ಅಪಘಾತಕ್ಕೆ ಆಹ್ವಾನ ನೀಡುತ್ತಿರುವ ರಾಷ್ಟ್ರೀಯ ಹೆದ್ದಾರಿಯ ಗುಂಡಿ; ಗ್ರಾಮಸ್ಥರ ಆಕ್ರೋಶ
Team Udayavani, Dec 13, 2024, 2:58 PM IST
ತೀರ್ಥಹಳ್ಳಿ: ರಾಷ್ಟ್ರೀಯ ಹೆದ್ದಾರಿ 169 ರ ತೀರ್ಥಹಳ್ಳಿ- ಕೊಪ್ಪ ರಸ್ತೆಯ ಮೇಲಿನಕುರುವಳ್ಳಿ ಸಮೀಪ ಮುತ್ತುಗುಂಡಿ ಕಾಂಪ್ಲೆಕ್ಸ್ ಎದುರು ಪೈಪ್ ಲೈನ್ ಒಡೆದು ಬಾರಿ ಗಾತ್ರದ ಗುಂಡಿ ಬಿದ್ದು ಒಂದುವರೆ ತಿಂಗಳಿಂದ ರಸ್ತೆ ಮದ್ಯೆ ಕುಡಿಯುವ ನೀರು ನಿತ್ಯ ಪೊಲಾಗುತ್ತಿದೆ. ಸಂಬಂಧಪಟ್ಟ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಕಂಡರೂ ಕಾಣದಂತೆ ಕಣ್ಣುಮುಚ್ಚಿ ಕುಳಿತಿದ್ದಾರೆ ಎಂದು ಸ್ಥಳೀಯ ಗ್ರಾಮಸ್ಥರು ಆರೋಪಿಸಿದ್ದಾರೆ.
ಇತ್ತೀಚಿನ ದಿನಗಳಲ್ಲಿ ಪ್ರತಿ ನಿತ್ಯ ಈ ಹೊಂಡ-ಗುಂಡಿ ಬಿದ್ದ ರಸ್ತೆಯಲ್ಲಿ ಅಪಘಾತಗಳು ಸಂಭವಿಸುತ್ತದೆ ಹಾಗೂ ಕುಡಿಯುವ ನೀರು ಪೊಲಾಗುತ್ತಿದೆ. ಆದರೂ ಹೊಂಡ-ಗುಂಡಿ ಸರಿಪಡಿಸುವಲ್ಲಿ ಹೆದ್ದಾರಿ ಅದಿಕಾರಿಗಳು ನಿರ್ಲಕ್ಷ್ಯ ತೋರುತ್ತಿದ್ದಾರೆ ಎಂದು ಸ್ಥಳೀಯ ಗ್ರಾಮಸ್ಥರಿಂದ ಮಾತು ಕೇಳಿ ಬರುತ್ತಿದೆ.
ರಾತ್ರಿ ವೇಳೆ ಸಂಚರಿಸುವ ವಾಹನಗಳಿಗೆ ಈ ಹೊಂಡ ಗುಂಡಿ ಕಾಣದೆ ನಿತ್ಯ ಅಪಘಾತಗಳು ಸಂಭವಿಸುತ್ತಿವೆ. ತಕ್ಷಣ ಸಂಬಂಧಪಟ್ಟ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದವರು ಗಮನಿಸಿ ರಸ್ತೆಯ ಹೊಂಡ ಸರಿಪಡಿಸಿ ನೀರು ಪೊಲಾಗದಂತೆ ಕ್ರಮವಹಿಸಿ ಸರಿಪಡಿಸುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Akhilesh Yadav; ಮುಸ್ಲಿಮರನ್ನು ‘ಎರಡನೇ ದರ್ಜೆ’ ಪ್ರಜೆಗಳಾಗಿಸಲು ಪ್ರಯತ್ನಗಳು ನಡೆಯುತ್ತಿವೆ
Rashtrotthana Parishat : ಚೇರ್ಕಾಡಿಯಲ್ಲಿ ಸಿಬಿಎಸ್ಇ ಶಾಲೆ, ಪ.ಪೂ. ಕಾಲೇಜು ಪ್ರಾರಂಭ
Pakistan: ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ʼಮತ್ತೆʼ ವಿದಾಯ ಹೇಳಿದ ಪಾಕಿಸ್ತಾನದ ಆಲ್ರೌಂಡರ್
Atul Subhash ಪ್ರಕರಣ; ಯುಪಿಯಲ್ಲಿರುವ ಪತ್ನಿಯ ಮನೆಗೆ ನೋಟಿಸ್ ಅಂಟಿಸಿದ ಬೆಂಗಳೂರು ಪೊಲೀಸರು
Gangolli Election:ಗಂಗೊಳ್ಳಿ ಗ್ರಾ.ಪಂ. ಚುನಾವಣೆಯಲ್ಲಿ ಕೈ ಬೆಂಬಲಿತ ಅಭ್ಯರ್ಥಿಗಳ ಮೇಲುಗೈ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.