ಎಸ್ಸೆಸ್ಸೆಲ್ಸಿ ಸುಗಮ ಪರೀಕ್ಷೆಗೆ ಕ್ರಮ
Team Udayavani, Feb 21, 2019, 11:10 AM IST
ಶಿವಮೊಗ್ಗ: ಈ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆ ಯಾವುದೇ ಗೊಂದಲಕ್ಕೆ ಆಸ್ಪದವಿಲ್ಲದಂತೆ ಸುಗಮವಾಗಿ ನಡೆಸಲು ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಕೆ.ಎ. ದಯಾನಂದ ತಿಳಿಸಿದರು.
ಬುಧವಾರ ಜಿಲ್ಲಾಧಿಕಾರಿ ಕಚೇರಿ ನೂತನ ಸಭಾಂಗಣದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಸಂಬಂಧಿಸಿದ ಅಧೀಕ್ಷಕರು, ಉಪ ಅಧಿಧೀಕ್ಷಕರು ಹಾಗೂ ಪ್ರಶ್ನೆ ಪತ್ರಿಕೆ ಕಸ್ಟೋಡಿಯನ್‌ಗಳಿಗೆ ಆಯೋಜಿಸಲಾಗಿದ್ದ ಸಭೆಯಲ್ಲಿ ಅವರು ಮಾತನಾಡಿದರು.
ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮಾ. 21ರಿಂದ ಏ. 4ರವರೆಗೆ ಬೆಳಗ್ಗೆ 9.30ರಿಂದ 12.30ರವರೆಗೆ ನಡೆಯಲಿದ್ದು, ಜಿಲ್ಲೆಯಲ್ಲಿ ಒಟ್ಟು 24ಸಾವಿರ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಪರೀಕ್ಷೆಯು ಅತ್ಯಂತ ಪಾರದರ್ಶಕವಾಗಿ, ಶಿಸ್ತು, ಸಮಯ ಪಾಲನೆ ಹಾಗೂ ಗೊಂದಲಗಳಿಗೆ ಅವಕಾಶವಾಗದಂತೆ ನಡೆಯಲು ಪೂರ್ವಸಿದ್ಧತೆಗಳನ್ನು ಮಾಡಬೇಕು ಎಂದ ಅವರು ತಿಳಿಸಿದರು.
ವಿದ್ಯಾರ್ಥಿಗಳು ಪರೀಕ್ಷಾ ಸಮಯದಲ್ಲಿ ಯಾವುದೇ ರೀತಿಯ ಸಮಸ್ಯೆಗಳನ್ನು ಎದುರಿಸಬಾರದು. ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲೂ ಶೌಚಾಲಯ, ನೀರಿನ ವ್ಯವಸ್ಥೆ, ಅಗತ್ಯ ಪೀಠೊಪಕರಣಗಳು ಇರಬೇಕು. ಪ್ರವೇಶ ಪತ್ರಗಳನ್ನು ಬಿಟ್ಟು ಬಂದಲ್ಲಿ ಆನ್‌ಲೈನ್ ಅಥವಾ ಇನ್ನೊಂದು ಪ್ರತಿಯ ವ್ಯವಸ್ಥೆಯನ್ನು ಶಾಲಾ ವತಿಯಿಂದ ಮುಂಚಿತವಾಗಿಯೆ ತಲುಪಿಸುವ ವ್ಯವಸ್ಥೆ ಮಾಡಿರಬೇಕು. ಈ ಕುರಿತಂತೆ ಪರೀಕ್ಷಾ ಕೇಂದ್ರಗಳ ಮೇಲ್ವಿಚಾರಕರ ಪೂರ್ವಭಾವಿ ಸಭೆಯನ್ನು ಆಯೋಜಿಸಿ ಸೂಚನೆಗಳನ್ನು ನೀಡಬೇಕು ಎಂದು ಅವರು ಹೇಳಿದರು.
ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲೂ ಸಿಸಿ ಕ್ಯಾಮೆರಾ ಅಳವಡಿಸಿರಬೇಕು ಹಾಗೂ ಅದು ಕಾರ್ಯ ನಿರ್ವಹಿಸುವುದನ್ನು ಖಚಿತಪಡಿಸಿಕೊಳ್ಳಬೇಕು. ಒಂದು ವೇಳೆ ಸಿಸಿ ಕ್ಯಾಮೆರಾ ಅಳವಡಿಸದಿದ್ದಲ್ಲಿ ಪ್ರಶ್ನೆ ಪತ್ರಿಕೆಯನ್ನು ಲಕೋಟೆಯಿಂದ ಹೊರತೆಗೆಯುವಾಗ ಮೊಬೈಲ್‌ನಲ್ಲಿ ಚಿತ್ರಿಕರಿಸಬೇಕು. ಸಿಸಿ ಟಿವಿಯ ದೃಶ್ಯಾವಳಿಗಳನ್ನು ಆನ್‌ಲೈನ್ ಮೂಲಕ ಮೊಬೈಲ್‌ನಲ್ಲಿ ನೋಡುವಂತಹ ವ್ಯವಸ್ಥೆಯನ್ನು ಶಿಕ್ಷಣಾ ಇಲಾಖೆ ಅ ಧಿಕಾರಿಗಳು ಮಾಡಬೇಕು. ಪರೀಕ್ಷೆಯಲ್ಲಿ ಕಾಪಿ ಹೊಡೆಯಲು ಅವಕಾಶ ನೀಡಬಾರದು. ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ಅಕ್ರಮಗಳು ನಡೆದರೆ ಕೇಂದ್ರದ ಮೇಲ್ವಿಚಾರಕರನ್ನು ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಅವರು ಎಚ್ಚರಿಕೆ ನೀಡಿದರು.
ವಿವಿಧ ಇಲಾಖೆಗಳಿಂದ ಗ್ರೂಪ್ -ಬಿ ಸಿಬ್ಬಂದಿಗಳನ್ನು ಮಾರ್ಗಾಧಿಕಾರಿ ಹಾಗೂ ಸ್ಕಾಡ್‌ಗಳಾಗಿ ಮಿಸಿಕೊಳ್ಳಬೇಕು. ಪರೀಕ್ಷೆಯ ಆರಂಭದ ನಂತರ ಯಾವುದೇ ಮಾಧ್ಯಮ ವರದಿಗಾರರು ಹಾಗೂ ವೀಡಿಯೋ ಗ್ರಾಫರ್‌ನ್ನು ಕೊಠಡಿಯ ಒಳಗೆ ಪ್ರವೇಶವನ್ನು ನಿರ್ಬಂಧಿಸಲಾಗಿರುತ್ತದೆ. ಈ ಕುರಿತು ಎಚ್ಚರಿಕೆ ವಹಿಸಬೇಕು. ಪರೀಕ್ಷಾ ಕೇಂದ್ರಗಳ ಸುತ್ತ 200ಮೀಟರ್ ವ್ಯಾಪ್ತಿಯಲ್ಲಿ 144 ಸೆಕ್ಷನ್ ಅಡಿ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ. ಈ ವ್ಯಾಪ್ತಿಯಲ್ಲಿ ಪರೀಕ್ಷಾರ್ಥಿಗಳು ಹಾಗೂ ಪರೀಕ್ಷಾ ಸಿಬ್ಬಂದಿ ಹೊರತುಪಡಿಸಿ ಬೇರೆ ಯಾರೂ ಒಳಪ್ರವೇಶಿಸಲು ಅವಕಾಶ ನೀಡಬಾರದು ಎಂದು ಹೇಳಿದರು.
ಜಿಪಂ ಮುಖ್ಯಕಾರ್ಯ ನಿರ್ವಹಣಾಧಿಕಾರಿ ಕೆ. ಶಿವರಾಮೇ ಗೌಡ, ಡಿಡಿಪಿಐ ಸುಮಂಗಳಾ ಕುಚಿನಾಡ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Holehonnuru: ಕಿರು ಅರಣ್ಯ ಪ್ರದೇಶದಲ್ಲಿ ಕಡವೆ ಬೇಟೆ; ಆರೋಪಿ ಬಂಧನ
Hosanagara: ಚಾಲಕನ ನಿಯಂತ್ರಣ ತಪ್ಪಿ ಕ್ಯಾಂಟರ್ ಪಲ್ಟಿ; ದೇಗುಲಕ್ಕೆ ಹಾನಿ
Shimoga: ಶರಾವತಿ ಹಿನ್ನೀರಿನಲ್ಲಿ ತೆಪ್ಪ ಮಗುಚಿ ನಾಪತ್ತೆಯಾಗಿದ್ದ ಮೂವರ ಶವ ಪತ್ತೆ
K. S. Eshwarappa: ಮುಸ್ಲಿಮರಿಗೆ ಮೀಸಲು ನೀಡಿದರೆ ಸಂತರ ನೇತೃತ್ವದಲ್ಲಿ ದಂಗೆ
Shivamogga: ತೆಪ್ಪ ಮಗುಚಿ ಶರಾವತಿ ಹಿನ್ನೀರಿನಲ್ಲಿ ಮೂವರು ಯುವಕರು ನಾಪತ್ತೆ
MUST WATCH
ಹೊಸ ಸೇರ್ಪಡೆ
Hunsur: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ; ಯುವಕನ ಬಂಧನ
Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.