ಹರ್ಷ ಹತ್ಯೆ ಪ್ರಕರಣ: ಶಿವಮೊಗ್ಗದಲ್ಲಿ ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಎನ್ ಐಎ ತಂಡ
Team Udayavani, Jun 30, 2022, 12:48 PM IST
ಶಿವಮೊಗ್ಗ: ರಾಜ್ಯದಲ್ಲಿ ಸಂಚಲನ ಮೂಡಿಸಿದ್ದ ಹರ್ಷ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ ಐಎ) ದ ಅಧಿಕಾರಿಗಳು ಇಂದು ಶಿವಮೊಗ್ಗ ಜಿಲ್ಲೆಯಲ್ಲಿ ಕ್ಷಿಪ್ರ ಕಾರ್ಯಾಚರಣೆ ನಡೆಸಿದರು.
ಶಿವಮೊಗ್ಗಕ್ಕೆ ನಿನ್ನೆ ರಾತ್ರಿ ಬಂದಿಳಿದಿದ್ದ ಎನ್ ಐಎ ಅಧಿಕಾರಿಗಳು ಇಂದು ಬೆಳಗ್ಗೆ ಶಿವಮೊಗ್ಗ ನಗರಾದ್ಯಂತ ಪರಿಶೀಲನೆ ನಡೆಸಿದರು. ನಾಲ್ಕು ರಾಜ್ಯಗಳ ಹಿರಿಯ ಅಧಿಕಾರಿಗಳಳು, ಜಿಲ್ಲೆಯ ಅಧಿಕಾರಿಗಳನ್ನೂ ಸೇರಿ ಒಟ್ಟು 90 ಅಧಿಕಾರಿಗಳ ತಂಡವು ಇಂದು ಬೆಳಗ್ಗೆ ಐದು ಗಂಟೆಗೆ ದಾಳಿ ಆರಂಭಿಸಿದೆ.
ಶಿವಮೊಗ್ಗ ಜಿಲ್ಲೆಯಲ್ಲಿ 18 ಕಡೆ ದಾಳಿ ನಡೆಸಲಾಗಿದೆ. ಹರ್ಷ ಪ್ರಕರಣದಲ್ಲಿ ಕೇಳಿ ಬಂದ ಆರೋಪಿಗಳ ಕುಟುಂಬದವರು, ಅವರ ಸಂಬಂಧಿಕರ ವಿಚಾರಣೆ ಮಾಡಲಾಗಿದೆ. ಹರ್ಷ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ ಐಎ ಅಧಿಕಾರಿಗಳು ಮಹತ್ವದ ಮಾಹಿತಿ ಕಲೆ ಹಾಕಿದ್ದಾರೆ.
ಇದನ್ನೂ ಓದಿ:ಕುಣಿಗಲ್: ಕೆಂಪೇಗೌಡರಿಗೆ ಅಪಮಾನವಾದ ಸ್ಥಳದಲ್ಲಿ ಪ್ರತಿಮೆ ನಿರ್ಮಾಣ: ಕೆಂಪೇಗೌಡ ಸೇನೆ ತಿರ್ಮಾನ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga; ಕಾಲುವೆಗೆ ಬಿದ್ದ ಕುದುರೆಯನ್ನು ರಕ್ಷಣೆ ಮಾಡಿದ ಅಗ್ನಿಶಾಮಕ ಸಿಬ್ಬಂದಿ
Shimoga: ತ್ಯಾವರೆಕೊಪ್ಪ ಧಾಮದಲ್ಲಿ ಮೃತಪಟ್ಟ ಹೆಣ್ಣು ಹುಲಿ ಅಂಜನಿ
Shimoga; ಮನೆಯಂಗಳದಿಂದ ನಾಯಿ ಹೊತ್ತೊಯ್ದ ಚಿರತೆ; ಸಿಸಿಕ್ಯಾಮರಾದಲ್ಲಿ ದೃಶ್ಯ ಸೆರೆ
Anandapura: ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ; ತಪ್ಪಿದ ಅನಾಹುತ
ಸಾಗರಕ್ಕೆ ಆಗಮಿಸಿದ ಡಾ.ನಾ.ಡಿಸೋಜಾ ಪಾರ್ಥಿವ ಶರೀರ; ಗಣ್ಯರು, ಅಧಿಕಾರಿಗಳಿಂದ ಅಂತಿಮ ದರ್ಶನ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.