Sharavati ವಿದ್ಯುದಾಗಾರಗಳಲ್ಲಿ ವಿದ್ಯುತ್ ಉತ್ಪಾದನೆ ನಿಲ್ಲಿಸಿ; ಪ್ರಸನ್ನ ಕೆರೆಕೈ ಆಗ್ರಹ
ಲಾಂಚ್ ಸಂಚಾರಕ್ಕೆ ಸಮಸ್ಯೆಯ ಆತಂಕ
Team Udayavani, Jan 17, 2024, 4:31 PM IST
ಸಾಗರ: ಪ್ರಸ್ತುತ ಲಿಂಗನಮಕ್ಕಿ ಜಲಾಶಯದಲ್ಲಿ ನೀರಿನ ಮಟ್ಟ 1774 ಅಡಿ ಇದೆ. ಇದೇ ರೀತಿ ನಿರಂತರ ವಿದ್ಯುತ್ ಉತ್ಪಾದನೆ ಮಾಡಿ ಇನ್ನು 13ಅಡಿ ನೀರು ಕಡಿಮೆಯಾಗಿ ಜಲಾಶಯದ ಮಟ್ಟ1761 ಅಡಿಗೆ ತಲುಪಿದರೆ ಲಾಂಚ್ ಸಂಚಾರ ಸಾಧ್ಯವಿಲ್ಲದ ಸ್ಥಿತಿ ನಿರ್ಮಾಣವಾಗುತ್ತದೆ. ಆಗ ಶರಾವತಿ ಹಿನ್ನೀರಿನ ಸಂತ್ರಸ್ತ ಜನ ತೀವ್ರ ಸಂಕಷ್ಟಕ್ಕೀಡಾಗುತ್ತಾರೆ ಎಂದು ಕರೂರು ಭಾರಂಗಿ ಹೋಬಳಿ ಜನಧ್ವನಿ ಹೋರಾಟ ವೇದಿಕೆ ಅಧ್ಯಕ್ಷ ಪ್ರಸನ್ನ ಕೆರೆಕೈ ಆತಂಕ ವ್ಯಕ್ತಪಡಿಸಿದ್ದಾರೆ.
ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾಡಿಗೆ ಬೆಳಕು ನೀಡಲು ಸರ್ವಸ್ವವನ್ನು ತ್ಯಾಗ ಮಾಡಿರುವ ಹಿನ್ನೀರಿನ ಜನರ ಸಾರಿಗೆ ಸಂಪರ್ಕವನ್ನು ಉಳಿಸಿಕೊಡುವತ್ತ ಜಿಲ್ಲಾ ಉಸ್ತುವಾರಿ ಸಚಿವರು, ಸ್ಥಳೀಯ ಶಾಸಕರು ಗಮನ ಹರಿಸಬೇಕು. ಈ ಹಿನ್ನೆಲೆಯಲ್ಲಿ ಮೇ ತಿಂಗಳವರೆಗೆ ಶರಾವತಿ ನದಿಪಾತ್ರದ ವಿದ್ಯುದಾಗಾರಗಳಲ್ಲಿ ವಿದ್ಯುತ್ ಉತ್ಪಾದನೆಯನ್ನು ನಿಲ್ಲಿಸಲು ಜಿಲ್ಲಾ ಉಸ್ತುವಾರಿ ಸಚಿವರು, ಸ್ಥಳೀಯ ಶಾಸಕರು ಇಂಧನ ಸಚಿವರಿಗೆ ಮತ್ತು ಸರ್ಕಾರಕ್ಕೆ ಮನವಿ ಮಾಡಬೇಕು ಎಂದು ಒತ್ತಾಯಿಸಿದರು.
ಕಳೆದ ವರ್ಷ ಮಳೆ ವಿಪರೀತ ಕಡಿಮೆಯಾಗಿದ್ದರಿಂದ ಲಿಂಗನಮಕ್ಕಿ ಜಲಾಶಯದಲ್ಲಿ ನೀರಿನ ಮಟ್ಟ ತೀರ ಕಡಿಮೆ ಇದೆ. ಲಿಂಗನಮಕ್ಕಿ ನೀರನ್ನು ಬಳಸಿಕೊಂಡು ಬೇರೆಬೇರೆ ವಿದ್ಯುದಾಗಾರಗಳಲ್ಲಿ ಹೆಚ್ಚಿನ ವಿದ್ಯುತ್ ಉತ್ಪಾದನೆ ಮಾಡಲಾಗುತ್ತದೆ. ಇದೇ ರೀತಿ ವಿದ್ಯುತ್ ಉತ್ಪಾದನೆಗೆ ನೀರು ಬಳಕೆ ಮಾಡಿದರೆ ಡ್ಯಾಂ ನೀರು ಖಾಲಿಯಾಗುವ ಜೊತೆಗೆ ಶರಾವತಿ ನದಿಪಾತ್ರದಲ್ಲಿ ಹಿನ್ನೀರು ಕಡಿಮೆಯಾಗುತ್ತದೆ. ಆಗ ಲಾಂಚ್ ಓಡಾಡಲು ಸಾಧ್ಯವಾಗುವುದಿಲ್ಲ ಎಂಬುದರತ್ತ ಗಮನ ಸೆಳೆದರು.
ಈಗಾಗಲೇ ಹಿನ್ನೀರು ಕಡಿಮೆಯಾಗಿರುವುದರಿಂದ ಲಾಂಚ್ ನಿಲ್ಲಿಸಲು ರ‍್ಯಾಂಪ್‌ಗಳ ಸಮಸ್ಯೆಯಾಗುತ್ತಿದೆ. ಕೆಲವು ಕಡೆಗಳಲ್ಲಿ ರ‍್ಯಾಂಪ್‌ಗಳಿದ್ದರೂ ಅದು ನೀರಿನ ಮಟ್ಟ ಕಡಿಮೆ ಇದ್ದಾಗ ಉಪಯೋಗಕ್ಕೆ ಬರುವುದಿಲ್ಲ. ಈ ಹಿನ್ನೆಲೆಯಲ್ಲಿ ಕಳಸವಳ್ಳಿ ದಡ ಮತ್ತು ಅಂಬಾರಗೋಡ್ಲು ದಡದಲ್ಲಿ ಅಗತ್ಯ ಇರುವ ಕಡೆಗಳಲ್ಲಿ ಲಾಂಚ್ ನಿಲ್ಲಿಸಲು ಹೆಚ್ಚುವರಿ ರ‍್ಯಾಂಪ್ ನಿರ್ಮಿಸಲು ಶಾಸಕರು ಗಮನ ಹರಿಸಬೇಕು. ಮಳೆಗಾಲ ಪ್ರಾರಂಭವಾಗುವ ತನಕ ಹಿನ್ನೀರಿನ ಜನರಿಗೆ ಲಾಂಚ್ ಸೌಲಭ್ಯ ಸುಗಮವಾಗಿ ಸಿಗುವಂತೆ ಅಗತ್ಯ ಕ್ರಮ ಕೈಗೊಳ್ಳಬೇಕು. ಒಂದೊಮ್ಮೆ ವಿದ್ಯುತ್ ಉತ್ಪಾದನೆ ಇನ್ನಿತರೆ ಕಾರಣಕ್ಕೆ ಹಿನ್ನೀರನ್ನು ಬಳಕೆ ಮಾಡಿಕೊಂಡು ಸಂತ್ರಸ್ತ ಜನರಿಗೆ ಲಾಂಚ್ ಸೌಲಭ್ಯಕ್ಕೆ ಅಡ್ಡಿಪಡಿಸಿದರೆ ವೇದಿಕೆ ವತಿಯಿಂದ ಹಿನ್ನೀರಿನ ಜನರ ಸಹಭಾಗಿತ್ವದಲ್ಲಿ ಪ್ರತಿಭಟನೆ ನಡೆಸುವುದು ಅನಿವಾರ್ಯವಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಸುದ್ದಿಗೋಷ್ಠಿಯಲ್ಲಿ ಅನಿಲಕುಮಾರ್, ಜಿ.ಪಿ.ಶ್ರೀನಿವಾಸ್ ಗದ್ದೆಮನೆ, ಶ್ರೀಧರ ಚುಟ್ಟಿಕೆರೆ, ಮಂಜಯ್ಯ ಜೈನ್ ಸಂಸೆ, ಸಚಿನ್, ರಾಘವೇಂದ್ರ, ಗಣಪತಿ ಹಿನ್ಸೋಡಿ ಇನ್ನಿತರರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CT Ravi Arrest; ಧೂರ್ತ ಸರ್ಕಾರ ನೀಚತನದ ಕೆಲಸ ಮಾಡಿದೆ: ಆರಗ ಜ್ಞಾನೇಂದ್ರ
Shimoga; ಇದು ಸಿ.ಟಿ.ರವಿ ಅವರನ್ನು ಸದೆಬಡಿಯುವ ಪ್ರಯತ್ನ;ಶಾಸಕ ಚನ್ನಬಸಪ್ಪ
Sakrebailu: ತಾಂತ್ರಿಕ ದೋಷದಿಂದ ಸುಟ್ಟು ಕರಕಲಾದ ಬಸ್
ಭದ್ರಾವತಿಯ ರೈಸ್ಮಿಲ್ನಲ್ಲಿ ಬಾಯ್ಲರ್ ಸ್ಫೋಟ: ಕಣ್ಮರೆಯಾಗಿದ್ದ ವ್ಯಕ್ತಿಯ ಶವ ಪತ್ತೆ
Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್‌ಮಿಲ್ ಕುಸಿತ:7 ಮಂದಿಗೆ ಗಾಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್ ರನ್ ಆರಂಭಿಸಿದ ಸಿ.ಟಿ.ರವಿ
Healt: ಶಿಶುವಿನ ಹಾಲು ಹಲ್ಲುಗಳು ನೀವು ತಿಳಿದಿರಬೇಕಾದ 9 ಲಕ್ಷಣಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.