ಉದ್ಯೋಗ ಸೃಷ್ಟಿಯಲ್ಲಿ ಕೇಂದ್ರ ಸರ್ಕಾರ ವಿಫಲ: ಆರೋಪ
Team Udayavani, Sep 8, 2020, 6:53 PM IST
ಶಿವಮೊಗ್ಗ: ದೇಶದ ವಿದ್ಯಾವಂತ ಯುವಜನತೆಗೆ ಉದ್ಯೋಗ ಸೃಷ್ಟಿಸುವಲ್ಲಿ ವಿಫಲವಾಗಿರುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಶಿವಮೊಗ್ಗ ಜಿಲ್ಲಾ ಎನ್‌ಎಸ್‌ಯುಐ ಘಟಕದ ಕಾರ್ಯಕರ್ತರು ನಗರದ ಮಹಾವೀರ ವೃತ್ತದಲ್ಲಿ ವಿಭಿನ್ನವಾಗಿ ಪ್ರತಿಭಟನೆ ನಡೆಸಿದರು.
ಇಂಜಿನಿಯರಿಂಗ್, ಬಿಕಾಂ, ಡಿಪ್ಲೋಮಾ ಸೇರಿದಂತೆ ಪದವಿ ಹಾಗೂ ಸ್ನಾತಕೋತ್ತರ ಶಿಕ್ಷಣ ಪಡೆದಿರುವ ಶಿವಮೊಗ್ಗದ ಯುವವಿದ್ಯಾರ್ಥಿಗಳು ಮಹಾವೀರ ವೃತ್ತದಲ್ಲಿ ಪೇಪರ್ ಮಾರುವುದು, ಟೀ ಮಾರುವುದು, ಮಾಸ್ಕ್ ಮಾರುವುದು ಸೇರಿದಂತೆ ಇತರೆ ರೀತಿಯಲ್ಲಿ ಯುವ ಜನತೆಯ ಉದ್ಯೋಗ ಸಮಸ್ಯೆಯ ಕುರಿತು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗುತ್ತಾ ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿ ವರ್ಷ ಎರಡು ಕೋಟಿ ಉದ್ಯೋಗ ಸೃಷ್ಟಿಯ ಭರವಸೆ ನೀಡಿ ಅ ಧಿಕಾರಕ್ಕೆ ಬಂದಕೇಂದ್ರ ಸರ್ಕಾರ ಉದ್ಯೋಗ ಸೃಷ್ಟಿಸುವಲ್ಲಿ ವಿಫಲವಾಗಿದೆ. ವಿದ್ಯಾವಂತ ಯುವಜನತೆಗೆಉದ್ಯೋಗ ನೀಡುವಲ್ಲಿ ಯಾವುದೇ ರೀತಿ ಪರಿಣಾಮಕಾರಿ ನಿರ್ಧಾರಗಳನ್ನು ಕೇಂದ್ರ ಸರ್ಕಾರ ತೆಗೆದುಕೊಂಡಿಲ್ಲ ಎಂದು ಆರೋಪಿಸಿದರು.
ಕೇಂದ್ರದಲ್ಲಿ ಎರಡನೇ ಬಾರಿ ಅಧಿಕಾರಕ್ಕೆ ಬಂದಿರುವ ಬಿಜೆಪಿ ಸರ್ಕಾರ ಪ್ರಸ್ತುತವು ಉದ್ಯೋಗ ಸೃಷ್ಟಿಸುವ ಕೆಲಸ ಮಾಡಲಿಲ್ಲ. ಅಲ್ಲದೇ ಈ ವರ್ಷದಲ್ಲಿ ಕೋವಿಡ್ ಕಾರಣಕ್ಕೆ ಲಕ್ಷಾಂತರ ಯುವ ಉದ್ಯೋಗಿಗಳು ಕೆಲಸ ಕಳೆದುಕೊಂಡರು. ನೂರಾರು ಕಂಪನಿಗಳು ಬಾಗಿಲು ಮುಚ್ಚಿದವು. ಇದರಿಂದ ದೇಶದ ಯುವ ಉದ್ಯೋಗಿಗಳು ಮತ್ತಷ್ಟು ಸಂಖ್ಯೆಯಲ್ಲಿ ಕೆಲಸ ಕಳೆದುಕೊಂಡರು ಎಂದು ದೂರಿದರು.
ಎನ್‌ಎಸ್‌ಯುಐ ರಾಜ್ಯ ಉಪಾಧ್ಯಕ್ಷ ಕೆ. ಚೇತನ್, ಶ್ರೀಜಿತ್, ಯುವ ಕಾಂಗ್ರೇಸ್ ಕಾರ್ಯಾಧ್ಯಕ್ಷ ಮಧುಸೂಧನ್, ಜಿಲ್ಲಾಧ್ಯಕ್ಷ ಎಚ್.ಎಸ್. ಬಾಲಾಜಿ, ಕಾರ್ಯಾಧ್ಯಕ್ಷ ವಿನಯ್, ನಗರಾಧ್ಯಕ್ಷ ವಿಜಯ್, ಗ್ರಾಮಾಂತರ ಅಧ್ಯಕ್ಷ ರವಿ, ವಿನ್ಯಾಸ್, ಮಂಜು ಪುರಲೆ, ಅಬ್ದುಲ್ ಸತ್ತರ, ಗಿರೀಶ್, ಶಿವು, ಭರತ್, ಸಂದೀಪ್, ಪ್ರಮೋದ್, ಆಕಾಶ್, ರವಿ, ಹೇಮಂತ್, ಸಂಜಯ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mollywood: ʼಮಾರ್ಕೊʼ ಬಳಿಕ ಮೋಹನ್ ಲಾಲ್ ನಿರ್ದೇಶನದ ʼಬರೋಜ್ʼ ಚಿತ್ರಕ್ಕೂ ಪೈರಸಿ ಕಾಟ
BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್ ಗೆ ಆಹ್ವಾನವಿಲ್ಲ! ದಿಗ್ಗಜನ ಬೇಸರ
Gundlupete: ಅಕ್ರಮವಾಗಿ 3 ಕೆ.ಜಿ. 100 ಗ್ರಾಂ ಗಾಂಜಾ ಸಾಗಣೆ: ಬಂಧನ
Odisha: ಕಾರಿಗೆ ಟ್ರಕ್ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು
Delhi; ರಸ್ತೆಗಳು ಪ್ರಿಯಾಂಕಾ ಗಾಂಧಿ ಕೆನ್ನೆಯಂತಿರಬೇಕು: ಬಿಜೆಪಿ ನಾಯಕನ ಹೇಳಿಕೆಗೆ ಟೀಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.