ಪಕ್ಷದ ಹೈಕಮಾಂಡ್ ತೀರ್ಮಾನಕ್ಕೆ ಬದ್ಧ: ವಿಜಯೇಂದ್ರ
ಯಡಿಯೂರಪ್ಪ ಇಲ್ಲದೆ ಹೋದರೆ ರಾಜ್ಯದಲ್ಲಿ ಬಿಜೆಪಿಗೆ ಭವಿಷ್ಯ ಇಲ್ಲ.
Team Udayavani, Aug 9, 2022, 6:24 PM IST
ಶಿರಾಳಕೊಪ್ಪ: ನಾನು ಪಕ್ಷದ ಶಿಸ್ತಿನ ಸಿಪಾಯಿ. ರಾಜ್ಯದಲ್ಲಿ ಪಕ್ಷ ಸಂಘಟನೆ ನನ್ನ ಮುಖ್ಯ ಗುರಿ. ಪಕ್ಷ ನೀಡಿವ ಜವಾಬ್ದಾರಿಯನ್ನು ನಿಭಾಯಿಸಲು ಪ್ರಯತ್ನಿಸುತ್ತೇನೆ. ನನ್ನ ತಂದೆ ಯಡಿಯೂರಪ್ಪನವರ ಮಾರ್ಗದರ್ಶನದಲ್ಲಿ ಮುಂದುವರಿಯುತ್ತೇನೆ. ನಮ್ಮ ಹೈಕಮಾಂಡ್ ಒಪ್ಪಿ ಟಿಕೆಟ್ ನೀಡಿದರೆ ಶಿಕಾರಿಪುರ ಕ್ಷೇತ್ರದಿಂದ ಸ್ಪ ರ್ಧಿಸುತ್ತೇನೆ ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು.
ಶಿರಾಳಕೊಪ್ಪ ಪಟ್ಟಣದ ನೇರಲಗಿ ಸಮುದಾಯ ಭವನದಲ್ಲಿ ಸೋಮವಾರ ಏರ್ಪಡಿಸಿದ್ದ ಮಹಾಶಕ್ತಿ ಕೇಂದ್ರ ಮಟ್ಟದ ಪೇಜ್ ಪ್ರಮುಖರ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು.
ಅದೇ ರೀತಿ ಬಿಜೆಪಿಯ ರಾಷ್ಟ್ರೀಯ ನಾಯಕರು, ರಾಜ್ಯ ನಾಯಕರು ತೆಗೆದುಕೊಳ್ಳುವ ನಿರ್ಧಾರಕ್ಕೆ ನಾನು ಬದ್ಧನಾಗಿರುತ್ತೇನೆ. ಬರುವ ದಿನಗಳಲ್ಲಿ ಕಾರ್ಯಕರ್ತರ ಅಭಿಪ್ರಾಯಕ್ಕೆ ಪಕ್ಷ ಮಾನ್ಯತೆ ಕೊಡುತ್ತದೆ ಎಂದು ಇಲ್ಲಿನ ಪಕ್ಷದ ಮುಖಂಡರಲ್ಲಿ ವಿಶ್ವಾಸವಿದೆ. ಯಾವ ರೀತಿ ತಂದೆಯವರು ತಾಲೂಕಿನ ಸರ್ವಾಂಗಿಣ ಅಭಿವೃದ್ಧಿಗಾಗಿ ಕೆಲಸ ಮಾಡಿದ್ದಾರೋ ಹಾಗೆಯೇ ಸಂಸದ ಬಿ.ವೈ. ರಾಘವೇಂದ್ರ ಶ್ರಮ ವಹಿಸಿ ಕೆಲಸ ಮಾಡಿದ್ದಾರೆ. ಅದೇ ರೀತಿ ನಿಮ್ಮ
ಪ್ರೀತಿ- ವಿಶ್ವಾಸದಿಂದ ತಾಲೂಕಿನ ಅಭಿವೃದ್ಧಿಗೆ ಶ್ರಮಿಸುವುದಾಗಿ ಹೇಳಿದ ಅವರು ಸಂಸದ ಬಿ.ವೈ. ರಾಘವೇಂದ್ರ ಅಭಿವೃದ್ಧಿಯ ವಿಚಾರದಲ್ಲಿ ದೇಶದಲ್ಲೇ ಟಾಪ್- 5 ರ ಸ್ಥಾನ ಪಡೆದಿದ್ದರ ಬಗ್ಗೆ ಸಂತಸ ವ್ಯಕ್ತ ಪಡಿಸಿದರು.
ಸಂಸದ ಬಿ.ವೈ. ರಾಘವೇಂದ್ರ ಮಾತನಾಡಿ, ಶಿಕಾರಿಪುರ ತಾಲೂಕಿನ ರೈತರ ಪರ ಜನಪರ, ದೀನದಲಿತರ ಪರ ಹಿಂದುಳಿದವರ ಪರ ಧ್ವನಿಯಾಗಿ ಕೆಲಸ ಮಾಡಲು ಸಿದ್ಧರಿದ್ದಾರೆ.
ದೇಶ 75ನೇ ಅಮೃತ ಮಹೋತ್ಸವ ಆಚರಿಸುವ ಈ ಸಂದರ್ಭದಲ್ಲಿ ಸ್ವಾತ್ರಂತ್ಯಕ್ಕಾಗಿ ಹುತಾತ್ಮರಾದವರನ್ನು ನೆನೆಯುವ ದಿನ. ದೇಶಭಕ್ತಿಯನ್ನು ಎಲ್ಲರೂ ಮೈಗೂಡಿಸಿಕೊಂಡು ಆ. 13ರಿಂದ 15 ರವರೆಗೆ ಪ್ರತಿ ಮನೆ- ಮನೆಯಲ್ಲಿ ರಾಷ್ಟ್ರ ಧ್ವಜ ಹಾರಿಸೋಣ. ಧ್ವಜಕ್ಕೆ ಅಪಚಾರವಾಗದ ರೀತಿ ನೋಡಿಕೊಳ್ಳಲು ಕಾರ್ಯಕರ್ತರಿಗೆ ತಿಳಿಸಿದರು.
ಮಲೆನಾಡು ಅಭಿವೃದ್ಧಿ ನಿಗಮ ಮಂಡಳಿ ಅಧ್ಯಕ್ಷ ಕೆ.ಎಸ್. ಗುರುಮೂರ್ತಿ ಮಾತನಾಡಿ, ಬಿ.ವೈ. ರಾಘವೇಂದ್ರ ಯಡಿಯೂರಪ್ಪನವರ ಮಗನಾಗಿದ್ದರೂ ಎರಡು ವರ್ಷಗಳ ಕಾಲ ಸಂಘಟನಾ ಚತುರರಾಗಿ ರಾಜ್ಯದೆಲ್ಲೆಡೆ ಪಕ್ಷ ಸಂಘಟಿಸಿ ಪರಿಶ್ರಮದಿಂದ ಕೆಲಸ ಮಾಡಿದ್ದಾರೆ. ಈ ಕಾರಣಕ್ಕೆ ಇಂದು ಯುವ ನಾಯಕರಾಗಿ ಹೊರಹೊಮ್ಮಿದ್ದಾರೆ. ಸಮೀಕ್ಷೆಯ ಪ್ರಕಾರ ಯಡಿಯೂರಪ್ಪನವರಿಗೆ 60%, ಬೊಮ್ಮಾಯಿಯವರಿಗೆ 35%, ವಿಜೆಯೇಂದ್ರ ಅವರಿಗೆ 22% ಮೂಲಕ ವಿಜೆಯೇಂದ್ರ ಅವರು ರಾಜ್ಯದ ನಾಯಕರಾಗುತ್ತಾರೆ ಎಂಬುದು ಸಮೀಕ್ಷೆ ತಿಳಿಸಿದೆ ಎಂದರು.
ಅರಣ್ಯ ಅಭಿವೃದ್ಧಿ ನಿಗಮದ ಕೊಳಗಿ ರೇವಣಪ್ಪ ಮಾತನಾಡಿ, ಯಡಿಯೂರಪ್ಪ ಇಲ್ಲದೆ ಹೋದರೆ ರಾಜ್ಯದಲ್ಲಿ ಬಿಜೆಪಿಗೆ ಭವಿಷ್ಯ ಇಲ್ಲ. ಅವರನ್ನು ರಾಜಕೀಯವಾಗಿ
ತುಳಿಯಲು ನಡೆಸುವ ಪ್ರಯತ್ನ ವ್ಯರ್ಥ. ಎಲ್ಲಾ ಸಮುದಾಯದ ಜನತೆಗೆ ಪ್ರಾಧಾನ್ಯತೆ ನೀಡಿ ರಾಜ್ಯ ಮುನ್ನಡೆಸಿ ಆದರ್ಶಪ್ರಾಯರಾಗಿದ್ದಾರೆ ಎಂದರು.
ಸಭೆಯಲ್ಲಿ ಮಂಡಲ ಅಧ್ಯಕ್ಷ ವೀರೇಂದ್ರ ಪಾಟೀಲ್, ಹಿರಿಯ ಬಿಜೆಪಿ ಮುಖಂಡರಾದ ಅಗಡಿ ಅಶೋಕ್, ಸಣ್ಣ ಹನುಮಂತಪ್ಪ, ಖನಿಜ ನಿಗಮದ ಅಧ್ಯಕ್ಷ ಲಿಂಗಮೂರ್ತಿ, ಗಾಯಿತ್ರಿ ಮಲ್ಲಪ್ಪ, ನಿವೇದಿತಾ ರಾಜು, ಸವಿತಾ ಶಿವಕುಮಾರ್, ಸತೀಶ್, ಶಂಭು ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga: ಮಲೆನಾಡಿನಲ್ಲಿ ಮುಂದುವರಿದ ಕಾಡಾನೆ ಕಾಟ; ಇಲಾಖೆ ವಿರುದ್ದ ರೈತರ ಆಕ್ರೋಶ
B. Y. Raghavendra: 10 ವರ್ಷದಲ್ಲಿ ವಕ್ಫ್ ಆಸ್ತಿ ಶೇ.135 ಹೆಚ್ಚಳ
Thirthahalli: ಪಾದರಕ್ಷೆ, ಮೊಬೈಲ್ ನದಿ ದಡದಲ್ಲಿಟ್ಟು ವ್ಯಕ್ತಿ ನಾಪತ್ತೆ ಪ್ರಕರಣ; ಶವ ಪತ್ತೆ
ನಕ್ಸಲರನ್ನು ಮುಖ್ಯವಾಹಿನಿಗೆ ಕರೆತರುವ ಯತ್ನಕ್ಕೆ ಹಿನ್ನಡೆ?
Naxal: ವಿಕ್ರಂ ವಿರುದ್ಧ ಆಗುಂಬೆ, ತೀರ್ಥಹಳ್ಳಿ, ಚಿಕ್ಕಮಗಳೂರು ಠಾಣೆಗಳಲ್ಲಿ ಹಲವು ಪ್ರಕರಣ
MUST WATCH
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಹೊಸ ಸೇರ್ಪಡೆ
Sandalwood: ಯಾರೋ ನಾ ಕಾಣೆ, ಚಂದಾಗೌಳೆ ಶಾಣೆ..: ಕಟ್ಲೆ ಹಾಡು ಬಂತು
Border Gavaskar Trophy: ಕಾಂಗರೂ ಚಾಲೆಂಜ್ ಗೆ ಅಣಿಯಾದ ಭಾರತ; ಹೇಗಿದೆ ತಂಡದ ಬಲಾಬಲ
Kollywood: ʼಅಮರನ್ʼ ಚಿತ್ರತಂಡದಿಂದ 1 ಕೋಟಿ ರೂ. ಪರಿಹಾರ ಕೇಳಿದ ವಿದ್ಯಾರ್ಥಿ; ಕಾರಣವೇನು?
Netanyahu ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯದಿಂದ ಬಂಧನ ವಾರಂಟ್
Viral Photo: ಬಾಲಿವುಡ್ ನಟ ಆಮಿರ್ ಖಾನ್ ಭೇಟಿಯಾದ ಕಿಚ್ಚ ಸುದೀಪ್; ಫ್ಯಾನ್ಸ್ ಥ್ರಿಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.