ತೀರ್ಥಹಳ್ಳಿ: ಪ್ರಯಾಣಿಕನಿಗೆ ಹೃದಯಾಘಾತ… ಸಮಯಪ್ರಜ್ಞೆ ಮೆರೆದ ಬಸ್ ಚಾಲಕ, ನಿರ್ವಾಹಕ
ಆ್ಯಂಬುಲೆನ್ಸ್ ಡ್ರೈವರ್‌ಗಳ ಮಾನವೀಯತೆ
Team Udayavani, Jun 24, 2023, 12:53 PM IST
ತೀರ್ಥಹಳ್ಳಿ: ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರೊಬ್ಬರಿಗೆ ತೀರ್ಥಹಳ್ಳಿ ಸಮೀಪ ಹೃದಯಾಘಾತವಾದ ಘಟನೆ ನಡೆದಿದ್ದು ಆತನನ್ನು ಬದುಕಿಸಲು ತೀರ್ಥಹಳ್ಳಿಗರು ಹೋರಾಟ ನಡೆಸಿದ್ದಾರೆ.
ಶುಕ್ರವಾರ ಸಂಜೆ ಶಿವಮೊಗ್ಗ-ಮಂಗಳೂರಿಗೆ ದುರ್ಗಾಂಬಾ ಬಸ್ ಹೊರಟಿತ್ತು. ಇನ್ನೇನು ತೀರ್ಥಹಳ್ಳಿ ತಲುಪುವ ಹೊತ್ತಿಗೆ ಬಸ್‌ನಲ್ಲಿದ್ದ ಪ್ರಯಾಣಿಕರೊಬ್ಬರಿಗೆ ಹೃದಯಾಘಾತವಾಗಿದೆ. ಇದನ್ನ ಗಮನಿಸಿದ ಕಂಡಕ್ಟರ್, ಡ್ರೈವರ್‌ಗೆ ವಿಷಯ ತಿಳಿಸಿದ್ದಾನೆ. ತಕ್ಷಣ ಚಾಲಕ ಬಸ್ಸನ್ನು ತೀರ್ಥಹಳ್ಳಿ ಜೆಸಿ ಆಸ್ಪತ್ರೆ ಕಡೆಗೆ ಚಲಾಯಿಸಿದ್ದಾನೆ. ಸಮಯಕ್ಕೆ ಸರಿಯಾಗಿ ಬಸ್‌ನ್ನ ಆಸ್ಪತ್ರೆಗೆ ಚಲಾಯಿಸಿದ ಡ್ರೈವರ್ ಹಾಗೂ ಕಂಡಕ್ಟರ್, ಅಲ್ಲಿ ಪ್ರಯಾಣಿಕನನ್ನ ದಾಖಲಿಸಿ, ಮುಂದಕ್ಕೆ ಹೋಗಿದ್ದಾರೆ.
ಆ್ಯಂಬುಲೆನ್ಸ್ ಡ್ರೈವರ್‌ಗಳ ಮಾನವೀಯತೆ:
ಇನ್ನೂ ಹೃದಯಾಘಾತಕ್ಕೊಳಗಾದ ಪ್ರಯಾಣಿಕನ ಪರಿಸ್ಥಿತಿ ಗಂಭೀರವಾಗಿತ್ತು. ಪ್ರಾಥಮಿಕ ಚಿಕಿತ್ಸೆ ನೀಡಿದರೂ ಸಹ, ತುರ್ತಾಗಿ ಹೆಚ್ಚಿನ ಚಿಕಿತ್ಸೆ ಕೊಡಿಸುವ ಅಗತ್ಯವಿತ್ತು. ಆಗ ಅಲ್ಲಿದ್ದ ಆಂಬುಲೆನ್ಸ್ ಡ್ರೈವರ್ ರಂಜಿತ್, ರಹಮತ್, ಪವನ್‌ರವರು ಪ್ರಯಾಣಿಕನನ್ನು ಶಿವಮೊಗ್ಗದ ಆಸ್ಪತ್ರೆಗೆ ಶಿಫ್ಟ್ ಮಾಡುವ ಜವಾಬ್ದಾರಿ ಹೊತ್ತಿದ್ದಾರೆ, ಕೆಲವೇ ಹೊತ್ತಿನಲ್ಲಿ ಶಿವಮೊಗ್ಗದ ಆಸ್ಪತ್ರೆಯೊಂದಕ್ಕೆ ಪ್ರಯಾಣಿಕನನ್ನ ಶಿಫ್ಟ್ ಮಾಡಿ, ಆತನಿಗೆ ಸಿಗಬೇಕಿದ್ದ ತುರ್ತು ಚಿಕಿತ್ಸೆ ಕೊಡಿಸಿದ್ದಾರೆ.
ಕೊನೆಗೂ ಉಳಿಯಿತು ಜೀವ
ಸದ್ಯ ಪ್ರಯಾಣಿಕ ಪ್ರಾಣಾಪಾಯದಿಂದ ಪಾರಾಗಿದ್ದು, ಹೆಚ್ಚಿನ ಚಿಕಿತ್ಸೆಯಲ್ಲಿದ್ದಾರೆ. ಅವರು ಯಾರು? ಎಲ್ಲಿಯವರು ? ಎಂದು ಹೇಳುವ ಸ್ಥಿತಿಯಲ್ಲಿ ಅವರು ಇರಲಿಲ್ಲ. ಬಸ್‌ನಲ್ಲಿ ಅವರ ಜೊತೆ ಯಾರು ಪ್ರಯಾಣಿಸುತ್ತಿರಲಿಲ್ಲ. ಡ್ರೈವರ್, ಕಂಡಕ್ಟರ್, ಜೆಸಿ ಆಸ್ಪತ್ರೆಯ ಸಿಬ್ಬಂದಿ, ಆ್ಯಂಬುಲೆನ್ಸ್ ಡ್ರೈವರ್ ಹೀಗೆ ಎಲ್ಲರೂ ಸಹ ಹೃದಯಾಘಾತವಾದ ವ್ಯಕ್ತಿಯ ಪೂರ್ವಪರ ಕೇಳುವ ಗೋಜಿಗೂ ಹೋಗಲಿಲ್ಲ. ಬದಲಾಗಿ ಹೇಗಾದರೂ ಸರಿಯೇ ಜೀವ ಉಳಿಸಬೇಕು ಎಂದು ಪ್ರಯತ್ನಪಟ್ಟರು. ಅದರ ಫಲವಾಗಿ ಪ್ರಯಾಣಿಕನ ಜೀವ ಉಳಿದಿದೆ.
ಇದನ್ನೂ ಓದಿ: ರಾಜ್ಯಾಧ್ಯಕ್ಷ ಸ್ಥಾನಕ್ಕೆ ‘ರಾಜೀನಾಮೆ ಕೊಟ್ಟಿಲ್ಲ’: ನಳಿನ್ ಕುಮಾರ್ ಸ್ಪಷ್ಟನೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
Gold Fraud Case: ಐಶ್ವರ್ಯಗೌಡ ದಂಪತಿಯ 3 ಐಷಾರಾಮಿ ಕಾರು ಜಪ್ತಿ
Gold Cheating Case: ಚಿನಾಭರಣ ವಂಚನೆ… ಶ್ವೇತಾಗೌಡ ವಿರುದ್ಧ ಇನ್ನೊಂದು ದೂರು
Metro: ಮೆಟ್ರೋದಲ್ಲಿ ಮಹಿಳಾ ಟೆಕಿ ಫೋಟೋ ತೆಗೆದು ಸಿಕ್ಕಿಬಿದ್ದ ಆಯುರ್ವೇದಿಕ್ ವೈದ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Explainer:HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್ ಮಾದರಿಯ ಎಚ್ ಎಂಪಿವಿ ವೈರಸ್?
Gadag: ನಿರ್ಮಿತಿ ಕೇಂದ್ರದ ಗುತ್ತಿಗೆ ಆಧಾರಿತ ಇಂಜಿನಿಯರ್ ಆತ್ಮಹ*ತ್ಯೆ
Bantwala: ನೇತ್ರಾವತಿ ನದಿಯ ಅಂಬಿಗ ನಾಪತ್ತೆ; ಸ್ಥಳೀಯರಿಂದ ಶೋಧ ಕಾರ್ಯ
Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ರಸ್ತೆಯಲ್ಲೇ ನಡೆಯಿತು ಪವಾಡ
Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.