಟಿಎಂಸಿ ನೀರನ್ನು ಬಳಸಿಕೊಂಡು ಸಣ್ಣ ನೀರಾವರಿ ಇಲಾಖೆ ವ್ಯಾಪ್ತಿಯ 16 ಮತ್ತು ಜಿಪಂ ವ್ಯಾಪ್ತಿಯ 15 ಕೆರೆಗಳಿಗೆ ನೀರನ್ನು ಹರಿಸಲಾಗುವುದು. ಇದು ಸಹ ದಿನದ 22 ಗಂಟೆಯಂತೆ ವರ್ಷದ 90 ದಿನಗಳು ಮಾತ್ರ ಕಾರ್ಯ ನಿರ್ವಹಿಸಲಿದೆ.

ಏತ ನೀರಾವರಿ ಯೋಜನೆ ನಿರ್ಮಾಣ ಪಡೆದ ಗುತ್ತಿಗೆ ಪಡೆದ ಕಂಪೆನಿಗೆ 24 ತಿಂಗಳುಗಳಲ್ಲಿ ಪೂರ್ಣಗೊಳಿಸುವಂತೆ ಕರಾರು ಒಪ್ಪಂದ ಮಾಡಿಕೊಳ್ಳಲಾಗಿತ್ತು. ಆದರೆ, ಇನ್ನೂ 9 ತಿಂಗಳು ಬಾಕಿ ಇರುವಂತೆ ಯೋಜನೆಯು ಪೂರ್ಣಗೊಂಡಿದೆ. ಪ್ರಾಯೋಗಿಕವಾಗಿ ಕೆರೆಗಳಿಗೆ ನೀರು ಹರಿಸಲಾಗಿದ್ದು, ಯಶಸ್ವಿಯೂ ಆಗಿದೆ.

ಮೂಡಿ ಏತ ನೀರಾವರಿ ಯೋಜನೆ 285 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗುತ್ತಿದ್ದು, 0.52 ಟಿಎಂಸಿ ನೀರನ್ನು ಬಳಸಿಕೊಂಡು 2380 ಎಚ್‌ ಪಿಯ ಮೂರು ಪಂಪ್‌ಗ್ಳ ಮೂಲಕ 66 ಕೆರೆಗಳಿಗೆ  ನೀರುಣಿಸುವುದಾಗಿದೆ. ಮೂಡಿ ಯೋಜನೆಯು ಸಹ ಶೇ. 75ರಷ್ಟು ಪೂರ್ಣಗೊಂಡಿದ್ದು, ಇನ್ನೆರಡು ತಿಂಗಳಲ್ಲಿ ಕೆರೆಗಳಿಗೆ ನೀರು ಹರಿಯಲಿದೆ. ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರ ಅಭಿವೃದ್ಧಿ ಪರ ಚಿಂತನೆ ಹಾಗೂ ಸಂಸದ ಬಿ.ವೈ. ರಾಘವೇಂದ್ರ ಅವರ ಮುತುವರ್ಜಿಯಿಂದ ಯೋಜನೆಗಳು ಸಾಕಾರಗೊಳ್ಳುತ್ತಿವೆ.

ಸಮುದ್ರ ಸೇರುವ ನೀರಿನ ಬಳಕೆ: ಮಳೆಗಾಲದ ಸಂದರ್ಭದಲ್ಲಿ ತಾಲೂಕಿನ ವರದಾ ಹಾಗೂ ದಂಡಾವತಿ ನದಿಗಳ ಸಾಕಷ್ಟು ಪ್ರಮಾಣದ ನೀರು ಕೃಷ್ಣಾ ನದಿಯ ಮೂಲಕ ಸಮುದ್ರ ಸೇರುತ್ತದೆ. ಇದನ್ನು ಸದ್ಬಳಕೆ ಮಾಡಿಕೊಂಡು ಕೆರೆಗಳಿಗೆ ನೀರು ತುಂಬಿಸುವ ಮಹತ್ತರ ಯೋಜನೆಯಾಗಿದೆ. ಇದರಿಂದ ಕೆರೆಯ ಸುತ್ತಲಿನ ಜಮೀನುಗಳಿಗೆ ಅನುಕೂಲವಾಗಲಿದ್ದು, ಅಂತರ್ಜಲ ವೃದ್ಧಿಗೆ ಸಹಕಾರಿಯಾಗಲಿದೆ. ಏತ ನೀರಾವರಿ ಯೋಜನೆಯಿಂದ ತಾಲೂಕಿನ 97 ಕೆರೆಗಳಿಗೆ ಜೀವಕಳೆ ತುಂಬಲಿದೆ.

ಬಂಗಾರಪ್ಪರಿಂದ ಬಿಎಸ್‌ವೈವರೆಗೆ: ಕ್ಷೇತ್ರ ದವರೇ ಆದ ದಿ. ಎಸ್‌. ಬಂಗಾರಪ್ಪ ಅವರು 1991-92ರಲ್ಲಿ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ತಾಲೂಕನ್ನು ಸಂಪೂರ್ಣ ನೀರಾವರಿ ಮಾಡುವುದಾಗಿ ಘೋಷಿಸಿದ್ದರು. ಅಂತೆಯೇ ಹಲವಾರು ಯೋಜನೆಗಳಿಗೆ ಮುನ್ನುಡಿ ಬರೆದಿದ್ದರು.

ಇವುಗಳಲ್ಲಿ ಮೂಡಿ, ಮೂಗೂರು, ಕಚವಿ ಏತ ನೀರಾವರಿ ಯೋಜನೆಯೂ ಒಳಗೊಂಡಿತ್ತು.  ಯೋಜನೆಗಾಗಿ ಅನುದಾನ ಬಿಡುಗಡೆ ಮಾಡಿ, ಯೋಜನೆಗೆ ಬೇಕಾದ ಭೂಮಿಯನ್ನು ವಶಪಡಿಸಿಕೊಂಡು ಸಂತ್ರಸ್ತರಿಗೆ ಪರಿಹಾರ ಕೂಡ ನೀಡಲಾಗಿತ್ತು. ಆದರೆ, ಘೋಷಣೆಯಾದ ಯೋಜನೆಗೆ ಅಂತಿಮ ಮುಂದ್ರೆ ಒತ್ತಲು ಬಿ.ಎಸ್‌. ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗುವವರೆಗೂ ಕಾಯುವಂತಾಯಿತು. ಇದೀಗ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರೇ ಕಳೆದ ವರ್ಷ ಶಂಕುಸ್ಥಾಪನೆ ನೆರವೇರಿಸಿ, ಇದೀಗ ಮೂಗೂರು ಯೋಜನೆಯ ಉದ್ಘಾಟನೆ ಸಹ ಮಾಡುತ್ತಿರುವುದರಿಂದ ರೈತರಲ್ಲಿ ಸಂತಸ ಇಮ್ಮಡಿಗೊಂಡಿದೆ.

ಟಾಪ್ ನ್ಯೂಸ್

ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ

ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ

Munirtahana–Egg

Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ

2

Living together; ವಿಚ್ಛೇದನ ತಡೆಯಲು ಲಿವಿಂಗ್‌ ಟುಗೆದರ್‌ ಸಹಕಾರಿಯೇ?

Uttarakhand: ಕಂದಕಕ್ಕೆ ಬಿದ್ದ ಬಸ್‌ ನಾಲ್ವರು ಮೃ*ತ್ಯು; 20ಕ್ಕೂ ಅಧಿಕ ಮಂದಿಗೆ ಗಾಯ

Uttarakhand: ಕಂದಕಕ್ಕೆ ಬಿದ್ದ ಬಸ್‌ ನಾಲ್ವರು ಮೃ*ತ್ಯು; 20ಕ್ಕೂ ಅಧಿಕ ಮಂದಿಗೆ ಗಾಯ

ಗಾಂಧಿ ಭಾರತ್‌ ಕಾರ್ಯಕ್ರಮದ ಬಗ್ಗೆ ಶೆಟ್ಟರ್‌ ಅಪಸ್ವರ ತೆಗೆದಿದ್ದು ದುರ್ದೈವ – ಎಚ್ ಕೆ ಪಾಟೀಲ

ಗಾಂಧಿ ಭಾರತ್‌ ಕಾರ್ಯಕ್ರಮದ ಬಗ್ಗೆ ಶೆಟ್ಟರ್‌ ಅಪಸ್ವರ ತೆಗೆದಿದ್ದು ದುರ್ದೈವ – ಎಚ್ ಕೆ ಪಾಟೀಲ

YearEnder 2024: ಪ್ರಧಾನಿ ಮೋದಿ ಅವರ ರಾಜಕೀಯ ಜೀವನದಲ್ಲಿ 2024 ಯಾಕೆ ಮಹತ್ವದ ವರ್ಷವಾಗಿದೆ?

YearEnder 2024: ಪ್ರಧಾನಿ ಮೋದಿ ಅವರ ರಾಜಕೀಯ ಜೀವನದಲ್ಲಿ 2024 ಯಾಕೆ ಮಹತ್ವದ ವರ್ಷವಾಗಿದೆ?

Kollywood: ಕಾರ್ತಿಕ್‌ ಸುಬ್ಬರಾಜ್‌ ಚಿತ್ರಕ್ಕೆ ʼರೆಟ್ರೋʼ ಆದ ಸೂರ್ಯ; ಮಸ್ತ್‌ ಆಗಿದೆ ಮಾಸ್

Kollywood: ಕಾರ್ತಿಕ್‌ ಸುಬ್ಬರಾಜ್‌ ಚಿತ್ರಕ್ಕೆ ʼರೆಟ್ರೋʼ ಆದ ಸೂರ್ಯ; ಮಸ್ತ್‌ ಆಗಿದೆ ಮಾಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Madikeri: ಹುಲಿ ದಾಳಿ; ವ್ಯಕ್ತಿಗೆ ಗಂಭೀರ ಗಾಯ

Madikeri: ಹುಲಿ ದಾಳಿ; ವ್ಯಕ್ತಿಗೆ ಗಂಭೀರ ಗಾಯ

Munirtahana–Egg

Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ

ಗಾಂಧಿ ಭಾರತ್‌ ಕಾರ್ಯಕ್ರಮದ ಬಗ್ಗೆ ಶೆಟ್ಟರ್‌ ಅಪಸ್ವರ ತೆಗೆದಿದ್ದು ದುರ್ದೈವ – ಎಚ್ ಕೆ ಪಾಟೀಲ

ಗಾಂಧಿ ಭಾರತ್‌ ಕಾರ್ಯಕ್ರಮದ ಬಗ್ಗೆ ಶೆಟ್ಟರ್‌ ಅಪಸ್ವರ ತೆಗೆದಿದ್ದು ದುರ್ದೈವ – ಎಚ್ ಕೆ ಪಾಟೀಲ

ಬೆಳೆವಿಮೆ ಸಿಗದೆ ಕೃಷಿಕರ ಪರದಾಟ: ಅಡಕೆ ಬೆಳೆಗಾರರ ಸಂಕಷ್ಟಕ್ಕೆ ಸ್ಪಂದಿಸದ ಸರ್ಕಾರ

ಬೆಳೆವಿಮೆ ಸಿಗದೆ ಕೃಷಿಕರ ಪರದಾಟ: ಅಡಕೆ ಬೆಳೆಗಾರರ ಸಂಕಷ್ಟಕ್ಕೆ ಸ್ಪಂದಿಸದ ಸರ್ಕಾರ

15-dk

Congress ಅಧಿವೇಶನದ ಶತಮಾನೋತ್ಸವ ಕಾರ್ಯಕ್ರಮ ದೇಶದ ಇತಿಹಾಸದ ಒಂದು ಐತಿಹಾಸಿಕ ಕಾರ್ಯಕ್ರಮ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ

ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ

Madikeri: ಹುಲಿ ದಾಳಿ; ವ್ಯಕ್ತಿಗೆ ಗಂಭೀರ ಗಾಯ

Madikeri: ಹುಲಿ ದಾಳಿ; ವ್ಯಕ್ತಿಗೆ ಗಂಭೀರ ಗಾಯ

Munirtahana–Egg

Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ

2

Living together; ವಿಚ್ಛೇದನ ತಡೆಯಲು ಲಿವಿಂಗ್‌ ಟುಗೆದರ್‌ ಸಹಕಾರಿಯೇ?

Uttarakhand: ಕಂದಕಕ್ಕೆ ಬಿದ್ದ ಬಸ್‌ ನಾಲ್ವರು ಮೃ*ತ್ಯು; 20ಕ್ಕೂ ಅಧಿಕ ಮಂದಿಗೆ ಗಾಯ

Uttarakhand: ಕಂದಕಕ್ಕೆ ಬಿದ್ದ ಬಸ್‌ ನಾಲ್ವರು ಮೃ*ತ್ಯು; 20ಕ್ಕೂ ಅಧಿಕ ಮಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.