ಆಸ್ತಿ ತೆರಿಗೆ ಪಾವತಿ ಗೊಂದಲ ನಿವಾರಣೆ
ತೆರಿಗೆ ಪಾವತಿ ವ್ಯವಸ್ಥೆಯ ಸದುಪಯೋಗಕ್ಕೆ ಕರೆ
Team Udayavani, Aug 6, 2019, 2:51 PM IST
ಶಿವಮೊಗ್ಗ: ಇಡಿಸಿ ಯಂತ್ರಗಳನ್ನು ಶಾಸಕ ಕೆ.ಎಸ್. ಈಶ್ವರಪ್ಪ ಬಿಲ್ ಕಲೆಕ್ಟರ್‌ಗಳಿಗೆ ಹಸ್ತಾಂತರಿಸಿದರು.
ಶಿವಮೊಗ್ಗ:ಮಹಾನಗರ ಪಾಲಿಕೆಯಲ್ಲಿ ಆಸ್ತಿ ತೆರಿಗೆಯನ್ನು ಪಾವತಿಸಲು ಡಿಜಿಟಲ್ ಪಾವತಿ ವ್ಯವಸ್ಥೆ (ಎಲೆಕ್ಟ್ರಾನಿಕ್ ಡೆಬಿಟ್ ಕಲೆಕ್ಷನ್) ಆರಂಭಿಸಿರುವುದರಿಂದ ಆಸ್ತಿ ತೆರಿಗೆ ಪಾವತಿಯಲ್ಲಿರುವ ಹಲವಾರು ಗೊಂದಲಗಳು ನಿವಾರಣೆಯಾಗಲಿವೆ ಎಂದು ಶಾಸಕ ಕೆ.ಎಸ್. ಈಶ್ವರಪ್ಪ ಅವರು ತಿಳಿಸಿದರು.
ಅವರು ಸೋಮವಾರ ಮಹಾನಗರ ಪಾಲಿಕೆ ಸಭಾಂಗಣದಲ್ಲಿ ಎಲೆಕ್ಟ್ರಾನಿಕ್ ಡೆಬಿಟ್ ಕಲೆಕ್ಷನ್ (ಇಡಿಸಿ) ಯಂತ್ರಗಳನ್ನು ಬಿಲ್ ಕಲೆಕ್ಟರ್‌ಗಳಿಗೆ ಹಸ್ತಾಂತರಿಸಿ ಅವರು ಮಾತನಾಡಿದರು.
ತಂತ್ರಜ್ಞಾನದ ಬಳಕೆ ಮೂಲಕ ಸಾರ್ವಜನಿಕರು ತೆರಿಗೆಯನ್ನು ಸುಲಭವಾಗಿ ಪಾವತಿಸುವ ವಿಧಾನ ಇದಾಗಿದ್ದು, ರಾಜ್ಯದ ಕೆಲವೇ ಮಹಾನಗರ ಪಾಲಿಕೆಯಲ್ಲಿ ಈ ಸೌಲಭ್ಯ ಲಭ್ಯವಿದೆ. ಇಡಿಸಿ ಸೌಲಭ್ಯದಿಂದಾಗಿ ಆಸ್ತಿ ತೆರಿಗೆ ಸಂಗ್ರಹ ಸುಲಭವಾಗಲಿದ್ದು, ತೆರಿಗೆದಾರರು ತಾವು ಇರುವ ಸ್ಥಳದಲ್ಲಿಯೇ ತೆರಿಗೆಯನ್ನು ಪಾವತಿಸಬಹುದಾಗಿದೆ. ಅವರು ಪಾವತಿಸಿದ ಮೊತ್ತ ಅದೇ ದಿನ ಖಾತೆಗೆ ಜಮಾ ಆಗಲಿದ್ದು, ಪಾಲಿಕೆ ತೆರಿಗೆ ಸಂಗ್ರಹದಲ್ಲಿ ಸುಧಾರಣೆ ಸಾಧ್ಯವಾಗಲಿದೆ ಎಂದು ಹೇಳಿದರು.
ಎಚ್‌ಡಿಎಫ್‌ಸಿ ಬ್ಯಾಂಕ್ ಸಹಯೋಗದೊಂದಿಗೆ ಈ ಕಾರ್ಯಯೋಜನೆ ಜಾರಿಗೆ ತರಲಾಗಿದೆ. ಇನ್ನು ಮುಂದೆ ಬಿಲ್ ಕಲೆಕ್ಟರ್‌ಗಳು ಮನೆಗಳಿಗೆ ಭೇಟಿ ನೀಡಿ ಈ ಡಿಜಿಟಲ್ ಯಂತ್ರದ ಸಹಾಯದಿಂದ ಡಿಡಿ, ಚೆಕ್ ಅಥವಾ ಎಟಿಎಂ, ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್ ಮೂಲಕ ಆಸ್ತಿ ತೆರಿಗೆಯನ್ನು ಪಡೆಯಲು ಸಾಧ್ಯವಿದೆ. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಅವರು ಮನವಿ ಮಾಡಿದರು.
ಕಾರ್ಯವಿಧಾನ: ಇಡಿಸಿ ಆಂಡ್ರಾಯಿಡ್ ಆಧಾರಿತ ಯಂತ್ರವಾಗಿದ್ದು, ಆಸ್ತಿ ಐಡಿ ಆಧಾರದಲ್ಲಿ ಡಿಮಾಂಡ್ ನೋಟ್ ಇದರಲ್ಲಿ ಸಿದ್ಧಪಡಿಸಿ ಆಸ್ತಿ ತೆರಿಗೆಯನ್ನು ಪಾವತಿಸ ಬಹುದಾಗಿದೆ. ಈ ವ್ಯವಸ್ಥೆಯಲ್ಲಿ ಆಯುಕ್ತರು ತೆರಿಗೆ ಸಂಗ್ರಹದ ರಿಯಲ್ ಟೈಮ್ ಪ್ರಗತಿಯನ್ನು ಪರಿಶೀಲಿಸಬಹುದಾಗಿದೆ.
ಮುಂದಿನ ದಿನಗಳಲ್ಲಿ ಈ ಡಿಜಿಟಲ್ ಪಾವತಿ ವ್ಯವಸ್ಥೆಯನ್ನು ಆರೋಗ್ಯ ಇನ್ಸ್‌ಪೆಕ್ಟರ್‌ಗಳಿಗೆ ನೀಡಲಾಗುತ್ತಿದ್ದು, ಪ್ಲಾಸ್ಟಿಕ್ ಬಳಕೆ, ನೈರ್ಮಲ್ಯ ಕಾಪಾಡದಿರುವುದು ಇತ್ಯಾದಿ ಪ್ರಕರಣಗಳಲ್ಲಿ ಸ್ಥಳದಲ್ಲಿಯೇ ದಂಡ ವಸೂಲಾತಿ ಮಾಡಲು ಹಾಗೂ ಬಾಡಿಗೆ ಸಂಗ್ರಹ ಕಾರ್ಯಕ್ಕೆ ಬಳಸಲು ಉದ್ದೇಶಿಸಲಾಗಿದೆ ಎಂದು ಪಾಲಿಕೆ ಆಯುಕ್ತೆ ಚಾರುಲತಾ ಸೋಮಲ್ ಅವರು ಮಾಹಿತಿ ನೀಡಿದರು.
ಮೇಯರ್ ಲತಾ ಗಣೇಶ್, ಉಪ ಮೇಯರ್ ಚನ್ನಬಸಪ್ಪ, ಜಿಲ್ಲಾಧಿಕಾರಿ ಕೆ.ಎ. ದಯಾನಂದ, ಎಚ್‌ಡಿಎಫ್‌ಸಿ ಬ್ಯಾಂಕ್‌ನ ಅಧಿಕಾರಿ ಅಶೋಕ್ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
Hubli: ಕಾಂಗ್ರೆಸ್‌ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ
FIR 6to6 movie: ಆ್ಯಕ್ಷನ್ ಚಿತ್ರದಲ್ಲಿ ವಿಜಯ ರಾಘವೇಂದ್ರ
Birthday Party: ಬರ್ತ್‌ಡೇ ಪಾರ್ಟಿ ಮುಗಿಸಿ ಬರುತ್ತಿದ್ದ ಮೂವರನ್ನು ಗುಂಡಿಕ್ಕಿ ಹ*ತ್ಯೆ…
Belagavi; ಬಹಳ ನೋವಾಗಿದೆ, ನೂರು ಸಿ.ಟಿ.ರವಿ ಬಂದರೂ ಹೆದರುವುದಿಲ್ಲ: ಲಕ್ಷ್ಮೀ ಹೆಬ್ಬಾಳಕರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.