ಹೊರಗುತ್ತಿಗೆ ಕಾರ್ಮಿಕರ ಪ್ರತಿಭಟನೆ
Team Udayavani, Dec 24, 2019, 3:24 PM IST
ಶಿವಮೊಗ್ಗ: ಮೆಗ್ಗಾನ್ ಆಸ್ಪತ್ರೆ ಮತ್ತು ಶಿವಮೊಗ್ಗ ವೆೃದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸುವ ಹೊರಗುತ್ತಿಗೆ ನೌಕರರನ್ನು ನೇರ ನೇಮಕ ಮಾಡಿಕೊಂಡು ಪ್ರತಿ ತಿಂಗಳ ವೇತನ ಪಾವತಿಸಬೇಕು ಎಂದು ಒತ್ತಾಯಿಸಿ ಸೋಮವಾರ ಚೌಡೇಶ್ವರಿ ಜಿಲ್ಲಾ ಮೆಗ್ಗಾನ್ ಆಸ್ಪತ್ರೆ (ಸಿಮ್ಸ್) ಗುತ್ತಿಗೆ ಕಾರ್ಮಿಕರ ಸಂಘದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಶಿವಮೊಗ್ಗ ಮೆಡಿಕಲ್ ಕಾಲೇಜು ಮತ್ತು ಮೆಗ್ಗಾನ್ ಆಸ್ಪತ್ರೆಯಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಸ್ವತ್ಛತಾ ಸಿಬ್ಬಂದಿ ಮತ್ತು ಸ್ಟಾಫ್ ನರ್ಸ್, ಅಟೆಂಡರ್‌ಗಳು ಕಾರ್ಯ ನಿರ್ವಹಿಸುತ್ತಿದ್ದು, ಮಾಸಿಕ ವೇತನವನ್ನು ಕಾಲಕಾಲಕ್ಕೆ ನೀಡುತ್ತಿಲ್ಲ. ಅನೇಕ ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವ ತಮ್ಮನ್ನು ಸಿಮ್ಸ್ ವತಿಯಿಂದ ನೇರ ನೇಮಕ ಮಾಡಿಕೊಂಡು ಪ್ರತಿ ತಿಂಗಳು ವೇತನ ನೀಡಬೇಕು ಎಂದು ಆಗ್ರಹಿಸಿದರು.
ಮೆಗ್ಗಾನ್ ಆಸ್ಪತ್ರೆ ಮತ್ತು ಶಿವಮೊಗ್ಗ ವೆೃದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ಸುಮಾರು ವರ್ಷಗಳಿಂದ ಸ್ವತ್ಛತಾ ಸಿಬ್ಬಂದಿ, ಸ್ಟಾಫ್ ನರ್ಸ್ ಮತ್ತು ಗ್ರೂಪ್ ಡಿ ನೌಕರರಾಗಿ ನಾವುಗಳೇ ಕಾರ್ಯನಿರ್ವಹಿಸುತ್ತಿದ್ದು, ಒಂದು ವರ್ಷದಿಂದ ಸರಿಯಾಗಿ ವೇತನ ಸಿಗದೇ ಜೀವನ ನಿರ್ವಹಣೆ ಕಷ್ಟವಾಗಿದೆ ಎಂದು ದೂರಿದರು. ನೇಮಕಾತಿಗೆ ಆರ್ಥಿಕ ಇಲಾಖೆಯಿಂದ ಒಪ್ಪಿಗೆ ದೊರೆಯುತ್ತಿಲ್ಲ ಎಂದು ಹೇಳಲಾಗುತ್ತಿದೆ. ಕಾಯಂ ಹಾಗೂ ಒಳಗುತ್ತಿಗೆ ನೌಕರರಿಗೆ ಕಾಲಕಾಲಕ್ಕೆ ಸರಿಯಾಗಿ ವೇತನ ನೀಡಲಾಗುತ್ತಿದೆ. ಹೊರಗುತ್ತಿಗೆ ನೌಕರರಿಗೆ ಅನ್ಯಾಯವಾಗುತ್ತಿದೆ ಎಂದು ದೂರಿದರು. ಸಂಘದ ಪದಾಧಿಕಾರಿಗಳು ಹಾಗೂ ಹೊರಗುತ್ತಿಗೆ ನೌಕರರು ಇದ್ದರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.