ಮೆಸ್ಕಾಂ ಇಲಾಖಾಧಿಕಾರಿಗಳ ವಿರುದ್ಧ ಆಕ್ರೋಶ
Team Udayavani, Jul 10, 2021, 10:59 AM IST
ಸೊರಬ: ಗುತ್ತಿಗೆದಾರರ ಹಿತ ಕಾಯುವ ದೃಷ್ಟಿಯಿಂದ ಪಿಡಬ್ಲ್ಯುಡಿ ಅಧಿಕಾರಿಗಳ ವಿರುದ್ಧ ಸಾರ್ವಜನಿಕರನ್ನು ಎತ್ತಿ ಕಟ್ಟಲು ಮುಂದಾಗಿರುವ ಮೆಸ್ಕಾಂ ಇಲಾಖೆಯ ಅಧಿಕಾರಿಗಳ ಕ್ರಮ ಖಂಡನೀಯ. ಅಂತಹ ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸುವಂತೆ ಶಾಸಕ ಎಸ್. ಕುಮಾರ್ ಬಂಗಾರಪ್ಪ ತಾಕೀತು ಮಾಡಿದರು.
ಪಟ್ಟಣದ ರಂಗಮಂದಿರದಲ್ಲಿ ಶುಕ್ರವಾರ ನಡೆದ ತ್ತೈಮಾಸಿಕ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸಭೆ ಆರಂಭವಾಗುತ್ತಿದ್ದಂತೆ ಪಿಡಬ್ಲ್ಯುಡಿ ಎಇಇ ಉಮಾನಾಯ್ಕ ಮಾತನಾಡಿ, ಆನವಟ್ಟಿ ಮೆಸ್ಕಾಂ ಉಪ ವಿಭಾಗ ವ್ಯಾಪ್ತಿಗೆ ಒಳಪಡುವ ಕುಪ್ಪಗಡ್ಡೆ ಶಾಖೆಯ ಉದ್ರಿಯಿಂದ ಕುಪ್ಪಗಡ್ಡೆ ಮಾರ್ಗವಾಗಿ ಕುಂಬ್ರಿಗೆ 11 ಕೆವಿ ಮಾರ್ಗದಲ್ಲಿ ದ್ವಿಪ್ರತಿ ಮಾರ್ಗ ಕಾಮಗಾರಿ ಸಂದರ್ಭದಲ್ಲಿ ಪಿಡಬುÉÂಡಿ ಇಲಾಖೆಯ ವ್ಯಾಪ್ತಿಗೊಳುವ ರಸ್ತೆಯ ಬದಿಯಲ್ಲಿಯೇ ಕಂಬಗಳನ್ನು ನಿರ್ಮಿಸಿ, ಸಾರ್ವಜನಿಕರಿಗೆ ತೊಂದರೆ ನೀಡಲಾಗುತ್ತಿದೆ. ಜೊತೆಗೆ ಪಿಡಬ್ಲ್ಯುಡಿ ಇಲಾಖೆಯ ಅನುಮತಿ ಸಹ ಪಡೆಯದೆ ಬೇಕಾಬಿಟ್ಟಿ ಕಾಮಗಾರಿ ನಡೆಸಲಾಗುತ್ತಿದೆ. ಮೆಸ್ಕಾಂ ಅಧಿಕಾರಿಗಳು ಸಾರ್ವಜನಿಕರಿಂದ ಪ್ರತಿಭಟನೆ ನಡೆಸುವುದಾಗಿ ಬೆದರಿಕೆ ಹಾಕುತ್ತಿದ್ದಾರೆ ಎಂದು ಸಭೆಯ ಗಮನಕ್ಕೆ ತಂದರು.
ಪ್ರತಿಕ್ರಿಯಿಸಿದ ಶಾಸಕರು, ಇಲಾಖೆಗಳ ನಡುವೆ ಸಮನ್ವಯತೆ ಕಾಯ್ದುಕೊಳ್ಳುವ ಬದಲು ಸಾರ್ವಜನಿಕರಿಂದ ಪ್ರತಿಭಟನೆ ನಡೆಸಲಾಗುವುದು ಎಂದು ನೊಟೀಸ್ ನೀಡಿರುವ ಮೆಸ್ಕಾಂ ಅಧಿಕಾರಿಗಳ ಕಾರ್ಯವೈಖರಿ ಖಂಡನೀಯ. ಗುತ್ತಿಗೆದಾರರ ಹಿತ ಕಾಯುವ ದುರುದ್ದೇಶದಿಂದ ಸರ್ಕಾರ ಮತ್ತು ಜನಪ್ರತಿನಿಧಿಗಳ ಸೂಚನೆಯನ್ನು ಧಿಕ್ಕರಿಸಲಾಗಿದೆ. ಕೂಡಲೇ ಆ ಪ್ರದೇಶದ ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸಬೇಕು ಎಂದು ಸೂಚಿಸಿದರು.
ಸಂಬಂಧಿಸಿದ ಕಾಮಗಾರಿಗೆ ಬಿಲ್ ಪಾವತಿಸದಂತೆ ಮೇಲಧಿಕಾರಿಗಳಿಗೆ ದೂರವಾಣಿ ಕರೆ ಮೂಲಕ ತಿಳಿಸುವ ಜೊತೆಗೆ ಆನವಟ್ಟಿ ಮೆಸ್ಕಾಂ ಎಇಇ ಮಂಜಪ್ಪ ವಿರುದ್ಧ ಕಿಡಿಕಾರಿದರು.
ತಾಪಂ ಇಒ ಹಾಗೂ ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಕೆ.ಜಿ. ಕುಮಾರ್ ಮಾತನಾಡಿ, ಮುಂಗಾರು ಹಂಗಾಮಿನಲ್ಲಿ ಬಿತ್ತನೆ ಕಾರ್ಯಕ್ಕೆ ವಾಡಿಕೆ ಮಳೆಗಿಂತ ಶೇ. 23ರಷ್ಟು ಕಡಿಮೆ ಪ್ರಮಾಣದಲ್ಲಿ ಮಳೆಯಾಗಿದೆ. 22700 ಹೆಕ್ಟೇರ್ ಪ್ರದೇಶದಲ್ಲಿ ಭತ್ತ ಬಿತ್ತನೆಯ ಗುರಿ ಹೊಂದಲಾಗಿದ್ದು, 3550 ಹೆಕ್ಟೇರ್ ಪ್ರದೇಶದಲ್ಲಿ ಭತ್ತ ಬಿತ್ತನೆಯಾಗಿದೆ. ಜೊತೆಗೆ 12490 ಹೆಕ್ಟೇರ್ ಪ್ರದೇಶದಲ್ಲಿ ಮೆಕ್ಕೆಜೋಳ ಬಿತ್ತುವ ಗುರಿ ಹೊಂದಲಾಗಿದೆ. ಈಗಾಗಲೇ 11450 ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆಯಾಗಿದೆ. ಈಗಾಗಲೇ ಮಳೆ ಪ್ರಮಾಣ ಕಡಿಮೆಯಾಗಿದ್ದು, ಮುಂದಿನ ದಿನಗಳಲ್ಲಿ ಇದೇ ಪರಿಸ್ಥಿತಿ ಮುಂದುವರಿದರೆ ಬಿತ್ತಿನ ಬೀಜಗಳು ಕಮರಿ ಹೋಗುವುದರಿಂದ ಪುನಃ, ರೈತರು ಬಿತ್ತನೆ ಕಾರ್ಯದಲ್ಲಿ ತೊಡಗುವ ಸಾಧ್ಯತೆ ಇದೆ ಎಂದರು.
ಸಭೆಯಲ್ಲಿ ತಾಪಂ ಇಒ ಕೆ.ಜಿ. ಕುಮಾರ್, ಗ್ರೇಡ್-2 ತಹಶೀಲ್ದಾರ್ ಮಂಜುಳಾ ಹೆಗಡಾಳ್, ಪುರಸಭೆ ಅಧ್ಯಕ್ಷ ಎಂ.ಡಿ. ಉಮೇಶ್, ಉಪಾಧ್ಯಕ್ಷ ಮಧುರಾಯ್ ಜಿ. ಶೇಟ್ ಮತ್ತಿತರರು ಇದ್ದರು.
ಅಶಿಸ್ತಿನಿಂದ ವರ್ತಿಸಿದ ಮಹಿಳಾ ಅಧಿಕಾರಿ:
ಕೆಡಿಪಿ ಸಭೆಯಲ್ಲಿ ಕೆಪಿಟಿಸಿಎಲ್‌ನ ಸಮರ್ಪಕ ಮಾಹಿತಿ ನೀಡಲು ಹಿಂದೇಟು ಹಾಕಿದ್ದಲ್ಲದೇ ಶಾಸಕರಿಗೆ ಉತ್ತರ ನೀಡಲು ತಡಕಾಡಿದ ಕೆಪಿಟಿಸಿಎಲ್ ನೋಡಲ್ ಅಧಿಕಾರಿ ಕುಮುದಾ ಅವರು ಅಶಿಸ್ತಿನಿಂದ ವರ್ತಿಸಿದರು.
ಕೂಡಲೇ ಶಾಸಕರು ನಿಮ್ಮಂತಹ ಅಧಿ ಕಾರಿಗಳು ತಾಲೂಕಿನಲ್ಲಿ ಕಾರ್ಯ ನಿರ್ವಹಿಸಲು ಸಮರ್ಥರಲ್ಲ. ಸಭೆಯಿಂದ ಹೊರ ನಡೆಯುವಂತೆ ಸೂಚಿಸಿದರು. ಇವರ ವಿರುದ್ಧ ಈಗಾಗಲೇ ಸಾರ್ವಜನಿಕರಿಂದ ಅನೇಕ ದೂರುಗಳು ಬಂದಿದ್ದು, ಕೂಡಲೇ ಅಮಾನತು ಮಾಡುವಂತೆ ಸಂಬಂಧಿ ಸಿದ ಮೇಲ ಧಿಕಾರಿಗಳಿಗೆ ಶಿಫಾರಸ್ಸು ಮಾಡಲು ಸಭೆಯಲ್ಲಿ ನಿರ್ಣಯಿಸುವುದಾಗಿ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CT Ravi Arrest; ಧೂರ್ತ ಸರ್ಕಾರ ನೀಚತನದ ಕೆಲಸ ಮಾಡಿದೆ: ಆರಗ ಜ್ಞಾನೇಂದ್ರ
Shimoga; ಇದು ಸಿ.ಟಿ.ರವಿ ಅವರನ್ನು ಸದೆಬಡಿಯುವ ಪ್ರಯತ್ನ;ಶಾಸಕ ಚನ್ನಬಸಪ್ಪ
Sakrebailu: ತಾಂತ್ರಿಕ ದೋಷದಿಂದ ಸುಟ್ಟು ಕರಕಲಾದ ಬಸ್
ಭದ್ರಾವತಿಯ ರೈಸ್ಮಿಲ್ನಲ್ಲಿ ಬಾಯ್ಲರ್ ಸ್ಫೋಟ: ಕಣ್ಮರೆಯಾಗಿದ್ದ ವ್ಯಕ್ತಿಯ ಶವ ಪತ್ತೆ
Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್‌ಮಿಲ್ ಕುಸಿತ:7 ಮಂದಿಗೆ ಗಾಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.