ಹೊಳೆಹೊನ್ನೂರು:ಮೂರು ವರ್ಷ ಪ್ರೀತಿ: ಬಾಲಕಿ ಜತೆ ವಿವಾಹ, ಯುವಕನ ಬಂಧನ
Team Udayavani, Aug 12, 2022, 7:05 AM IST
ಹೊಳೆಹೊನ್ನೂರು: ಮೂರು ವರ್ಷಗಳಿಂದ ಪ್ರೀತಿಸುತ್ತಿದ್ದ ಅಪ್ರಾಪ್ತ ವಯಸ್ಕ ಯುವತಿಯನ್ನು ಮದುವೆಯಾಗಿರುವ ಹಿನ್ನೆಲೆಯಲ್ಲಿ ಪೋಕ್ಸೋ ಕಾಯ್ದೆಯಡಿಯಲ್ಲಿ ಗ್ರಾಮದ ಪ್ರಕಾಶ್ ಎಂಬಾತನನ್ನು ಹೊಳೆಹೊನ್ನೂರು ಪೊಲೀಸರು ಬಂಧಿಸಿದ್ದಾರೆ.
ಬಾಲಕಿಯು 13 ವರ್ಷ ಪ್ರಾಯದಲ್ಲೇ ಅದೇ ಗ್ರಾಮದ ಯುವಕನನ್ನು ಪ್ರೀತಿಸುತ್ತಿದ್ದಳು. ಮನೆಯಲ್ಲಿ ಗೊತ್ತಾದರೆ ಸಮಸ್ಯೆಯಾದೀತು ಎಂದು ಬಾಲಕಿಯು ಒಂದೂವರೆ ತಿಂಗಳ ಹಿಂದೆ ಯುವಕನೊಂದಿಗೆ ನಾಪತ್ತೆಯಾಗಿದ್ದಳು. ಈ ಬಗ್ಗೆ ಆಕೆಯ ಮನೆಯವರು ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಿದ್ದರು ಹಾಗೂ ಈ ಯುವಕನೇ ಕರೆದೊಯ್ದಿರಬಹುದು ಎಂದು ಅನುಮಾನ ವ್ಯಕ್ತಪಡಿಸಿದ್ದರು.
ಮನೆ ತೊರೆದಿದ್ದ ಜೋಡಿ ದೇವಸ್ಥಾನವೊಂ ರಲ್ಲಿ ಮದುವೆಯಾಗಿ, ಈಗ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾರೆ. ಬಾಲಕಿಯನ್ನು ಬಾಲಮಂದಿರದಲ್ಲಿ ಇರಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.