ಶಿವಮೊಗ್ಗದಲ್ಲಿ ಗುರುವಾರದಿಂದ ಭಾಗಶಃ ಲಾಕ್ ಡೌನ್: ಮಧ್ಯಾಹ್ನ ನಂತರ ಎಲ್ಲವೂ ಬಂದ್
Team Udayavani, Jul 15, 2020, 1:42 PM IST
ಶಿವಮೊಗ್ಗ: ಕೋವಿಡ್-19 ನಿಯಂತ್ರಣದ ಕ್ರಮವಾಗಿ ಶಿವಮೊಗ್ಗ ಜಿಲ್ಲೆಯಾದ್ಯಂತ ಜುಲೈ 16ರಿಂದ ಮುಂದಿನ ಆದೇಶದವರೆಗೆ ಮಧ್ಯಾಹ್ನ 2ಗಂಟೆಯವರೆಗೆ ಮಾತ್ರ ವ್ಯಾಪಾರ ವಹಿವಾಟಿಗೆ ಅವಕಾಶ ಕಲ್ಪಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ತಿಳಿಸಿದರು.
ಅವರು ಬುಧವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳೊಂದಿಗೆ ಸಮಾಲೋಚನಾ ಸಭೆ ನಡೆಸಿದ ಬಳಿಕ ಈ ತೀರ್ಮಾನ ಪ್ರಕಟಿಸಿದರು.
ಪೆಟ್ರೋಲ್ ಬಂಕ್‍ಗಳು, ಮದ್ಯದ ಅಂಗಡಿಗಳು, ಕಚೇರಿಗಳು ಸೇರಿದಂತೆ ಎಲ್ಲಾ ವ್ಯಾಪಾರ ವಹಿವಾಟುಗಳನ್ನು ಮಧ್ಯಾಹ್ನ 2ಗಂಟೆವರೆಗೆ ನಡೆಸಲು ಅವಕಾಶ ಕಲ್ಪಿಸಲಾಗಿದೆ. ಆದರೆ ಕೃಷಿ ಸಂಬಂಧಿತ ಚಟುವಟಿಕೆಗಳಿಗೆ ಯಾವುದೇ ನಿರ್ಬಂಧ ಇರುವುದಿಲ್ಲ. ಕೈಗಾರಿಕಾ ಚಟುವಟಿಕೆಗಳಿಗೆ ಸಮಯ ನಿರ್ಬಂಧ ವಿಧಿಸಿರುವುದಿಲ್ಲ. ಆದರೆ ಕೈಗಾರಿಕೆಗಳಲ್ಲಿ ಕೆಲಸ ಮಾಡುವ ಕಾರ್ಮಿಕರು ಕಡ್ಡಾಯವಾಗಿ ಗುರುತಿನ ಚೀಟಿಯನ್ನು ಹೊಂದಿರಬೇಕು. ಕಾರ್ಮಿಕರಿಗೆ ಗುರುತಿನ ಚೀಟಿಯನ್ನು ಒದಗಿಸುವುದು ಮಾಲಿಕರ ಜವಾಬ್ದಾರಿಯಾಗಿದೆ ಎಂದು ಹೇಳಿದರು.
ಹಬ್ಬ ಹರಿದಿನಗಳನ್ನು ಸಾಮೂಹಿಕವಾಗಿ ಆಚರಿಸಲು ಅವಕಾಶವಿರುವುದಿಲ್ಲ. ಎಲ್ಲಾ ಹಬ್ಬಗಳನ್ನು ಮನೆಗಳಲ್ಲಿಯೇ ಆಚರಿಸಬಹುದಾಗಿದೆ. ಮದುವೆ, ಅಂತ್ಯಸಂಸ್ಕಾರ ಚಟುವಟಿಕೆಗಳಿಗೆ ಈ ಹಿಂದೆ ನಿಗದಿಪಡಿಸಲಾಗಿದ್ದ ಮಾನದಂಡವನ್ನು ಕಟ್ಟುನಿಟ್ಟಿನಿಂದ ಪಾಲಿಸಲು ಸೂಚಿಸಲಾಗಿದೆ.
ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳದೇ ಗುಂಪುಗೂಡುವುದು, ಮಾಸ್ಕ್ ಧರಿಸದೇ ಇರುವುದು ಸೇರಿದಂತೆ ಮಾರ್ಗಸೂಚಿಗಳನ್ನು ಉಲ್ಲಂಘಿಸುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆಗೆ ಸೂಚಿಸಲಾಗಿದೆ ಎಂದರು.
ಸಮಾಲೋಚನಾ ಸಭೆ: ಇದಕ್ಕೂ ಮೊದಲು ನಡೆದ ಸಮಾಲೋಚನಾ ಸಭೆಯಲ್ಲಿ ಚೇಂಬರ್ ಆಫ್ ಕಾಮರ್ಸ್, ಲಾರಿ ಮಾಲಿಕರ ಸಂಘ, ಅಟೋ ಕಾಂಪ್ಲೆಕ್ಸ್ ಸಂಘ, ಸಗಟು ತರಕಾರಿ ವ್ಯಾಪಾರಿಗಳ ಸಂಘ, ಮಾಚೇನಹಳ್ಳಿ ಕೈಗಾರಿಕಾ ವಸಾಹತು ಸಂಘ, ವಿಶ್ವೇಶ್ವರಯ್ಯ ಸಣ್ಣ ಕೈಗಾರಿಕೆಗಳ ಸಂಘ, ಬಸ್ ಮಾಲಿಕರ ಸಂಘ, ಜವಳಿ ವರ್ತಕರ ಸಂಘ, ರಿಕ್ಷಾ ಚಾಲಕರ ಒಕ್ಕೂಟ ಸೇರಿದಂತೆ ಹಲವು ಸಂಘ ಸಂಸ್ಥೆಗಳ ಪ್ರತಿನಿಧಿಗಳು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು.
ಕೈಗಾರಿಕೆಗಳಿಗೆ ವಿನಾಯಿತಿ ನೀಡಬೇಕು, ಅಟೋ ಕಾಂಪ್ಲೆಕ್ಸ್‍ನಲ್ಲಿ ಸಂಜೆ 6ರವರೆಗೆ ಚಟುವಟಿಕೆಗಳಿಗೆ ಅವಕಾಶ ನೀಡಬೇಕು, ಸೀಲ್‍ಡೌನ್ ಪ್ರದೇಶದಲ್ಲಿರುವ ಬಡವರಿಗೆ ಜಿಲ್ಲಾಡಳಿತದ ವತಿಯಿಂದ ಉಚಿತವಾಗಿ ತರಕಾರಿ, ದಿನಸಿ ವಿತರಿಸಬೇಕು, ಮಾರ್ಗಸೂಚಿಗಳನ್ನು ಕಟ್ಟುನಿಟ್ಟಿನಿಂದ ಜಾರಿಗೊಳಿಸಬೇಕು ಇತ್ಯಾದಿ ಸಲಹೆಗಳು ಬಂದವು.
ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ, ಶಾಸಕರಾದ ಹರತಾಳು ಹಾಲಪ್ಪ, ಅರಗ ಜ್ಞಾನೇಂದ್ರ, ಆಯನೂರು ಮಂಜುನಾಥ, ಪ್ರಸನ್ನ ಕುಮಾರ್, ಮೇಯರ್ ಸುವರ್ಣಾ ಶಂಕರ್, ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಜ್ಯೋತಿ ಎಸ್ ಕುಮಾರ್, ಮಲೆನಾಡು ಅಭಿವೃದ್ಧಿ ಮಂಡಳಿ ಅಧ್ಯಕ್ಷ ಗುರುಮೂರ್ತಿ, ಆರ್ಯವೈಶ್ಯ ನಿಗಮದ ಅಧ್ಯಕ್ಷ ಡಿ.ಎಸ್.ಅರುಣ್, ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಎಲ್.ವೈಶಾಲಿ, ಮಹಾನಗರ ಪಾಲಿಕೆ ಆಯುಕ್ತ ಚಿದಾನಂದ ವಟಾರೆ ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ಟ್ರಾಫಿಕ್ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು
Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ
Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Shimoga: ಮಲೆನಾಡಿನಲ್ಲಿ ಮುಂದುವರಿದ ಕಾಡಾನೆ ಕಾಟ; ಇಲಾಖೆ ವಿರುದ್ದ ರೈತರ ಆಕ್ರೋಶ
MUST WATCH
ಹೊಸ ಸೇರ್ಪಡೆ
Dhanashree Verma: ಯಶ್ ಸಿನಿಮಾಕ್ಕೆ ಕ್ರಿಕೆಟಿಗ ಚಹಾಲ್ ಪತ್ನಿ ಹೀರೋಯಿನ್
Re-Release: ಈ ವರ್ಷ ರೀ ರಿಲೀಸ್ ಆದ ಬಾಲಿವುಡ್ ಸಿನಿಮಾಗಳ ಬಾಕ್ಸ್ ಆಫೀಸ್ ಗಳಿಕೆ ಎಷ್ಟು?
Uttara Pradesh By poll: 30 ವರ್ಷದ ಬಳಿಕ ಮುಸ್ಲಿಂ ಬಾಹುಳ್ಯದ ಕ್ಷೇತ್ರದಲ್ಲಿ ಅರಳಿದ ಕಮಲ!
IPL Mega Auction: 2008-2024.. ಪ್ರತಿ ಹರಾಜಿನ ದುಬಾರಿ ಆಟಗಾರರ ಪಟ್ಟಿ ಇಲ್ಲಿದೆ
ಬೆಳಗಾವಿ:ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿದ ಹುಡುಗ..ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.