Nyamathi: ಕೆಎಸ್‌ಆರ್‌ಟಿಸಿ ಬಸ್ – ಓಮ್ನಿ ಕಾರು ನಡುವೆ ಅಪಘಾತ; ಮೂವರ ದುರ್ಮರಣ
Team Udayavani, Apr 11, 2024, 2:15 PM IST
ಶಿವಮೊಗ್ಗ: ಕೆಎಸ್‌ಆರ್‌ಟಿಸಿ ಬಸ್ ಮತ್ತು ಓಮ್ನಿ ಕಾರು ಮಧ್ಯೆ ಭೀಕರ ಅಪಘಾತವಾದ ಘಟನೆ ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಚಿನ್ನಕಟ್ಟಿ ಗ್ರಾಮದ ಬಳಿ ಗುರುವಾರ ನಡೆದಿದೆ.
ಅಪಘಾತದಲ್ಲಿ ಮೂರು ಜನರು ಸಾವನ್ನಪ್ಪಿದ್ದಾರೆ. ಮೃತರನ್ನು ನಜುಂಡಪ್ಪ, ರಾಕೇಶ್, ದೇವರಾಜ್ ಎಂದು ಗುರುತಿಸಲಾಗಿದೆ. ಇವರು ಶಿವಮೊಗ್ಗ ಗ್ರಾಮಾಂತರ ತಾಲೂಕಿನ ಹರಮಘಟ್ಟ ಗ್ರಾಮದವರು ಎಂದು ವರದಿಯಾಗಿದೆ.
ಶಿಕಾರಿಪುರದ ಕಡೆಯಿಂದ ಬರುತ್ತಿದ್ದ ಕೆಎಸ್ಆರ್ಟಿಸಿ ಬಸ್ ಮತ್ತು ಶಿವಮೊಗ್ಗದ ಕಡೆಯಿಂದ ಹೊರಟಿದ್ದ ಕಾರಿನ ನಡುವೆ ಅಪಘಾತವಾಗಿದೆ.
ನ್ಯಾಮತಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಘಟನೆ ನಡೆದಿದೆ.