ಸಂಸದೆ ಸಾಧ್ವಿ ವಿರುದ್ಧ ದೂರು: ಉದ್ಯಮಿಗೆ ನೇರವಾಗಿ ಬಂದು ದೂರು ನೀಡಲು ಪೊಲೀಸರಿಂದ ನೋಟಿಸ್
Team Udayavani, Dec 28, 2022, 8:56 AM IST
ಶಿವಮೊಗ್ಗ: ಶಿವಮೊಗ್ಗದಲ್ಲಿ ನಡೆದ ಹಿಂಜಾವೇ ತ್ರೈ ವಾರ್ಷಿಕ ಸಮ್ಮೇಳನದಲ್ಲಿ ಪ್ರಚೋದನಕಾರಿ ರೀತಿ ಮಾತಾನಾಡಿದ್ದ ಸಂಸದೆ ಸಾಧ್ವಿ ಪ್ರಜ್ಞಾಸಿಂಗ್ ವಿರುದ್ಧ ದೂರು ನೀಡಿದ್ದ ದೆಹಲಿಯಲ್ಲಿರುವ ಉದ್ಯಮಿಗೆ ಕೋಟೆ ಪೊಲೀಸರು ನೇರವಾಗಿ ಬಂದು ದೂರು ನೀಡಿ ಎಂದು ನೋಟಿಸ್ ಜಾರಿ ಮಾಡಿದ್ದಾರೆ.
ಇತ್ತೀಚೆಗೆ ಶಿವಮೊಗ್ಗದಲ್ಲಿ ನಡೆದ ಹಿಂಜಾವೇ ತ್ರೈ ವಾರ್ಷಿಕ ಸಮ್ಮೇಳನದಲ್ಲಿ ಸಂಸದೆ ಸಾಧ್ವಿ ಪ್ರಜ್ಞಾಸಿಂಗ್ ಅವರು ಲವ್ ಜಿಹಾದ್ನ ಬಗ್ಗೆ ಮಾತನಾಡುತ್ತಾ ಮನೆಯಲ್ಲಿರುವ ತರಕಾರಿ ಹೆಚ್ಚುವ ಚಾಕುವನ್ನು ಹೆಚ್ಚು ಚೂಪಾಗಿಟ್ಟಿರಿ ಎಂದು ಹೇಳಿಕೆ ನೀಡಿದ್ದರು. ಇದು ಪ್ರಚೋದನಕಾರಿ ಮಾತು ಎಂದು ಸ್ವಾಧ್ವಿ ವಿರುದ್ಧ ಉದ್ಯಮಿ ತೆಹಸೀನ್ ಪೂನಾವಾಲಾ ಟ್ವೀಟ್ ಮೂಲಕ ಎಸ್ಪಿ ಮಿಥುನ್ ಕುಮಾರ್ ಅವರಿಗೆ ಮನವಿ ಮಾಡಿದ್ದರು.
ಇದಕ್ಕೆ ಪ್ರತಿಕ್ರಿಯೆಯಾಗಿ ಮಾಹಿತಿಯನ್ನು ಡಿಜಿಟಲ್ ರೂಪದಲ್ಲಿ ಸ್ವೀಕರಿಸಿರುವುದರಿಂದ, ಅದನ್ನು ಕಳುಹಿಸುವ ವ್ಯಕ್ತಿಯ ದೃಢೀಕರಣವನ್ನು ಪರಿಶೀಲಿಸಬೇಕು. ಅಲ್ಲದೆ, ಸುಪ್ರೀಂ ಕೋರ್ಟ್‌ನ ಲಲಿತಾ ಕುಮಾರಿ ತೀರ್ಪಿನ ಪ್ರಕಾರ, ಸ್ವೀಕರಿಸಿದ ಮಾಹಿತಿಯ ಸತ್ಯಾಸತ್ಯತೆಯನ್ನು ಪರಿಶೀಲಿಸಲು ಮತ್ತು ಪ್ರಾಥಮಿಕ ತನಿಖೆ ನಡೆಸಲು ಅಥವಾ ಎಫ್‌ಐಆರ್ ದಾಖಲಿಸಲು ಸೆಕ್ಷನ್ 154 ರ ಅಡಿಯಲ್ಲಿ ದೂರುದಾರ ನೇರವಾಗಿ ಬಂದು ದೂರು ದಾಖಲಿಸಬೇಕು. ದೂರುದಾರ ತೆಹಸೀನ್ ಪೂನಾವಾಲಾ ಇಂದು ಬೆಳಗ್ಗೆ (ಡಿ.28 ರಂದು) 11 ಗಂಟೆಯ ಒಳಗೆ ಠಾಣೆಗೆ ಬಂದು ದೂರು ದಾಖಲಿಸಿ ಎಂದು ನೋಟಿಸ್ ಕಳುಹಿಸಿದ್ದಾರೆ.
I have filed a complaint against #PragyaThakur ji (MP) for the hate speech that she delivered on 25.12.2022 at Shivamogga with the SP shri G.K Mithun Kumar.
Requesting Shivamogga police to kindly register an FIR u/s 153-A, 153-B,268,295-A,298,504,508 (IPC).@CMOkamoto @BSBommai pic.twitter.com/KxNXpYUHS5— Tehseen Poonawalla Official 🇮🇳 (@tehseenp) December 26, 2022
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Havyaka ಭಾಷೆಗೆ ಅಕಾಡೆಮಿ ಅಥವಾ ಅಧ್ಯಯನ ಪೀಠ ಅಗತ್ಯ: ರವಿಶಂಕರ್ ಭಟ್
Madikeri: ಹಲಸಿನ ಮರವೇರಿದ ಕಾರ್ಮಿಕನ ಮೇಲೆ ಗುಂಡು… ಆಸ್ಪತ್ರೆ ದಾರಿ ಮಧ್ಯೆ ಮೃತ್ಯು
ವಕ್ಫ್ ಆಸ್ತಿ ತಿದ್ದುಪಡಿ ವಿಚಾರದಲ್ಲಿ ಸಿಎಂ ಅಸಹಾಯಕರು: ಕುಮಾರ್ ಬಂಗಾರಪ್ಪ
Hospet: ವಕ್ಫ್ ನಿಂದ ಹಿಂದೂ – ಮುಸ್ಲಿಂ ಸಮಾಜಕ್ಕೆ ಅನ್ಯಾಯ; ರಮೇಶ್ ಜಾರಕಿಹೊಳಿ
Yadgir: ನಗರ ಪೊಲೀಸರ ಕಾರ್ಯಾಚರಣೆ… 7 ಲಕ್ಷ ರೂ. ಮೌಲ್ಯದ 22 ಬೈಕ್ ವಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Havyaka ಭಾಷೆಗೆ ಅಕಾಡೆಮಿ ಅಥವಾ ಅಧ್ಯಯನ ಪೀಠ ಅಗತ್ಯ: ರವಿಶಂಕರ್ ಭಟ್
Ramnagar; 30ಕ್ಕೂ ಅಧಿಕ ಊರುಗಳಲ್ಲಿ ಆತಂಕ ಹುಟ್ಟಿಸಿದ್ದ ಕಾಡಾನೆ ಸೆರೆ
Yakshagana;ಅಧ್ಯಯನ, ಪಾತ್ರ ಜ್ಞಾನದಿಂದಷ್ಟೇ ಕಲಾವಿದ ರಂಗಸ್ಥಳದಲ್ಲಿ ಮೆರೆಯಲು ಸಾಧ್ಯ
Drugs; ಮಾರಾಟ, ಸೇವನೆ : ಮಂಗಳೂರು 1,090, ಉಡುಪಿ 116 ಪ್ರಕರಣ ದಾಖಲು
Udupi; ಕ್ಯಾನ್ಸರ್‌ನಿಂದ ಬಳಲುತ್ತಿದ್ದ ರೋಗಿಯ ರಕ್ಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.