Anandpura: ಗಾಂಜಾ ತಡೆಗೆ ಪೊಲೀಸ್ ಇಲಾಖೆ ಮುಂದಾಗಬೇಕು: ಮೋಹನ್ ಕುಮಾರ್
Team Udayavani, Sep 20, 2024, 11:34 AM IST
ಆನಂದಪುರ: ಆನಂದಪುರ ಸುತ್ತ – ಮುತ್ತಲ ಪ್ರದೇಶಗಳಲ್ಲಿ ಯುವ ಜನಾಂಗ ಗಾಂಜಾ ಸೇವನೆ ಮಾಡುವವರ ಸಂಖ್ಯೆ ಹೆಚ್ಚಾಗಿದ್ದು ಗಾಂಜಾ ಸೇವನೆ ತಡೆಗಟ್ಟಲು ಸೂಕ್ತ ಕಾನೂನು ಕ್ರಮ ಕೈಗೊಳ್ಳುವಲ್ಲಿ ಪೊಲೀಸ್ ಇಲಾಖೆ ಮುಂದಾಗಬೇಕು ಎಂದು ಗ್ರಾಮ ಪಂಚಾಯತ್ ಅಧ್ಯಕ್ಷ ಮೋಹನ್ ಕುಮಾರ್ ತಿಳಿಸಿದರು.
ಸ್ಥಳೀಯ ಗ್ರಾಮ ಪಂಚಾಯತಿಯಲ್ಲಿ ಗುರುವಾರ ನಡೆಸಿದ ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನ ಸಭೆಯಲ್ಲಿ ಮಾತನಾಡಿದ ಅವರು ಯುವ ಜನಾಂಗ ಗಾಂಜಾ ಸೇವನೆ ಮಾಡುತ್ತಿರುವ ಬಗ್ಗೆ ಮಾಹಿತಿ ದೊರೆತಿದ್ದು ಕಾನೂನುಬಾಹಿರವಾದ ಚಟುವಟಿಕೆಗಳಲ್ಲಿ ಭಾಗಿಯಾಗುವಂತಹರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಪೊಲೀಸ್ ಇಲಾಖೆಗೆ ತಿಳಿಸಿದರು.
ಅಲ್ಲದೆ ವಾರದ ಸಂತೆಯ ಸಂದರ್ಭದಲ್ಲಿ ಜನಸಾಮಾನ್ಯರಿಗೆ ಅನುಕೂಲವಾಗುವ ರೀತಿಯಲ್ಲಿ ಟ್ರಾಫಿಕ್ ಸಮಸ್ಯೆಯನ್ನು ಸರಿಪಡಿಸುವಂತೆ ತಿಳಿಸಿದರು.
ಕೃಷಿ ಮತ್ತು ತೋಟಗಾರಿಕಾ ಇಲಾಖೆಯ ಅಧಿಕಾರಿಗಳು ರೈತರಿಗೆ ಸರಿಯಾದ ಸಮಯದಲ್ಲಿ ಮಾಹಿತಿ ನೀಡದೆ ಬೆಳೆಯಲ್ಲಾಗುತ್ತಿರುವ ನಷ್ಟದ ಬಗ್ಗೆ ಆತಂಕ ಪಡುತ್ತಿದ್ದಾರೆ. ಆದ್ದರಿಂದ ಕೃಷಿ ಇಲಾಖೆ ಮತ್ತು ತೋಟಗಾರಿಕಾ ಇಲಾಖೆಯ ಅಧಿಕಾರಿಗಳು. ರೈತರಗೆ ಸರಿಯಾದ ಸಮಯದಲ್ಲಿ ಮಾಹಿತಿ ನೀಡಿ. ಸಮಸ್ಯೆ ಉಂಟಾದರೆ ತಕ್ಷಣವೇ ಸ್ಪಂದಿಸುವಂತಾಗಬೇಕು.
ಸ್ಥಳೀಯ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಇರುವಂತಹ ಇಸಿಜಿ ಹಾಗೂ ಎಕ್ಸ್ ರೇ ಯಂತ್ರಗಳು ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ ತಕ್ಷಣವೇ ಯಂತ್ರಗಳನ್ನು ಬದಲಿಸುವಂತೆ ಆರೋಗ್ಯ ಇಲಾಖೆಗೆ ತಿಳಿಸಲಾಯಿತು.
ಕೆಪಿಎಸ್ ಶಾಲೆಯ ಆಸ್ತಿಯಿಂದ ಬರುವಂತಹ ಆದಾಯದ ಬಗ್ಗೆ ಗ್ರಾಮಡಲಿತಕ್ಕೆ ತಿಳಿಸಬೇಕು ಅಲ್ಲದೆ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಹೆಚ್ಚಿನ ಶ್ರಮವಹಿಸಬೇಕು ಎಂದರು.
ಗ್ರಂಥಾಲಯದ ಮೇಲ್ವಿಚಾರಕರು ಸಮಯ ಪಾಲನೆ ಮಾಡುವುದರೊಂದಿಗೆ ಓದುವ ಬೆಳಕು ಎಂಬ ಯೋಜನೆ ಅಡಿಯಲ್ಲಿ ಶಾಲಾ ಮಕ್ಕಳನ್ನು ಹೆಚ್ಚಾಗಿ ನೋಂದಾವಣೆ ಮಾಡಿಕೊಂಡು ಇಲಾಖೆಯ ಮೂಲಕ ವಿದ್ಯಾರ್ಥಿಗಳಿಗೆ ಪೂರ್ಣ ಮಾಹಿತಿ ನೀಡಬೇಕು.
ಪ್ರತಿ ಮೂರು ತಿಂಗಳಿಗೆ ಒಮ್ಮೆ ಕೆಡಿಪಿ ಸಭೆಯನ್ನು ನಡೆಸಲಾಗುತ್ತದೆ. ಸಭೆಗಳಲ್ಲಿ ಯಾವುದೇ ಇಲಾಖೆಯ ಅಧಿಕಾರಿಗಳ ಬಗ್ಗೆ ಸಾರ್ವಜನಿಕರಿಂದ ದೂರು ಬರೆದ ರೀತಿಯಲ್ಲಿ ತಮ್ಮ ಕರ್ತವ್ಯವನ್ನು ನಿರ್ವಹಿಸುವಂತೆ ತಿಳಿಸಿದರು.
ಇದನ್ನೂ ಓದಿ: Bengaluru: ನಗರದಲ್ಲಿ 3 ವರ್ಷದಲ್ಲಿ 9700 ಮರಗಳ ಹನನ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು
NABARD ಸಾಲ ಮಿತಿ ಹೆಚ್ಚಿಸಿ: ನಿರ್ಮಲಾಗೆ ಸಿಎಂ ಮನವಿ
Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ
Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ
Congress: ಜಮೀರ್ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.