ಮಳೆಗಾಗಿ ಪ್ರಾರ್ಥಿಸಿ ಪರ್ಜನ್ಯ ಹೋಮ
Team Udayavani, Aug 17, 2017, 3:20 PM IST
ಶಿಕಾರಿಪುರ: ರಾಜ್ಯದೆಲ್ಲೆಡೆ ಬರ ತಾಂಡವವಾಡುತ್ತಿರುವುದರಿಂದ ಮಳೆಗಾಗಿ ಪ್ರಾರ್ಥಿಸಿ ಪರ್ಜನ್ಯ ಹೋಮ ನಡೆಸುವ ಮೂಲಕ ಶಾಸಕ ಬಿ.ವೈ. ರಾಘವೇಂದ್ರ ತಮ್ಮ 44 ನೇ ಜನ್ಮದಿನವನ್ನು ಅತ್ಯಂತ ಸರಳವಾಗಿ ಆಚರಿಸಿಕೊಂಡರು.
ಬುಧವಾರ ಬೆಳಗ್ಗೆ ಕ್ಷೇತ್ರಾಧಿಪತಿ ಶ್ರೀ ಹುಚ್ಚರಾಯಸ್ವಾಮಿ ಸನ್ನಿಧಿಗೆ ಕುಟುಂಬ ಸಮೇತರಾಗಿ ಆಗಮಿಸಿ ವಿಶೇಷ ಪೂಜೆ ಸಲ್ಲಿಸಿ ನಂತರ ಪರ್ಜನ್ಯ ಹೋಮದ ಸಂಕಲ್ಪದ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ತಾಲೂಕಿನಿಂದ ಹಾಗೂ ಬೇರೆ ಜೆಲ್ಲೆಗಳಿಂದ ಶುಭಾಷಯ ಕೋರಲು ಆಗಮಿಸಿದ ತಮ್ಮ
ಅಭಿಮಾನಿಗಳೊಂದಿಗೆ ಮಾತನಾಡಿದ ಅವರು, ನಮ್ಮ ರಾಜ್ಯದಲ್ಲಿ ಭೀಕರವಾದ ಬರಗಾಲವು ತಾಂಡವವಾಡುತ್ತಿದ್ದು ರೈತರು, ಶ್ರೀಸಾಮಾನ್ಯರು ಸಂಕಷ್ಟದಲ್ಲಿರುವ ಈ ಸಂದರ್ಭದಲ್ಲಿ ಮಳೆಗಾಗಿ ಪ್ರಾರ್ಥನೆ ಮಾಡಿ ಪರ್ಜನ್ಯ ಹೋಮ ನಡೆಸುತ್ತಿದ್ದೇನೆ. ಅಲ್ಲದೆ ತಾಲೂಕಿನ ವಿವಿಧ ದೇವಸ್ಥಾನಗಳಲ್ಲಿ ಪೂಜೆ- ಪುನಸ್ಕಾರಗಳು ನಡೆಯುತ್ತಿವೆ. ದೇವರ ದಯೆಯಿಂದ ನಾಡಿನಲ್ಲಿ ಮಳೆ ಬೆಳೆ ಸಮೃದ್ಧಿಯಾಗಬೇಕು. ಅಲ್ಲದೇ ರೈತರ ಬದುಕು ಹಸನಾಗಬೇಕು ಎಂದರು.
ತಾಲೂಕಿನಲ್ಲಿ ಶಾಶ್ವತ ನೀರಾವರಿ ವ್ಯವಸ್ಥೆಗಾಗಿ ಯೋಜನೆಗಳ ನೀಲನಕ್ಷೆ ಸಿದ್ಧವಾಗಿದ್ದು ಪ್ರಸ್ತಾವನೆ ಸಲ್ಲಿಸಲಾಗಿದೆ. ಸರ್ಕಾರ ಹಾಗೂ ಸಂಬಂಧಿಸಿದ
ಇಲಾಖೆಗಳು ಸಕಾರಾತ್ಮಕವಾಗಿ ಸ್ಪಂದಿಸಬೇಕು ಎಂದರು ಅರ್ಚಕರಾದ ಉಮೇಶ್ ಭಟ್, ಗಣಪತಿ ಭಟ್, ಪ್ರದೀಪ್ ಕುಲಕರ್ಣಿ, ಪ್ರಸನ್ನ ಭಟ್, ಶಿವಮೊಗ್ಗ ಹರೀಶ್ ಜೊಯ್ಸ ಅವರ ನೇತೃತ್ವದಲ್ಲಿ ಪರ್ಜನ್ಯ ಹೋಮ ಹಾಗೂ ಪೂಜಾ ಕಾರ್ಯಕ್ರಮಗಳು ನಡೆದವು. ರಾಘವೇಂದ್ರ ಅವರ ಪತ್ನಿ ತೇಜಸ್ವಿನಿ ರಾಘವೇಂದ್ರ, ಸಹೋದರಿರಾದ ಪದ್ಮಾವತಿ, ಅರುಣಾದೇವಿ, ಉಮಾದೇವಿ, ಸಹೋದರ ಬಿ.ವೈ. ವಿಜೇಂದ್ರ, ಜಿಲ್ಲಾ ಜಾಗೃತಿ ಸಮಿತಿಯ ಕೆ.ಎಸ್. ಗುರುಮೂರ್ತಿ, ಎಂ.ಬಿ. ಚನ್ನವೀರಪ್ಪ, ಪುರಸಭೆ ಅಧ್ಯಕ್ಷೆ ರತ್ನಮ್ಮ, ಮಾಜಿ ಅಧ್ಯಕ್ಷೆ ರೂಪಕಲಾ ಹೆಗಡೆ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shivamogga: ಆಸ್ಪತ್ರೆಯಲ್ಲಿನ ತೆರೆದ ನೀರಿನ ತೊಟ್ಟಿಗೆ ಬಿದ್ದು ಮಗು ಮೃತ್ಯು!
Shimoga; ವಿಜಯೇಂದ್ರರನ್ನು ಕಟ್ಟಿ ಹಾಕಲು ಕಾಂಗ್ರೆಸ್ ನಿಂದ ಸುಳ್ಳು ಆರೋಪ: ರಾಘವೇಂದ್ರ
Anandapura: ಸಾಲ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ
Shimoga: ಎಸ್ಐಟಿ ರಚನೆ ಮೂಲಕ ಕಾಂಗ್ರೆಸ್ ಹಗೆ ತೀರಿಸಿಕೊಳ್ಳುತ್ತಿದೆ: ಆರಗ ಜ್ಞಾನೇಂದ್ರ
Anandapura: ಸಾಲದ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ
MUST WATCH
ಹೊಸ ಸೇರ್ಪಡೆ
Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ
Waqf Notice: ಬಸನಗೌಡ ಪಾಟೀಲ್ ಯತ್ನಾಳ್ ತಂಡದಿಂದ 1 ತಿಂಗಳು ಜನ ಜಾಗೃತಿ
Waqf Issue: ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ
Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ
Black Days: ಜಮೀರ್+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್.ಡಿ.ಕುಮಾರಸ್ವಾಮಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.