ಅತ್ಯಾಚಾರ ನಡೆಸಿದ ಯುವಕನ ಮೇಲಿನ ದೂರು ವಾಪಸ್ ಪಡೆಯುವಂತೆ ಧಮ್ಕಿ
ದೂರು ದಾಖಲಾದರೂ ಸಹ ಅತ್ಯಾಚಾರ ಆರೋಪಿ ವಿದೇಶಕ್ಕೆ ಹಾರಿದ್ದಾನೆ !
Team Udayavani, Jun 14, 2022, 11:07 AM IST
Representative Image used
ಹೊಳೆಹೊನ್ನೂರು: ಬಾಲಕಿ ಮೇಲೆ ಅತ್ಯಾಚಾರ ನಡೆಸಿದ ಯುವಕನ ಮೇಲಿನ ದೂರು ವಾಪಸ್ ಪಡೆಯುವಂತೆ ಧಮ್ಕಿ ಹಾಕುತ್ತಿರುವ ಘಟನೆ ಭದ್ರಾವತಿ ತಾಲೂಕು ಹೊಳೆಹೊನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಇಲ್ಲಿನ ಗ್ರಾಮವೊಂದರಲ್ಲಿ ಅಪ್ರಾಪ್ತೆ ಮೇಲೆ ಅದೇ ಗ್ರಾಮದ ಯುವಕ ಅತ್ಯಾಚಾರ ನಡೆಸಿರುವ ಬಗ್ಗೆ ದೂರು ದಾಖಲಾಗಿತ್ತು.
ಅತ್ಯಾಚಾರ ನಡೆದ ಬಳಿಕ ಯುವಕ ಈ ವಿಚಾರವನ್ನು ಯಾರಿಗೂ ಹೇಳದಂತೆ ಬಾಲಕಿಗೆ ಬೆದರಿಸಿದ್ದಾನೆ. ಆದರೆ ಅಪ್ರಾಪ್ತೆಯು ತನ್ನ ಅಜ್ಜಿಯ ಬಳಿ ಘಟನೆ ಬಗ್ಗೆ ಹೇಳಿಕೊಂಡಿದ್ದಾಳೆ. ಈ ಕುರಿತು ಆಕೆಯ ಪೋಷಕರು ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು.
ನಂತರ ಬಾಲಕಿ ಮಹಿಳಾ ಮತ್ತು ಮಕ್ಕಳ ಘಟಕದಲ್ಲಿ 10 ದಿನಗಳ ಕಾಲ ರಕ್ಷಣೆಯಲ್ಲಿದ್ದಳು. ಬಳಿಕ ಬಾಲಕಿಯನ್ನು ಪೋಷಕರು ತಮ್ಮ ಮನೆಗೆ ಕರೆದುಕೊಂಡು ಬಂದಿದ್ದರು.ಇತ್ತ ದೂರು ದಾಖಲಾಗುತ್ತಿದ್ದಂತೆ ಅತ್ಯಾಚಾರ ಎಸಗಿದ ಆರೋಪಿ ತನ್ನ ತಂದೆಯ ಜೊತೆ ಆಫ್ರಿಕಾದ ಕ್ಯಾಮರೂನ್ಗೆ ಹಾರಿದ್ದಾನೆ. ಈಗ ಅಲ್ಲಿಂದಲೇ ಬಾಲಕಿಗೆ ವಾಟ್ಸ್ ಆ್ಯಪ್ ಕರೆ ಮೂಲಕ ದೂರು ವಾಪಸ್ ಪಡೆಯುವಂತೆ ಧಮ್ಕಿ ಹಾಕುತ್ತಿದ್ದಾನಂತೆ.
ಅದರೆ ದೂರು ದಾಖಲಾದರೂ ಸಹ ಅತ್ಯಾಚಾರ ಆರೋಪಿ ವಿದೇಶಕ್ಕೆ ತೆರಳಿದ್ದು ಹೇಗೆ ಎಂಬ ಪ್ರಶ್ನೆ ಮೂಡಿದೆ. ಅಲ್ಲದೆ ಈಗ ಧಮ್ಕಿ ಹಾಕಿದ ಕುರಿತು ಪೊಲೀಸರಿಗೆ ತಿಳಿಸಿದರೆ, ಮತ್ತೆ ದೂರು ನೀಡಿ ಎಂದು ಹೇಳುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ನೊಂದ ಕುಟುಂಬದವರು ಎಸ್ಪಿ ಕಚೇರಿಗೆ ತೆರಳಿ ದೂರು ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Holehonnur: ಎರಡು ಪ್ರತ್ಯೇಕ ರಸ್ತೆ ಅಪಘಾತ
Shivamogga: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಓ ಈಶ್ವರಪ್ಪ
Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು
MT Vasudevan Nair: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ
Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ
Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?
Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.