ಸಕ್ರೆಬೈಲು ಬಿಡಾರಕ್ಕೆ ಬಂತು ಮುರುಘಾಮಠದ ಕನೇನಿ
Team Udayavani, Mar 6, 2021, 7:01 PM IST
ಶಿವಮೊಗ್ಗ: ತುಂಗಾ ತೀರದ ಪ್ರಸಿದ್ಧ ಆನೆ ಬಿಡಾರಕ್ಕೆ ಚಿತ್ರದುರ್ಗದ ಮುರುಘಾಮಠದ ಹೆಣ್ಣಾನೆ ಹನಿಮೂನ್‌ಗೆ ಬಂದಿದೆ. ಕನೇನಿ (25) ಹನಿಮೂನ್‌ಗೆ ಬಂದಿರುವ ಆನೆ. ಮಠದಲ್ಲಿ ಇದ್ದ ಆನೆಗೆ ಪ್ರಾಪ್ತ ವಯಸ್ಸಾಗಿದ್ದು, ಸಂತಾನವೃದ್ಧಿಯ ಸಮಯವಾಗಿದೆ. ಹೀಗಾಗಿ ಆಡಳಿತ ಮಂಡಳಿ ನಿಶ್ಚಯದಂತೆ ಕನೇನಿಯನ್ನು ಸಕ್ರೆಬೈಲು ಆನೆ ಬಿಡಾರಕ್ಕೆ ಕರೆ ತರಲಾಗಿದೆ.
ಮಠದ ಆಡಳಿತ ಮಂಡಳಿ ಈ ಬಗ್ಗೆ ಅರಣ್ಯ ಇಲಾಖೆ ವನ್ಯಜೀವಿ ವಿಭಾಗಕ್ಕೆ ಮನವಿ ಸಲ್ಲಿಸಿತ್ತು. ಇಲಾಖೆ ಕೂಡಾ ಕನೇನಿ ಹನಿಮೂನ್‌ಗೆ ಗ್ರೀನ್‌ಸಿಗ್ನಲ್ ನೀಡಿದೆ. ಅನುಮತಿ ಪಡೆದ ಮುರುಘಾಮಠದ ಆಡಳಿತ ಮಂಡಳಿಯವರು ಕನೇನಿಯನ್ನು ಸಂಭ್ರಮದಿಂದ ಸಕ್ರೆಬೈಲ್ ಆನೆ ಬಿಡಾರಕ್ಕೆ ಕಳುಹಿಸಿಕೊಟ್ಟಿದ್ದಾರೆ. ಮೂರರಿಂದ ನಾಲ್ಕು ತಿಂಗಳ ಅವ ಧಿಯಲ್ಲಿ ಆನೆ ಬಿಡಾರದಲ್ಲಿ ವಾಸ್ತವ್ಯ ಹೂಡಲಿರುವ ಕನೇನಿ ಇಲ್ಲಿ ತನ್ನ ಸಂಗಾತಿಯನ್ನು ಆಯ್ಕೆ ಮಾಡಿಕೊಂಡು ಇಲ್ಲಿಯ ವಾತಾವರಣಕ್ಕೆ ಹೊಂದಾಣಿಕೆ ಆಗಬೇಕಿದೆ. ಮಠದಲ್ಲಿ ಬುಧವಾರ ನಡೆದ ಕಾರ್ಯಕ್ರಮದಲ್ಲಿ ಡಾ. ಶಿವಮೂರ್ತಿ ಮುರುಘಾ ಶರಣರು ಕನೇನಿಗೆ ಬಾಳೆಹಣ್ಣು, ಬೆಲ್ಲ, ಕಬ್ಬನ್ನು ತಿನ್ನಿಸುವುದರ ಮೂಲಕ ಬೀಳ್ಕೊಟ್ಟರು.
ಈ ಸಂದರ್ಭದಲ್ಲಿ ಸಹಾಯಕ ಅರಣ್ಯಾಧಿಕಾರಿ ಮಂಜುನಾಥ್, ಶಿವಮೊಗ್ಗ ವನ್ಯಜೀವಿ ವಿಭಾಗದ ವೈದ್ಯರಾದ ಡಾ| ವಿನಯ್, ಪಶುಸಂಗೋಪನಾ ಇಲಾಖೆಯ ಉಪನಿರ್ದೇಶಕ ಡಾ| ಕೃಷ್ಣಪ್ಪ, ಡಾ| ಪ್ರಸನ್ನಕುಮಾರ್, ಡಾ| ಕುಮಾರ್, ಡಾ| ತಿಪ್ಪೇಸ್ವಾಮಿ, ಎಸ್.ಜೆ.ಎಂ. ವಿದ್ಯಾಪೀಠದ ಕಾರ್ಯದರ್ಶಿ ಎ.ಜೆ. ಪರಮಶಿವಯ್ಯ, ಪಟೇಲ್ ಶಿವಕುಮಾರ್ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಎಂಜಿಎಂ ವಿದ್ಯೆ ಎಂಬ ಅಮೃತ ನೀಡುತ್ತಿದೆ: ಶ್ರೀ ವಿದ್ಯಾಸಾಗರ ತೀರ್ಥ ಸ್ವಾಮೀಜಿ
Guarantee Scheme: ಸರಕಾರದ ಖಜಾನೆ ತುಂಬಲು ಅನಧಿಕೃತ ಲೇಔಟ್ ಸಕ್ರಮಗೊಳಿಸಲಿ:ಜನಾರ್ದನ ರೆಡ್ಡಿ
Madikeri: ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ
Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್ ಜಾರಕಿಹೊಳಿ
Bengaluru: ಕಂಕಣ ಕಾಲ-2 ಅರಮನೆ ಮೈದಾನದಲ್ಲೂ ಬಜೆಟ್ ವಿವಾಹ ಸಾಧ್ಯ!
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
ಬಾಲ್ಯದ ಮಧುರ ನೆನೆಪಿನೊಳಗೆ…: ಆ ಕಾಲ ಹೀಗಿತ್ತು!
Udupi: ಎಂಜಿಎಂ ವಿದ್ಯೆ ಎಂಬ ಅಮೃತ ನೀಡುತ್ತಿದೆ: ಶ್ರೀ ವಿದ್ಯಾಸಾಗರ ತೀರ್ಥ ಸ್ವಾಮೀಜಿ
Champions Trophy; ಭಾರತ ತಂಡ ಪಾಕಿಸ್ಥಾನಕ್ಕೆ ತೆರಳುವುದು ಅಸಂಭವ: ದೃಢಪಡಿಸಿದ MEA
Guarantee Scheme: ಸರಕಾರದ ಖಜಾನೆ ತುಂಬಲು ಅನಧಿಕೃತ ಲೇಔಟ್ ಸಕ್ರಮಗೊಳಿಸಲಿ:ಜನಾರ್ದನ ರೆಡ್ಡಿ
Madikeri: ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.