ಮತದಾನ ಜಾಗೃತಿಗೆ ಆದ್ಯತೆ
Team Udayavani, Mar 17, 2019, 10:17 AM IST
ಶಿವಮೊಗ್ಗ: ಜಿಲ್ಲೆಯಲ್ಲಿ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ನಡೆಯಲು ವ್ಯಾಪಕ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು ಎಂದು ಜಿಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಕೆ. ಶಿವರಾಮೇ ಗೌಡ ತಿಳಿಸಿದರು.
ಶನಿವಾರ ಜಿಪಂ ಸಭಾಂಗಣದಲ್ಲಿ ಮತದಾರರ ಜಾಗೃತಿ ಕಾರ್ಯಕ್ರಮಗಳ ಆಯೋಜನೆ ಕುರಿತಾಗಿ ಎಲ್ಲಾ ಇಲಾಖಾಧಿಕಾರಿಗಳೊಂದಿಗೆ ನಡೆಸಿದ ಸ್ವೀಪ್ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.
ಈ ಬಾರಿ ಶಿವಮೊಗ್ಗ ಜಿಲ್ಲೆ ಮತದಾನದಲ್ಲಿ ನಂಬರ್ ಒನ್ ಆಗಬೇಕು ಎಂಬ ಗುರಿ ಹೊಂದಲಾಗಿದೆ. ಇದಕ್ಕೆ ಪೂರಕವಾ ಗಿ ಕಳೆದ ಬಾರಿ ಕಡಿಮೆ ಮತದಾನವಾಗಿರುವ ಮತಗಟ್ಟೆಗಳನ್ನು ಗುರುತಿಸಲಾಗಿದೆ. ಅಂತಹ ಮತಗಟ್ಟೆ ವ್ಯಾಪ್ತಿಯಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ತೀವ್ರಗೊಳಿಸಲಾಗುವುದು. ಕಡಿಮೆ ಮತದಾನವಾಗಿರುವ ಮತಗಟ್ಟೆ ವ್ಯಾಪ್ತಿಯಲ್ಲಿ ಮನೆಮನೆ ಭೇಟಿ, ಮತದಾನ ಕಡಿಮೆಯಾಗಲು ಕಾರಣ ತಿಳಿದು ಅದನ್ನು ಸರಿಪಡಿಸಲು ಪ್ರಯತ್ನಿಸಲಾಗುವುದು. ಎಲ್ಲಾ ಇಲಾಖೆಗಳು ತಮ್ಮ ವ್ಯಾಪ್ತಿಯಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂದು ಹೇಳಿದರು.
ಯುವಜನ ಹಬ್ಬ ಆಯೋಜನೆ: ಈ ಬಾರಿ ಯುವ ಮತದಾರರನ್ನು ಸೆಳೆಯಲು ಅದರಲ್ಲೂ ಪ್ರಥಮ ಬಾರಿಗೆ ಮತ ಚಲಾಯಿಸುವ ಅಧಿ ಕಾರ ಪಡೆದಿರುವವರನ್ನು ಸೆಳೆಯಲು ಪ್ರತಿ ತಾಲೂಕಿನಲ್ಲಿ ಯುವಜನ ಹಬ್ಬ ಆಯೋಜಿಸಲಾಗುವುದು. ಇಲ್ಲಿ ಯುವ ಮತದಾರರಿಗೆ ವಿವಿಧ ಆಟೋಟ ಸ್ಪರ್ಧೆಗಳು, ಚರ್ಚಾ ಸ್ಪರ್ಧೆ, ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ಮತದಾನ ಬಗ್ಗೆ ಜಾಗೃತಿ ಮೂಡಿಸುವ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗುವುದು ಎಂದರು.
ಇದಲ್ಲದೆ ಬೀದಿ ನಾಟಕ, ಸ್ವ-ಸಹಾಯ ಗುಂಪುಗಳ ಮೂಲಕ ಜಾಗೃತಿ ಕಾರ್ಯಕ್ರಮಗಳು, ಬೈಕ್ ರ್ಯಾಲಿ, ಸೈಕಲ್
ಜಾಥಾ, ಮಹಿಳೆಯರಿಗಾಗಿ ವಿವಿಧ ಸ್ಪರ್ಧೆಗಳು, ಅಂಗವಿಕಲರ ರ್ಯಾಲಿ, ಅಸಂಘಟಿತ ವಲಯದ ಕಾರ್ಮಿಕರಿಗೆ ವಿಶೇಷ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು. ಅಂಗವಿಕಲರಿಗೆ ಮತಗಟ್ಟೆಗಳಲ್ಲಿ ವಿಶೇಷ ವ್ಯವಸ್ಥೆ ಕಲ್ಪಿಸಲಾಗುವುದು. ಇದೇ ರೀತಿ ಅಶಕ್ತರನ್ನು ಮತಗಟ್ಟೆಗಳಿಗೆ ಕರೆತರಲು ವಾಹನ ವ್ಯವಸ್ಥೆ ಮಾಡಲಾಗುವುದು. ಎಲ್ಲಾ ಕಾರ್ಮಿಕರಿಗೆ ಮತದಾನದ ದಿನ ವೇತನ ಸಹಿತ ರಜೆಯನ್ನು ಕಡ್ಡಾಯವಾಗಿ ನೀಡುವಂತೆ ಎಲ್ಲಾ ವಾಣಿಜ್ಯೋದ್ಯಮಗಳಿಗೆ ಸೂಚನೆ ನೀಡಬೇಕು ಎಂದು ಅವರು ಹೇಳಿದರು.
ಈ ಬಾರಿ ವಿದ್ಯಾರ್ಥಿಗಳಿಂದ ಅವರ ಪೋಷಕರಿಗೆ ಮತದಾನದ ಜಾಗೃತಿ ಕುರಿತಾಗಿ ಪತ್ರ ಬರೆಯಲಾಗುವುದು. ಪ್ರತಿಯೊಂದು ಇಲಾಖೆಗಳು ತಮ್ಮ ವ್ಯಾಪ್ತಿಯಲ್ಲಿ ಕೈಗೊಳ್ಳಬಹುದಾದ ಕ್ರಮಗಳ ಕುರಿತು ಕ್ರಿಯಾ ಯೋಜನೆಯನ್ನು ತಕ್ಷಣ ಸಲ್ಲಿಸುವಂತೆ ಸೂಚನೆ ನೀಡಿದರು. ಸಾರಿಗೆ ಇಲಾಖೆ ಜಂಟಿ ಆಯುಕ್ತ ಶಿವರಾಜ ಪಾಟೀಲ್ ಸೇರಿದಂತೆ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಇದ್ದರು.
ಕೆಎಸ್‌ಆರ್‌ಟಿಸಿ ಬಸ್‌ಗಳ ಟಿಕೆಟ್‌ನಲ್ಲಿ ಮತದಾನ ಕುರಿತು ಘೋಷಣೆ, ಇದೇ ರೀತಿ ಕೆಎಂಎಫ್ ಹಾಲಿನ ಪ್ಯಾಕೆಟ್ ಹಾಗೂ ಇತರ ಉತ್ಪನ್ನಗಳ ಪ್ಯಾಕೆಟ್ ಮೇಲೆ ಮತದಾನ ಜಾಗೃತಿ ಸಂದೇಶ ಮುದ್ರಿಸಬೇಕು. ಪ್ರತಿ ಕಚೇರಿಗೆ ಮತದಾನದ ಜಾಗೃತಿ ರಬ್ಬರ್ ಸ್ಟಾಂಪ್ ಒದಗಿಸಲಾಗುವುದು. ರವಾನೆಯಾಗುವ ಪ್ರತಿ ಕಾಗದ ಪತ್ರಗಳ ಮೇಲೆ ಇದರ ಸೀಲ್ ಹೊಡೆಯಬೇಕು.
ಕೆ. ಶಿವರಾಮೇ ಗೌಡ, ಜಿಪಂ ಸಿಇಒ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Holehonnur: ಎರಡು ಪ್ರತ್ಯೇಕ ರಸ್ತೆ ಅಪಘಾತ
Shivamogga: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಓ ಈಶ್ವರಪ್ಪ
Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ
Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?
Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ
Daily Horoscope: ಬೇರೆಯವರ ತಪ್ಪುಗಳನ್ನು ಹುಡುಕಬೇಡಿ, ಜವಾಬ್ದಾರಿ ಕೊಂಚ ಬದಲಾವಣೆ
Politics: ಕುಸುಮಾರನ್ನು ಎಂಎಲ್‌ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.