![Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?](https://www.udayavani.com/wp-content/uploads/2025/02/6-20-415x249.jpg)
![Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?](https://www.udayavani.com/wp-content/uploads/2025/02/6-20-415x249.jpg)
Team Udayavani, Dec 9, 2020, 4:41 PM IST
ಶಿವಮೊಗ್ಗ: ನಗರದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು ಸಾರ್ವಜನಿಕರ ಸಹಕಾರ ಅಗತ್ಯ ಎಂದು ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಅವರು ತಿಳಿಸಿದರು.
ಅವರು ಮಂಗಳವಾರ ಜಿಲ್ಲಾಡಳಿತ ಸಭಾಂಗಣದಲ್ಲಿ ಶಾಂತಿ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಅನಪೇಕ್ಷಿತ ಘಟನೆಗಳಿಂದ ಕಳೆದ ಒಂದು ವಾರದಲ್ಲಿಆರ್ಥಿಕ ಚಟುವಟಿಕೆಗಳಿಗೆ ಹಿನ್ನಡೆ ಉಂಟಾಗಿದೆ. ಎಲ್ಲರೂ ಸಾಮರಸ್ಯದಿಂದ ಬಾಳುವ ವಾತಾವರಣ ನಿರ್ಮಿಸುವುದೇ ನಮ್ಮ ಆದ್ಯತೆಯಾಗಿದೆ. ನಗರದ ಉತ್ತಮ ಇಮೇಜ್ ಕಾಪಾಡುವುದು ಪ್ರತಿಯೊಬ್ಬರಜವಾಬ್ದಾರಿ. ನಗರದ ಜನತೆಯಲ್ಲಿರುವ ಭಯದ ವಾತಾವರಣ ಹೋಗಲಾಡಿಸಲು ಜಿಲ್ಲಾಡಳಿತಎಲ್ಲಾ ಕ್ರಮಗಳನ್ನು ಕೈಗೊಂಡಿದ್ದು, ಪ್ರತಿಯೊಬ್ಬರೂ ಇದಕ್ಕೆ ಸಹಕರಿಸಬೇಕು ಎಂದು ಅವರು ಮನವಿ ಮಾಡಿದರು.
ವೈಯಕ್ತಿಕವಾಗಿ ನಡೆಯುವ ಘಟನೆಗಳನ್ನು ಸಾಮುದಾಯಿಕವಾಗಿ ನೋಡುವುದರಿಂದ ಪರಿಸ್ಥಿತಿಬಿಗಡಾಯಿಸಲಿದೆ. ಇದಕ್ಕೆ ಯಾರೂ ಆಸ್ಪದ ನೀಡಬಾರದು ಎಂದರು.
ಅಪ್ರಾಪ್ತೆ ಮೇಲೆ ನಡೆದಿರುವ ಅತ್ಯಾಚಾರ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಲಾಗಿದ್ದು, ತಪ್ಪಿತಸ್ಥರಿಗೆ ಪೋಕೊÕà ಕಾಯ್ದೆಯಡಿ ಕಠಿಣ ಶಿಕ್ಷೆಗೆ ಗುರಿಪಡಿಸಲಾಗುವುದು. ಶಿವಮೊಗ್ಗ ನಗರದಲ್ಲಿ ಗಾಂಜಾ ಪ್ರಭಾವದಿಂದ ಹಲವು ಅಪರಾಧ ಕೃತ್ಯಗಳು ಸಂಭವಿಸುತ್ತಿರುವ ಬಗ್ಗೆ ಬಹಳಷ್ಟು ಜನ ಕಳವಳ ವ್ಯಕ್ತಪಡಿಸಿದ್ದು, ಇದನ್ನು ಕಟ್ಟುನಿಟ್ಟಾಗಿ ನಿಯಂತ್ರಿಸುವ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ಕ್ರಮ ಕೈಗೊಳ್ಳಲಾಗುವುದು. ಔಷಧಿ ಗಳನ್ನು ಉದ್ದೀಪನವಾಗಿ ಬಳಸುವುದನ್ನು ತಡೆಯುವ ನಿಟ್ಟಿನಲ್ಲಿ ಶೀಘ್ರದಲ್ಲೇ ಫಾರ್ಮಾಸಿಸ್ಟ್‌ಗಳ ಸಭೆ ಕರೆಯಲಾಗುವುದು ಎಂದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಂ. ಶಾಂತರಾಜು ಅವರು ಮಾತನಾಡಿ, ಸಾರ್ವಜನಿಕರ ಸಹಕಾರದಿಂದ ಜನಜೀವನ ಸಹಜಸ್ಥಿತಿಗೆ ಮರಳುತ್ತಿದೆ. ಮೊಹಲ್ಲಾ ಸಭೆಗಳನ್ನು ಹೆಚ್ಚು ಪರಿಣಾಮಕಾರಿಯಾಗಿ ನಡೆಸಲಾಗುವುದು. ಸಾರ್ವಜನಿಕರು ಯಾವುದೇ ದೂರುಗಳಿದ್ದರೂ, ನೇರವಾಗಿ ತಮ್ಮನ್ನು ಕಚೇರಿಯಲ್ಲಿ ಭೇಟಿ ಮಾಡಬಹುದಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡಲು ಸಾರ್ವಜನಿಕರು ಪೊಲೀಸರೊಂದಿಗೆ ಸಹಕರಿಸಬೇಕು. ನಾಗರಿಕರು ಆದಷ್ಟು ಹೆಚ್ಚಿನ ಸಂಖ್ಯೆಯಲ್ಲಿ ಮನೆ ಮುಂದೆ ರಸ್ತೆಗೆ ಅಭಿಮುಖವಾಗಿ ಸಿಸಿ ಕ್ಯಾಮೆರಾಗಳನ್ನು ಅಳವಡಿಸಬೇಕು ಎಂದು ಅವರು ಮನವಿ ಮಾಡಿದರು.
ಅಭಿಪ್ರಾಯ ಮಂಡನೆ: ವಿವಿಧ ಸಮುದಾಯಗಳ ಪ್ರತಿನಿಧಿಗಳು ಮಾತನಾಡಿ ಹಲವಾರು ಸಲಹೆಗಳನ್ನು ನೀಡಿದರು. ನಗರದಲ್ಲಿ ಗಾಂಜಾ ಹಾವಳಿ ತೀವ್ರವಾಗಿದ್ದು, ಇದನ್ನು ಕಟ್ಟುನಿಟ್ಟಾಗಿ ನಿಯಂತ್ರಿಸಿದರೆ ಮಾತ್ರ ಅಪರಾಧ ಕೃತ್ಯಗಳನ್ನು ನಿಯಂತ್ರಿಸಲುಸಾಧ್ಯ. 144 ನೇ ಸೆಕ್ಷನ್ ಬಗ್ಗೆ ಸರಿಯಾಗಿ ಮಾಹಿತಿನೀಡದಿರುವುದರಿಂದ ಜನಸಾಮಾನ್ಯರಿಗೆ, ಸಣ್ಣಪುಟ್ಟವ್ಯಾಪಾರಸ್ಥರಿಗೆ ಬಹಳ ತೊಂದರೆಯಾಗಿದೆ. ಸೆಕ್ಷನ್‌ಜಾರಿಯಲ್ಲಿರುವಾಗ ಬೆಳಿಗ್ಗೆ 6ರಿಂದ ಸಂಜೆ 6ರವರೆಗೆ ವ್ಯಾಪಾರ ವಹಿವಾಟಿಗೆ ಅವಕಾಶ ನೀಡಿ ಎಂದು ವಿವಿಧ ಗಣ್ಯರು ಮನವಿ ಮಾಡಿದರು.
ಉಪ ಮೇಯರ್ ಸುರೇಖಾ ಮುರುಳೀಧರ್ ಹಾಗೂ ವಿವಿಧ ಸಮಾಜಗಳ ಪ್ರಮುಖರು ಸಭೆಯಲ್ಲಿ ಉಪಸ್ಥಿತರಿದ್ದು ಸಲಹೆ- ಸೂಚನೆಗಳನ್ನು ನೀಡಿದರು.
Thirthahalli: ಖಾಸಗಿ ಬಾರ್ ಕ್ಯಾಶಿಯರ್ ಬೈಕ್ ಅಪಘಾತದಲ್ಲಿ ನಿಧನ!
Shivamogga: ಹೆರಿಗೆ ಬಳಿಕ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಯಲ್ಲಿ ಬಾಣಂತಿ ಸಾವು
Kuppalli: ಅದ್ದೂರಿ ಮಂತ್ರ ಮಾಂಗಲ್ಯ; ಕುವೆಂಪು ಪ್ರತಿಷ್ಠಾನ ಸಮಕಾರ್ಯದರ್ಶಿ ರಾಜೀನಾಮೆ ?
Shimoga: ಅಧಿಕಾರಿ ವಿರುದ್ದ ದರ್ಪ ತೋರಿದ ಶಾಸಕರ ಪುತ್ರನ ವಿರುದ್ದ ನಿಖಿಲ್ ಗರಂ
ಈಡಿಗರು ಸತ್ತಿಲ್ಲ, ಮಹಿಳಾ ಅಧಿಕಾರಿ ಹೆದರಬೇಕಿಲ್ಲ: ಪ್ರಣವಾನಂದ ಶ್ರೀ
You seem to have an Ad Blocker on.
To continue reading, please turn it off or whitelist Udayavani.