ಬಿಎಸ್‌ವೈ ರಾಜಕಾರಣಕ್ಕೆ ಅಂಟಿದ ವಿಷ: ಕಾಗೋಡು
Team Udayavani, Oct 21, 2018, 6:15 AM IST
ತೀರ್ಥಹಳ್ಳಿ: ಈ ಉಪ ಚುನಾವಣೆ ಯಾರಿಗೂ ಬೇಡವಾಗಿತ್ತು. ಆದರೆ, ಬಿಜೆಪಿಯ ಅಪ್ಪ-ಮಗನಿಂದಾಗಿ ಈ ಚುನಾವಣೆ ಬರುವಂತಾಗಿದೆ. ರಾಜಕಾರಣಕ್ಕೆ ವಿಷವಾಗಿರುವ ಈ ಅಪ್ಪ-ಮಗನಿಗೆ ಈ ಬಾರಿ ಸರಿಯಾದ ಪಾಠ ಕಲಿಸಬೇಕಿದೆ ಎಂದು ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಹೇಳಿದರು.
ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಯಡಿಯೂರಪ್ಪ ಹಾಗೂ ಬಿ.ವೈ.ರಾಘವೇಂದ್ರ ವಿರುದ್ಧ ಕಿಡಿಕಾರಿದರು. ಮತದಾರ ಈ ಪ್ರಜಾಪ್ರಭುತ್ವ ವ್ಯವಸ್ಥೆಯ ಮಾಲೀಕನಿದ್ದಂತೆ. ಈ ಚುನಾವಣೆ ಯಾರಿಗೂ ಬೇಕಾಗಿರಲಿಲ್ಲ. ಆದರೆ, ಅಪ್ಪ-ಮಕ್ಕಳ ಭ್ರಷ್ಟ ಹಣದಿಂದ ಚುನಾವಣೆ ಬರುವಂತಾಗಿದೆ. ಯಡಿಯೂರಪ್ಪ ಚುನಾವಣೆಯನ್ನು ಸಂತೆಯ ಸಾಮಾನೆಂದು ಭಾವಿಸಿದ್ದಾರೆ.
ರಾಜಕಾರಣವನ್ನು ವ್ಯಾಪಾರೀಕರಣ ಮಾಡಲು ಹೊರಟಿರುವ ಯಡಿಯೂರಪ್ಪ, ಹಿಂದೆ ಸಂಸದರಾಗಿದ್ದಾಗ ಈ ಕ್ಷೇತ್ರಕ್ಕೆ ಏನು ಮಾಡಿದ್ದರು. ನಂತರ ಸಂಸದರಾದ ಅವರ ಮಗ ರಾಘವೇಂದ್ರ ಕ್ಷೇತ್ರಕ್ಕೆ ಮಾಡಿದ್ದಾದರೂ ಏನು ಎಂಬುದನ್ನೆಲ್ಲ ಜನ ಅರಿಯಬೇಕಿದೆ ಎಂದರು. ಜಿಲ್ಲೆಯ ಜನತೆ ಈ ಚುನಾವಣೆಯನ್ನು ಸವಾಲಾಗಿ ಸ್ವೀಕರಿಸಿ, ಯಡಿಯೂರಪ್ಪ ಮತ್ತು ರಾಘವೇಂದ್ರನನ್ನು ಬುಡಸಮೇತ ಕಿತ್ತು, ರಾಜಕಾರಣಕ್ಕೆ ಅಂಟಿದ ವಿಷವನ್ನು ತೆಗೆಯಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ
CID ನೂತನ ಡಿಐಜಿಪಿ ಆಗಿ ಶಾಂತನು ಸಿನ್ಹಾ
Guarantee schemes; ಸಿದ್ದರಾಮಯ್ಯ ವಿರುದ್ಧದ ಅರ್ಜಿ: ವಿಚಾರಣೆ ಡಿ. 6ಕ್ಕೆ ಮುಂದೂಡಿಕೆ
Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್.ಅಶೋಕ್
50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ
MUST WATCH
ಹೊಸ ಸೇರ್ಪಡೆ
Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ
Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ
Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು
Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ
Gujarat: 700 ಕೆ.ಜಿ. ಡ್ರಗ್ಸ್ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.