Shimoga; ಪಕ್ಷ ಶುದ್ದವಾಗಬೇಕು, ಕುಟುಂಬ ರಾಜಕಾರಣ ದೂರ ಆಗಬೇಕು: ಕೆ.ಎಸ್ ಈಶ್ವರಪ್ಪ
Team Udayavani, Mar 17, 2024, 4:13 PM IST
ಶಿವಮೊಗ್ಗ: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಜ್ಯದ ಉಸ್ತುವಾರಿ ರಾಧಾ ಮೋಹನ್ ಅಗರ್ವಾಲ್ ಹಾಗೂ ರಾಜ್ಯ ಸಂಘಟನಾ ಕಾರ್ಯದರ್ಶಿ ರಾಜೇಶ್ ಭೇಟಿಗೆ ಬಂದಿದ್ದರು. ಬಂಡಾಯ ಸ್ಪರ್ಧೆಯ ಬಗ್ಗೆ ಚರ್ಚೆ ನಡೆಸಿದರು. ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದೇನೆ ಎಂಬುದನ್ನು ಸ್ಪಷ್ಟವಾಗಿ ತಿಳಿಸಿದ್ದೇನೆ. ಕಾಂತೇಶ್ ಗೆ ಎಂಎಲ್ ಸಿ ಮಾಡುವುದಾಗಿ ತಿಳಿಸಿದರು. ಇದು ಎಂಎಲ್ಎ, ಎಂಪಿ ಮಾಡುವ ವಿಚಾರವಲ್ಲ ಪಕ್ಷ ಶುದ್ದಿಕರಣವಾಗಬೇಕು. ರಾಜ್ಯದ ಅನೇಕ ಕಾರ್ಯಕರ್ತರು ನೋವು ಅನುಭವಿಸುತ್ತಿದ್ದಾರೆ. ಅದು ಸರಿಯಾಗಬೇಕು. ಹಿಂದುತ್ವವಾದಿಗಳಿಗೆ ತುಳಿಯುತ್ತಿದ್ದಾರೆ. ಅದು ಸರಿಯಾಗಬೇಕು. ಹಿಂದುತ್ವ ಉಳಿಸಬೇಕು ಪಕ್ಷ ಉಳಿಸಬೇಕು. ಕುಟುಂಬ ರಾಜಕಾರಣ ದೂರ ಆಗಬೇಕು ಎಂದು ಮಾಜಿ ಡಿಸಿಎಂ ಕೆ.ಎಸ್ ಈಶ್ವರಪ್ಪ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನರೇಂದ್ರ ಮೋದಿಯವರ ಆಶಯದಂತೆ ಕರ್ನಾಟಕದಲ್ಲಿ ಬಿಜೆಪಿಯಲ್ಲಿ ಬದಲಾವಣೆ ಬರಬೇಕು. ನನ್ನ ಜೊತೆಗಿನ ಚರ್ಚೆಯನ್ನು ಬಿಜೆಪಿ ಹೈಕಮಾಂಡ್ ಗೆ ಅವರು ತಿಳಿಸುತ್ತಾರೆ ಎಂದರು.
ಮೋದಿ ಕಾರ್ಯಕ್ರಮಕ್ಕೆ ಬರಲು ಆಹ್ವಾನ ನೀಡಿದರು. ನಾನು ಬರುವುದಿಲ್ಲ ಚುನಾವಣೆಯಲ್ಲಿ ಗೆದ್ದು ಮೋದಿಗೆ ಬೆಂಬಲಿಸುವುದಾಗಿ ತಿಳಿಸಿದ್ದೇನೆ. ಮೋದಿಯನ್ನು ಪ್ರಧಾನಿ ಮಾಡುವ ನಿಟ್ಟಿನಲ್ಲಿ ನಾನು ಜೊತೆಗಿರುವುದಾಗಿ ತಿಳಿಸಿದ್ದೇನೆ. ಇಡೀ ಲೋಕಸಭಾ ಕ್ಷೇತ್ರದಲ್ಲಿ ಲಿಂಗಾಯತರು, ಈಡಿಗರು ಸೇರಿದಂತೆ ನಾವೆಲ್ಲ ಹಿಂದೂಗಳು ನಿಮ್ಮ ಜೊತೆ ಎಂದಿದ್ದಾರೆ. ಹಿಂದುತ್ವ ಹಾಗೂ ಬಿ ಎಸ್ ವೈ ಕುಟುಂಬದಿಂದ ಆದ ಅನ್ಯಾಯದ ಹಿನ್ನೆಲೆ ನನ್ನ ಚುನಾವಣೆಯಲ್ಲಿ ಕೈ ಹಿಡಿಯುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಈಶ್ವರಪ್ಪನವರ ಮನವೊಲಿಸುವ ಬಿಜೆಪಿ ನಾಯಕರ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರ, ಬಿಜೆಪಿಯ ನಿಷ್ಠಾವಂತ ಕಾರ್ಯಕರ್ತ ನಾನು. ಈಶ್ವರಪ್ಪ ಆಕ್ರೋಶದಿಂದ ಬಂಡಾಯ ಸ್ಪರ್ಧೆ ಮಾಡುತ್ತಾರೆ ಎಂಬ ನಂಬಿಕೆ ಬಿಜೆಪಿಯವರಲ್ಲಿಲ್ಲ. ನಾನು ಆಕ್ರೋಶದಿಂದ ಮಾತನಾಡುತ್ತಿಲ್ಲ, ಬಿಎಸ್ ವೈ ಕುಟುಂಬದ ವ್ಯವಸ್ಥೆಯ ವಿರುದ್ಧ ಸ್ಪರ್ಧೆ ಮಾಡುತ್ತಿದ್ದೇನೆ. ಯಡಿಯೂರಪ್ಪ ಆರು ತಿಂಗಳು ಹಠ ಹಿಡಿದು ವಿಜಯೇಂದ್ರನನ್ನು ರಾಜ್ಯಾಧ್ಯಕ್ಷನನ್ನಾಗಿ ಮಾಡಿದರು. ವಿಜಯೇಂದ್ರ ಲಿಂಗಾಯತ ಎಂದು ರಾಜ್ಯಾಧ್ಯಕ್ಷರನ್ನಾಗಿ ಮಾಡಿದರಾ? ಪಂಚಮಸಾಲಿ ಲಿಂಗಾಯತ ಯತ್ನಾಳ್ ಬಗ್ಗೆ ಯಾಕೆ ಹಠ ಹಿಡಿಯಲಿಲ್ಲ? ಒಕ್ಕಲಿಗ ಸಿ.ಟಿ.ರವಿಯನ್ನು ಯಾಕೆ ಮಾಡಲಿಲ್ಲ. ಶೋಭಾ ಕರಂದ್ಲಾಜೆಗೆ ಹಠ ಹಿಡಿದು ಟಿಕೆಟ್ ಕೊಡಿಸಿದ ಹಾಗೆ ಸಿ.ಟಿ.ರವಿಗೆ ಯಾಕೆ ಟಿಕೆಟ್ ಕೊಡಿಸಲಿಲ್ಲ ಎಂದು ಪ್ರಶ್ನಿಸಿದರು.
ಲೋಕಸಭಾ ಚುನಾವಣೆಯಲ್ಲಿ ಕ್ಷೇತ್ರ ಜನತೆ ನನ್ನನ್ನು ಗೆಲ್ಲಿಸುತ್ತಾರೆ. ನಾನು ಹೋರಾಟ ನಡೆಸುತ್ತಿರುವುದೇ ಬಿಜೆಪಿಯಲ್ಲಿನ ಬದಲಾವಣೆಗಾಗಿ. ನಾನು ಗೆದ್ದೆ ಗೆಲ್ಲುತ್ತೇನೆ. ಮಠಾಧೀಶರು ಜನರ ಆಶೀರ್ವಾದವಿದೆ ಎಂದು ಈಶ್ವರಪ್ಪ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್
Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ
Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ
Channapatna bypoll; ಗೆಲುವಿಗೆ ಬಿಜೆಪಿ-ಜೆಡಿಎಸ್ ನವರೂ ಸಹಕರಿಸಿದ್ದಾರೆ: ಡಿ.ಕೆ.ಶಿವಕುಮಾರ್
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್
All-party meet: ನಾಳೆಯಿಂದ ಚಳಿಗಾಲದ ಅಧಿವೇಶ: ಸುಗಮಗೊಳಿಸಲು ಬಯಸಿದ ಸರಕಾರ
Uttar Pradesh: ಝಾನ್ಸಿ ಆಸ್ಪತ್ರೆ ಬೆಂಕಿ ಅವಘಡ: ಮತ್ತೆ 2 ಹಸುಗೂಸು ಸಾ*ವು
IPL Auction 2025: ಸೇಲ್ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..
Jharkhand: ಮತ್ತೆ ಮುಖ್ಯಮಂತ್ರಿಯಾಗಿ ಜೆಎಂಎಂ ನಾಯಕ ಹೇಮಂತ್ ಸೊರೇನ್ ನ.28ಕ್ಕೆ ಪದಗ್ರಹಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.