ಸಂಗೀತಕ್ಕಿದೆ ಖನ್ನತೆ ದೂರ ಮಾಡುವ ಶಕ್ತಿ: ಉಮೇಶ್
Team Udayavani, Nov 2, 2021, 1:40 PM IST
ಶಿವಮೊಗ್ಗ: ಸಂಗೀತದಿಂದ ಖನ್ನತೆ ದೂರವಾಗಿ ಮನಸ್ಸು ಸದಾ ಉತ್ಸಾಹದಿಂದ ಇರಲಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಉಮೇಶ್ ಹಾಲಾಡಿ ಹೇಳಿದರು.
ನಗರದ ಮಥುರಾ ಪ್ಯಾರಾಡೈಸ್‌ನಲ್ಲಿ “ಭಾವಗಾನ’ ಸಂಸ್ಥೆಯ ಐದನೇ ವಾರ್ಷಿಕೋತ್ಸವ ಹಾಗೂ ಭಾವಗೀತೆ ಸ್ಪರ್ಧೆಗೆ ಚಾಲನೆ ನೀಡಿ ಅವರು ಮಾತನಾಡಿದರು. ಪ್ರಸ್ತುತ ದಿನಗಳಲ್ಲಿ ಪಾಶ್ಚಿಮಾತ್ಯ ಸಂಗೀತದ ಅಬ್ಬರದಿಂದ ಮೂಲ ಸಂಗೀತಕ್ಕೆ ಧಕ್ಕೆಯಾಗಿದೆ. ಮಕ್ಕಳಿಗೆ ಬಾಲ್ಯದಲ್ಲಿಯೇ ಸಂಗೀತದ ಅಭ್ಯಾಸ ಮಾಡಿಸಬೇಕು. ಸಂಗೀತ ಜ್ಞಾನದ ಜತೆಯಲ್ಲಿ ಮಕ್ಕಳು ಉತ್ತಮ ಗಾಯಕರಾಗಿ ರೂಪುಗೊಳ್ಳುತ್ತಾರೆ ಎಂದರು.
ಸಂಗೀತ ಕಲಿಕೆಯಿಂದ ಉತ್ತಮ ಸಂಸ್ಕಾರಯುತ ಮೌಲ್ಯಗಳನ್ನು ಕಲಿಯಲು ಸಾಧ್ಯವಿದೆ. ಸಂಗೀತ ಸ್ಪರ್ಧೆಗಳಲ್ಲಿ ಭಾಗವಹಿಸುವುದರಿಂದ ಆತ್ಮವಿಶ್ವಾಸ ಹೆಚ್ಚುತ್ತದೆ. ಮಕ್ಕಳಿಗೆ ಸಂಗೀತದ ಬಗ್ಗೆ ಬಾಲ್ಯದಿಂದಲೇ ಆಸಕ್ತಿ ಮೂಡಿಸಬೇಕು ಎಂದರು.
ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ನಿಕಟಪೂರ್ವ ಅಧ್ಯಕ್ಷ ಡಿ.ಬಿ. ಶಂಕರಪ್ಪ ಮಾತನಾಡಿ, ಭಾವಗಾನ ಸಂಸ್ಥೆಯ ವಾಸುರವರ ಸಂಗೀತಸೇವೆ ಅಪಾರ. ಸಾಹಿತ್ಯ ಪರಿಷತ್‌ಗೆ ಅವರ ನಿಸ್ವಾರ್ಥ ಸೇವೆಅವೀಸ್ಮರಣೀಯ. ಅವರ ಸುಗಮ ಸಂಗೀತ ಗರಡಿಯಲ್ಲಿ ನೂರಾರುಜನ ಉತ್ತಮ ಗಾಯಕರಾಗಿ ಹೊರಹೊಮ್ಮಿದ್ದಾರೆ. ಅವರ ಕುಟುಂಬ ಸಂಗೀತ ಸೇವೆಯಲ್ಲಿ ತೊಡಗಿಸಿಕೊಂಡಿದೆ ಎಂದರು.
ಭದ್ರಾವತಿ ವಾಸು ಮಾತನಾಡಿ, ಸಂಗೀತ ಕ್ಷೇತ್ರದಲ್ಲಿ ಹೆಚ್ಚಿನ ಸೇವೆ ಸಲ್ಲಿಸಲು ಎಲ್ಲರ ಸಹಕಾರ ಮುಖ್ಯ ಕಾರಣ. ಇನ್ನೂ ಹೆಚ್ಚಿನವಿದ್ಯಾರ್ಥಿಗಳನ್ನು ಸಂಗೀತ ಕ್ಷೇತ್ರಕ್ಕೆ ನೀಡುವ ವಿಶ್ವಾಸವಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ನಟಸಾರ್ವಭೌಮ ಪುನೀತ್ ರಾಜ್‌ಕುಮಾರ್ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು. ಸಂಗೀತ ಸ್ಪರ್ಧೆಯಲ್ಲಿ 25ಕ್ಕೂ ಹೆಚ್ಚು ಸ್ಪರ್ಧಿಗಳು ಭಾಗವಹಿಸಿದ್ದರು. ಗಾಯಕ, ನಿರೂಪಕ ಜಿ.ವಿಜಯ್‌ಕುಮಾರ್, ಭುಜಂಗಪ್ಪ, ವಿಜಯಾ ಸತೀಶ್,ಭಾಗ್ಯ, ನಾಗರಾಜ್, ಗಂಗಾಧರ್, ಆದ್ಯ ಹಾಗೂ ಪದಾಧಿ ಕಾರಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shiralakoppa: ಹೋರಿ ತಿವಿದು ಬೈಕ್ ಸವಾರ ಸಾವು
Sagara: ಟ್ರಾಫಿಕ್ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು
Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ
Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.