Shimoga; ಕಾಡಾನೆ ದಾಳಿಗೆ ವ್ಯಕ್ತಿ ಬಲಿ
Team Udayavani, May 3, 2024, 10:58 AM IST
ಶಿವಮೊಗ್ಗ: ರಿಪ್ಪನ್‌ಪೇಟೆ ಸಮೀಪದ ಅರಸಾಳು ಗ್ರಾ ಪಂ ವ್ಯಾಪ್ತಿಯ ಬಸವಾಪುರ ಗ್ರಾಮದಲ್ಲಿ ಕಾಡಾನೆ ದಾಳಿಗೆ ವ್ಯಕ್ತಿ ಬಲಿಯಾದ ಘಟನೆ ನಡೆದಿದೆ.
ತಿಮ್ಮಪ್ಪ (58 ವ) ಮೃತ ವ್ಯಕ್ತಿ. ಇಂದು ಬೆಳಗ್ಗೆ ತಮ್ಮ ಮನೆ ಸಮೀಪದ ಕಾಡಿಗೆ ದರಗು (ದರಗೆಲೆ) ತರಲು ಹೋದ ವೇಳೆ ಈ ಘಟನೆ ನಡೆದಿದೆ ಎಂದು ತಿಳಿದುಬಂದಿದೆ.
ಆನೆ ದಾಳಿ ನಡೆಸುವ ವೇಳೆ ಮೃತ ತಿಮ್ಮಪ್ಪ ಕೂಗಿ ಕೊಂಡಿದ್ದು ಅಲ್ಲೇ ಸಮೀಪದಲ್ಲಿ ದರಗೆಲೆ ಗುಡಿಸುತ್ತಿದ್ದ ಮೂರ್ನಾಲ್ಕು ಮಹಿಳೆಯರು ಏನೆಂದು ನೋಡಿದಾಗ ತಿಮ್ಮಪ್ಪನನ್ನು ಆನೆ ತುಳಿದು ಸಾಯಿಸುತ್ತಿರುವುದು ಕಂಡುಬಂದಿದೆ. ಕೂಡಲೇ ಮನೆಯವರಿಗೆ ಮಾಹಿತಿ ತಿಳಿಸಿದ್ದಾರೆ. ಆನೆ ದಾಳಿಗೊಳಗಾಗಿ ಮೃತಪಟ್ಟ ತಿಮ್ಮಪ್ಪನ ದೇಹ ಸಂಪೂರ್ಣ ನಜ್ಜುಗುಜ್ಜಾಗಿದೆ.
ಕೂಲಿ ಕೆಲಸ ಮಾಡಿಕೊಂಡಿದ್ದ ಇವರು ಪತ್ನಿ, ಓರ್ವ ಪುತ್ರ ಹಾಗೂ ಅಪಾರ ಸಂಖ್ಯೆಯ ಬಂಧು-ಬಳಗವನ್ನು ಅಗಲಿದ್ದಾರೆ.
ಕಳೆದ ಕೆಲ ತಿಂಗಳಿಂದ ಈ ಭಾಗದಲ್ಲಿ ಕಾಡಾನೆ ಉಪಟಳ ಹೆಚ್ಚಾಗಿದ್ದು ಅಡಿಕೆ, ಬಾಳೆ, ಕಬ್ಬು ಸೇರಿದಂತೆ ಇನ್ನಿತರ ಬೆಳೆ ತುಳಿದು, ತಿಂದು ನಾಶ ಮಾಡಿದ್ದವು.
ಘಟನಾ ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು ಭಾರಿ ಸಂಖ್ಯೆಯಲ್ಲಿ ಜನ ಸಮೂಹ ಸೇರಿಕೊಂಡಿದೆ.
ರಿಪ್ಪನ್‌ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
Shimoga; ಕಾಂಗ್ರೆಸ್ ಸರಕಾರ ಹಿಂದೂ ಸಮಾಜದ ತಾಳ್ಮೆ ಪರೀಕ್ಷೆ ಮಾಡುತ್ತಿದೆ: ಈಶ್ವರಪ್ಪ
Shimoga; ತೇಜೋವಧೆ ಮಾಡಲು ನನ್ನ ಹೆಸರಲ್ಲಿ ಕಳಪೆ ಸ್ವೀಟ್ ಹಂಚಿಕೆ; ಡಾ.ಸರ್ಜಿ
Hosanagara: ರಸ್ತೆ ಅಪಘಾತದಲ್ಲಿ ಪತಿ ಮೃತಪಟ್ಟ ಸುದ್ದಿ ಕೇಳಿ ಆತ್ಮಹತ್ಯೆಗೆ ಶರಣಾದ ಪತ್ನಿ
Thirthahalli: ಅದ್ಧೂರಿಯಾಗಿ ನಡೆದ ಎಳ್ಳಮಾವಾಸ್ಯೆ ರಥೋತ್ಸವ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ
Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು
Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು
Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ
Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್ ಪಟೇಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.