ಬೂತ್‌ಮಟ್ಟದಿಂದ ಪಕ್ಷ ಸಂಘಟಿಸಿ: ಕಾಗೋಡು
Team Udayavani, Sep 25, 2020, 7:41 PM IST
ರಿಪ್ಪನ್‌ಪೇಟೆ: ಮಹಿಳೆಯರಿಗೆ ತಂದೆಯ ಮನೆಯಲ್ಲಿಯೂ ಆಸ್ತಿಯಲ್ಲಿ ಹಕ್ಕು ಹೀಗೆ ಹಲವು ಜನಪರ ಕಾರ್ಯಗಳನ್ನು ಅನುಷ್ಠಾನಗೊಳಿಸಿದ ಏಕೈಕ ಪಕ್ಷ ಕಾಂಗ್ರೆಸ್ ಆಗಿದೆ ಎಂದು ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಹೇಳಿದರು.
ಪಟ್ಟಣದ ಶ್ರೀರಾಮಮಂದಿರದಲ್ಲಿ ಅಯೋಜಿಸಲಾಗಿದ್ದ ಹೋಬಳಿಮಟ್ಟದ ಗ್ರಾಪಂ ಚುನಾವಣೆಯ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಆಡಳಿತಾವಧಿಯಲ್ಲಿ ಗ್ರಾಮಾಂತರ ಪ್ರದೇಶದಲ್ಲಿನ ಮೂಲಭೂತ ಸಮಸ್ಯೆಗಳಿಗೆ ಸರ್ಕಾರದಿಂದ ಹೆಚ್ಚಿನ ಅನುದಾನ ನೀಡುವ ಮೂಲಕ ಅಭಿವೃದ್ಧಿಗೆ ಒತ್ತು ನೀಡಲಾಗಿದೆ. ಎನ್.ಅರ್.ಇ.ಜಿ. ಯೋಜನೆಯಡಿ ಸಾಕಷ್ಟು ಅಭಿವೃದ್ಧಿಗೆ ಅದ್ಯತೆ ಕಲ್ಪಿಸುವ ಮೂಲಕ ಉದ್ಯೋಗವಿಲ್ಲದ ನಿರುದ್ಯೋಗಿಗಳಿಗೆ ಉದ್ಯೋಗ ನೀಡಿದ ಕೀರ್ತಿ ಕಾಂಗ್ರೆಸ್‌ಗೆ ಸಲ್ಲಬೇಕು ಎಂದರು.
ಇದೀಗ ರಾಜ್ಯ ಸರ್ಕಾರ ಭೂ ಸುಧಾರಣೆ ಕಾಯ್ದೆಗೆ ಸುಗ್ರೀವಾಜ್ಞೆ ಹೊರಡಿಸುವುದರೊಂದಿಗೆ ಉಳ್ಳವರಿಗೆ ಭೂ ಮಿತಿ ಇಲ್ಲದೆ ಖರೀದಿಗೆ ಅವಕಾಶಕಲ್ಪಿಸಿರುವದನ್ನು ತೀವ್ರವಾಗಿ ಖಂಡಿಸಿ ಯಾವುದೇ ಕಾರಣಕ್ಕೂ ಈ ಸರ್ಕಾರದ ಸುಗ್ರೀವಾಜ್ಞೆ ನಿರ್ಧಾರವನ್ನು ರದ್ದುಗೊಳಿಸುವವರೆಗೂ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದರು.
ಹೊಸನಗರ ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಜಿ. ನಾಗರಾಜ್ ಅಧ್ಯಕ್ಷತೆ ವಹಿಸಿದ್ದರು. ಜಿಪಂ ಸದಸ್ಯ ಕಲಗೋಡು ರತ್ನಾಕರ್, ಶ್ವೇತಾ, ತಾಪಂ ಸದಸ್ಯ ಎನ್. ಚಂದ್ರೇಶ್, ಮುಖಂಡರಾ ಡಾ| ಅಬೂಬಕರ್, ಕೊಳವಳ್ಳಿ ಎಂ. ರಾಜೇಶ್, ಎಪಿಎಂಸಿ ಮಾಜಿ ಅಧ್ಯಕ್ಷ ಎಚ್.ವಿ. ಈಶ್ವರಪ್ಪ ಗೌಡ, ರಾಮಚಂದ್ರ, ಡಿ.ಈ. ಮಧುಸೂದನ್,ಉಭೇದುಲ್ಲಾ ಷರೀಫ್, ಅಶೀಫ್, ಎಂ.ಡಿ. ಇಂದ್ರಮ್ಮ, ಗೌರಮ್ಮ, ಕಲಾವತಿ, ರಮೇಶ್, ಖಲೀಲ್ ಷರೀಫ್, ಗಿರಿಜ ಎಂ.ನಾಯ್ಕ, ಧನಲಕ್ಷ್ಮೀ,ಇನ್ನಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.