ಜೋಗ ಅಭಿವೃದ್ಧಿಗೆ ಯೋಜನೆ: ಡಿಸಿ
Team Udayavani, Sep 29, 2020, 5:42 PM IST
ಸಾಗರ: ವಿಶ್ವವಿಖ್ಯಾತ ಜೋಗ ಜಲಪಾತವನ್ನು ವಿಶ್ವದರ್ಜೆಯ ಪ್ರವಾಸಿ ತಾಣವಾಗಿ ಅಭಿವೃದ್ಧಿಪಡಿಸಲು ಅಗತ್ಯವಾದ ಯೋಜನೆಗಳನ್ನು ರೂಪಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ
ಶಿವಕುಮಾರ್ ತಿಳಿಸಿದರು. ತಾಲೂಕಿನ ಜೋಗದಲ್ಲಿ ವಿಶ್ವ ಪ್ರವಾಸೋದ್ಯಮ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿದ ಮಾತನಾಡಿದ ಅವರು, ಜೋಗ ಜಲಪಾತವನ್ನು ಸರ್ವ ಋತು ಪ್ರವಾಸಿ ತಾಣವಾಗಿ ಆಭಿವೃದ್ಧಿಪಡಿಸಿದರೆ ವರ್ಷಪೂರ್ತಿ ಪ್ರವಾಸಿಗರಿಗೆ ಪ್ರಕೃತಿಯ ನೈಜ ಸೌಂದರ್ಯ ಸವಿಯಲು ಅವಕಾಶವಾಗುತ್ತದೆ. ವಿಶ್ವದೆಲ್ಲೆಡೆಯಿಂದಪ್ರವಾಸ ಪ್ರಿಯರು ಜೋಗದ ವೀಕ್ಷಣೆಗೆ ಬರಲು ಅನುಕೂಲವಾಗುತ್ತದೆ. ಈ ವಿಚಾರವನ್ನು ಪ್ರಧಾನ ಕೇಂದ್ರವಾಗಿರಿಸಿ ನೀಲ ನಕ್ಷೆ ತಯಾರು ಮಾಡಲಾಗುತ್ತಿದೆ. ಸರ್ಕಾರ ಜಲಪಾತ ಪ್ರದೇಶದ ಅಭಿಬೃದ್ಧಿಗೆ ಈಗಾಗಲೇ 120 ಕೋಟಿ ರೂ. ಅನುದಾನವನ್ನು ನೀಡಿದೆ. ಅನುದಾನಗಳನ್ನು ಸಮರ್ಪಕವಾಗಿ ಬಳಸಿ, ಜನೋಪಯೋಗಿ ಕಾರ್ಯಕ್ಕೆ ವಿನಿಯೋಗ ಮಾಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಆದೇಶಿಸಲಾಗಿದೆ ಎಂದು ಅವರು ತಿಳಿಸಿದರು.
ಸಾಗರ ಉಪವಿಭಾಗದ ಸಹಾಯಕ ಆಯುಕ್ತ ಡಾ| ನಾಗರಾಜ್, ಪ್ರವಾಸೋದ್ಯಮ ಇಲಾಖೆಯ ಜಂಟಿ ನಿರ್ದೇಶಕ ಎಸ್.ಎಚ್. ರಾಮಕೃಷ್ಣ, ಕೆ.ಆರ್. ಶಿವಕುಮಾರ್, ಲಕ್ಷ್ಮೀನಾರಾಯಣ, ಸದಸ್ಯ ಕೆ.ಸಿ. ಹರೀಶ್ ಗೌಡ, ಜೆಎಂಎ ಮೇಲ್ವಿಚಾರಕ ಸರ್ಜಂಟ್ ನಿಸಾರ್, ಮಯೂರ ವ್ಯವಸ್ಥಾಪಕ ವಿಜಯೇಂದ್ರ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kundapura: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು
BBK11: ಬಾಯಿ ಮುಚ್ಕೊಂಡು ಇರು.. ಫೈಯರ್ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!
Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.