ಸಿದ್ದಾಪುರದಲ್ಲಿ ಮುಸ್ಲಿಮರಿಂದ ಅದ್ದೂರಿ ಗಣೇಶೋತ್ಸವ
Team Udayavani, Sep 2, 2022, 6:55 AM IST
ಸಾಂದರ್ಭಿಕ ಚಿತ್ರ
ಸಿದ್ದಾಪುರ: ಇಲ್ಲಿಗೆ ಸಮೀಪದ ಶ್ರೀರಾಮ ನಗರದಲ್ಲಿ ಮುಸ್ಲಿಂ ಸಮುದಾಯದವರು ಅದ್ದೂರಿ ಯಾಗಿ ಗಣೇಶ ಚತುರ್ಥಿಯನ್ನು ಆಚರಿಸುತ್ತಿದ್ದು, ಆ ಮೂಲಕ ನಾವೆಲ್ಲರೂ ಒಂದೇ ಎನ್ನುವ ಸಂದೇಶ ಸಾರಿ ಸಮಾಜಕ್ಕೆ ಮಾದರಿಯಾಗಿದ್ದಾರೆ.
ಇಲ್ಲಿ ಮುಸ್ಲಿಮರು 13 ವರ್ಷಗಳಿಂದ ಗಣೇಶನನ್ನು ಪ್ರತಿಷ್ಠಾಪನೆ ಮಾಡುತ್ತಿದ್ದಾರೆ. ಅದರಲ್ಲೂ ವಿಶೇಷವಾಗಿ ಗ್ಯಾರೇಜ್‌ಗಳಲ್ಲಿ ಕೆಲಸ ಮಾಡುವ ಕೂಲಿ ಕಾರ್ಮಿಕರು, ಪಂಕ್ಚರ್ ಅಂಗಡಿ, ಹಾರ್ಡ್‌ವೇರ್ ಶಾಪ್, ಎಲೆಕ್ಟ್ರಿಕ್ ಅಂಗಡಿಯವರು ಸಹಿತ ಸುಮಾರು 40 ಮಂದಿ ಮುಸ್ಲಿಂ ಯುವಕರು, ಹಿರಿಯರು ಸೇರಿ ಗಣೇಶ ಹಬ್ಬವನ್ನು ಭರ್ಜರಿಯಾಗಿ ಆಚರಿಸುತ್ತಾರೆ. ಇವರು ತಮ್ಮ ತಮ್ಮಲ್ಲಿಯೇ ಹಣ ಸಂಗ್ರಹಿಸಿಕೊಂಡು 5 ಅಥವಾ 9 ದಿನಗಳ ವರೆಗೆ ನಿತ್ಯವೂ ಹಿಂದೂ ಸಂಪ್ರದಾಯದಂತೆ ಗಣೇಶನಿಗೆ ಪೂಜೆ ಸಲ್ಲಿಸಲಾಗುತ್ತದೆ.
ಎಲ್ಲ ಧರ್ಮದವರಿಗೆ ಇರುವ ದೇವರು ಒಬ್ಬನೇ. ಆದರೆ, ಆತನನ್ನು ಕರೆಯುವ ಹೆಸರುಗಳು ಮಾತ್ರ ಬೇರೆ ಬೇರೆಯಾಗಿವೆ. ಮನುಷ್ಯರು ಮೊದಲು ಮಾನವೀಯತೆ ಮರೆತು ಬಾಳುವುದಕ್ಕಿಂತ ಅರಿತು ಬಾಳಿದರೆ ಬಾಳಿಗೊಂದು ಅರ್ಥ ಬರುತ್ತದೆ. ಗಣಪನೆಂದರೆ ನಮಗೂ ಇಷ್ಟ. ಅದೇ ರೀತಿ ಮೊಹರಂ, ರಂಜಾನ್ ಎಂದರೆ ಹಿಂದೂಗಳು ಇಷ್ಟಪಡುತ್ತಾರೆ. ಗಣೇಶ ವಿಸರ್ಜನೆ ವೇಳೆ ಸಾಂಸ್ಕೃತಿಕ ಕಾರ್ಯಕ್ರಮಗಳು, ಅನ್ನ ಸಂತರ್ಪಣೆ ಸಹಿತ ವಿವಿಧ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ ಎಂದು ಸಂಘಟಕರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Belagavi: ಸಿ.ಟಿ ರವಿ ಹೇಳಿಕೆ ಪ್ರಕರಣ; ಕಣ್ಣೀರು ಹಾಕಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
Burhan Wani; ಬುರ್ಹಾನ್ ವಾನಿ ಅನುಚರ ಸೇರಿ 5 ಉಗ್ರರ ಎನ್‌ಕೌಂಟರ್
IED explodes: ನಕ್ಸಲರು ಇರಿಸಿದ್ದ ಐಇಡಿ ಸ್ಫೋಟ: ಮೂರು ಕರಡಿಗಳು ಸಾವು
Formula E race; ಫಾರ್ಮುಲಾ-ಇ ರೇಸ್ ಪ್ರಕರಣ: ಕೆಟಿಆರ್ ಮೇಲೆ ಎಸಿಬಿ ಎಫ್ಐಆರ್
GDP ಕುಸಿತ: ಆರ್ಥಿಕ ಹಿಂಜರಿತದತ್ತ ನ್ಯೂಜಿಲ್ಯಾಂಡ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.