ಪಲ್ಸ್ ಪೋಲಿಯೋಗೆ ಪೂರ್ವ ಸಿದ್ಧತೆ: ವೈಶಾಲಿ
Team Udayavani, Jan 30, 2021, 5:01 PM IST
ಶಿವಮೊಗ್ಗ: ಜ. 31ರಂದು ಪ್ರಸಕ್ತ ಸಾಲಿನ ಮೊದಲ ಹಂತದ ಪಲ್ಸ್ ಪೋಲಿಯೋ ಲಸಿಕೆಯನ್ನು ಜಿಲ್ಲೆಯಲ್ಲಿ ಗ್ರಾಮಾಂತರ ಪ್ರದೇಶದ 91,415 ಮತ್ತು ನಗರ ಪ್ರದೇಶದ 5 ವರ್ಷದೊಳಗಿನ 44,423 ಮಕ್ಕಳಿಗೆ ಹಾಕುವ ಗುರಿ ಹೊಂದಲಾಗಿದ್ದು, ಅದಕ್ಕಾಗಿ ಪೂರ್ವಸಿದ್ಧತೆ ಕೈಗೊಳ್ಳಲಾಗಿದೆ ಎಂದು ಜಿಪಂ ಮುಖ್ಯ ಕಾರ್ಯ ನಿರ್ವಾಹಕ ಅ ಧಿಕಾರಿ ಎಂ.ಎಲ್. ವೈಶಾಲಿ ಹೇಳಿದರು. ಜಿಪಂ ಅಬ್ದುಲ್ ನಜೀರ್‌ಸಾಬ್ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಪೋಲಿಯೋ ಲಸಿಕಾ ಆಂದೋಲನದ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
200ಕ್ಕಿಂತ ಹೆಚ್ಚಿನ ಸಂಖ್ಯೆಯ ಮಕ್ಕಳಿರುವಲ್ಲಿ ಮತ್ತೂಂದು ಲಸಿಕಾ ಕೇಂದ್ರ ತೆರೆಯಲು ಕ್ರಮ ವಹಿಸಲಾಗುವುದು. ಈ ಕಾರ್ಯಕ್ರಮದ ಯಶಸ್ವಿ ಅನುಷ್ಠಾನಕ್ಕಾಗಿ 1019 ಬೂತ್‌ಗಳನ್ನು ಹಾಗೂ ತಂಡಗಳನ್ನು ರಚಿಸಲಾಗಿದ್ದು, 3,472 ವ್ಯಾಕ್ಸಿನೇಟಸ್ ìಗಳನ್ನು ಬಳಸಿಕೊಳ್ಳಲಾಗುವುದು. 199 ಮೇಲ್ವಿಚಾರಕರು,33 ಟ್ರಾನ್ಸಿಟ್ ತಂಡ ಹಾಗೂ 22 ಸಂಚಾರಿ ತಂಡಗಳನ್ನು ರಚಿಸಿ, ಅಧಿ ಕಾರಿಗಳನ್ನು ನಿಯೋಜಿಸಲಾಗಿದೆ ಎಂದರು.
ಇದನ್ನೂ ಓದಿ:ಭೂದೇವಿ ಮಡಿಲಿಗೆ ಮನಗೂಳಿ ಮುತ್ಯಾ
ಇದಲ್ಲದೇ 557 ಆರೋಗ್ಯ ಸಿಬ್ಬಂದಿ ಮತ್ತು ಮೇಲ್ವಿಚಾರಕರು, 2,418 ಅಂಗನವಾಡಿ ಮತ್ತು 13337 ಆಶಾ ಕಾರ್ಯಕರ್ತೆಯರು ಸೇರಿದಂತೆ ಒಟ್ಟು 4312 ಸಿಬ್ಬಂ ದಿಗಳ ಸೇವೆಯನ್ನು ಬಳಸಿಕೊಳ್ಳಲಾಗುವುದು.ಇವರೊಂದಿಗೆ 162 ಜನ ಕಾರ್ಯಕ್ರಮ ಅನುಷ್ಠಾನಾ ಧಿಕಾರಿಗಳು, ಉಸ್ತುವಾರಿ ಅಧಿ ಕಾರಿಗಳು ಮತ್ತು ವೈದ್ಯಾ ಧಿಕಾರಿಗಳು ಇರಲಿದ್ದಾರೆ ಎಂದು ತಿಳಿಸಿದರು. ಸಭೆಯಲ್ಲಿ ಡಾ| ರಘುನಂದನ್, ಡಾ| ನಾಗರಾಜ್, ಡಾ| ಶಂಕರಪ್ಪ, ಡಾ| ಪಿ.ನಾರಾಯಣ್, ಡಾ| ಶ್ರೀಧರ್, ಡಾ| ಶಮಾ, ಡಾ| ಶ್ರೀನಿವಾಸ್ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga; ವಿದ್ಯುತ್ ಬೇಲಿ ಸ್ಪರ್ಶಿಸಿ ಕಾಡಾನೆ ಸಾವು; ಜಮೀನು ಮಾಲೀಕನ ಬಂಧನ
Thirthahalli: ತುಂಗಾ ನದಿಯಲ್ಲಿ ಅಪರಿಚಿತ ಮೃತದೇಹ ಪತ್ತೆ
Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ
Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ
Infectious Disease: ರಾಜ್ಯಕ್ಕೂ ಬೇಕಿದೆ “ವಿಷಾಣು ಯುದ್ಧ ಅಭ್ಯಾಸ್”
MUST WATCH
ಹೊಸ ಸೇರ್ಪಡೆ
Udupi: ನ. 9-11ರ ವರೆಗೆ 3 ದಿನಗಳ ಹರಿದಾಸ ಸಾಹಿತ್ಯ ಅಂತಾರಾಷ್ಟ್ರೀಯ ಸಮ್ಮೇಳನ
Commonwealth ಸಂಸದೀಯ ಸಭೆ; ಸ್ಪೀಕರ್ ಯು.ಟಿ. ಖಾದರ್ ಭಾಗಿ
Salman Khan: ಕ್ಷಮೆ ಕೇಳಿ ಇಲ್ಲವೇ 5 ಕೋಟಿ ಕೊಡಿ: ನಟ ಸಲ್ಮಾನ್‌ಗೆ ಮತ್ತೂಂದು ಬೆದರಿಕೆ
Mangaluru: ಎಡನೀರು ಶ್ರೀಗಳ ಕಾರಿನ ಮೇಲೆ ದಾಳಿ ಖಂಡನೀಯ; ಪುಂಡರ ತಕ್ಷಣವೇ ಬಂಧಿಸಿ: ಕ್ಯಾ.ಚೌಟ
New Delhi: 5ಜಿ ಸೇವೆಗಾಗಿ ಬಿಎಸ್‌ಎನ್ಎಲ್‌ನಿಂದ ಟೆಂಡರ್ ಆಹ್ವಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.