ಮರಾಠಾ ಅಭಿವೃದ್ಧಿ ಪ್ರಾಧಿಕಾರ ರದ್ದತಿಗೆ ಆಗ್ರಹ
Team Udayavani, Nov 20, 2020, 4:08 PM IST
ಶಿವಮೊಗ್ಗ: ಮರಾಠಾ ಅಭಿವೃದ್ಧಿ ಪ್ರಾಧಿಕಾರ ರದ್ದುಪಡಿಸಬೇಕೆಂದು ಒತ್ತಾಯಿಸಿಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿಬಣದ ಕಾರ್ಯಕರ್ತರು ಗುರುವಾರ ಪ್ರತಿಭಟನೆ ನಡೆಸಿದರು.
ಕೋವಿಡ್ ರಾಜ್ಯವನ್ನು ದಿವಾಳಿಯತ್ತ ಕೊಂಡೊಯ್ಯುತ್ತಿದೆ. ಉತ್ತರ ಕರ್ನಾಟಕದಲ್ಲಿ ಪ್ರವಾಹದಿಂದ ಜನ ಸಂಕಷ್ಟದಲ್ಲಿದ್ದಾರೆ. ಬೆಳೆ ನಾಶವಾಗಿ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ರೈತರಿಗೆ ನೆರವು ನೀಡದೆ ಮರಾಠಾ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಮೂಲಕ ಮರಾಠಿಗರನ್ನು ಒಲಿಸಿಕೊಳ್ಳಲು ಹೊರಟಿರುವುದು ಸರಿಯಲ್ಲ ಎಂದರು.
ಸರ್ಕಾರ ತೆಗೆದುಕೊಂಡಿರುವ ನಿರ್ಧಾರವನ್ನು ಮರಾಠಿಗರು ಎಲ್ಲೂ ಕೂಡ ಸ್ವಾಗತಿಸಿಲ್ಲ. ಪ್ರಾಧಿಕಾರ ರಚನೆಗೆ ವಿಜಯೋತ್ಸವ ಆಚರಿಸಿದ್ದು ಎಲ್ಲಿಯೂ ಕಂಡು ಬಂದಿಲ್ಲ. ಮರಾಠಿಗರಿಗೆ ಪ್ರಾಧಿ ಕಾರದ ಅವಶ್ಯಕತೆ ಇಲ್ಲದಿರುವುದು ಅರಿವಾಗುತ್ತದೆ ಎಂದು ಹೇಳಿದರು.
ಮರಾಠಿಗರು ಬೇಡಿಕೆಗಳನ್ನು ಈಡೇರಿಸ ಬೇಕೆಂದು ಹೋರಾಟದ ಮೂಲಕ ಒತ್ತಾಯ ಮಾಡಿದ್ದರೆ ರಾಜ್ಯ ಸರ್ಕಾರ ಮರಾಠಾ ಅಭಿವೃದ್ಧಿ ಪ್ರಾಧಿಕಾರಕ್ಕೆ ನೀಡಿರುವ50 ಕೋಟಿ ರೂ. ಹಣವನ್ನು ಪ್ರವಾಹಪೀಡಿತರಿಗೆ ಉತ್ತರ ಕರ್ನಾಟಕದ ನೊಂದರೈತರಿಗೆ ನೀಡುವ ಮೂಲಕ ರಾಜ್ಯದ ಹಿತ ಕಾಪಾಡಬೇಕೆಂದು ಒತ್ತಾಯಿಸಿದರು. ಪ್ರಾಧಿಕಾರ ರಚನೆ ಮಾಡಿದ್ದೇ ಆದಲ್ಲಿ ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ನೆಲೆಸಿರುವ ಅನ್ಯಭಾಷಿಗರಿಗೂ ಕೂಡ ಪ್ರಾಧಿ ಕಾರ ರಚಿಸಬಹುದು. ಬೇಕಾದರೆ ಮರಾಠಿಗರ ಬೇಡಿಕೆಗಳನ್ನು ಸರ್ಕಾರ ಪರಿಶೀಲಿಸಿ ಈಡೇರಿಸಲಿ. ಆದರೆ ಅಭಿವೃದ್ಧಿ ಪ್ರ ಧಿಕಾರ ರಚಿಸಬಾರದು ಎಂದು ಆಗ್ರಹಿಸಿದರು.
ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದ ಪ್ರಮುಖರಾದ ರವಿಪ್ರಸಾದ್, ಎಸ್.ಎಂ.ಮಧುಸೂದನ್, ರಘುನಂದನ್, ನಯಾಜ್ ಎಂ.,ನೂರುಲ್ಲಾ, ಎಸ್. ಭರತ್, ಶಿವಕುಮಾರ್, ಅಮೃತ್, ಜಯಕೀರ್ತಿ, ಪ್ರದ್ಯುಮ್ನ ಮತ್ತಿತರರು ಇದ್ದರು.
ಸಾಗರದಲ್ಲಿ ಕರವೇ ಪ್ರತಿಭಟನೆ :
ಸಾಗರ: ರಾಜ್ಯ ಸರ್ಕಾರ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಅಭಿವೃದ್ಧಿಪಡಿಸುವ ಬದಲು ಮರಾಠಾ ಅಭಿವೃದ್ಧಿ ಪ್ರಾಧಿಕಾರ ಸ್ಥಾಪಿಸಿರುವುದು ಹಾಗೂ ಕನ್ನಡ ಪ್ರಾಧಿಕಾರಕ್ಕೆ ಅನುದಾನ ಕಡಿಮೆ ನೀಡಿ ಮರಾಠಾ ಪ್ರಾಧಿಕಾರಕ್ಕೆ ಹೆಚ್ಚಿನ ಅನುದಾನ ನೀಡುತ್ತಿರುವುದನ್ನು ಖಂಡಿಸಿ ಗುರುವಾರ ಕರ್ನಾಟಕ ರಕ್ಷಣಾ ವೇದಿಕೆಯ ನಾರಾಯಣ ಗೌಡ ಬಣ ವತಿಯಿಂದ ಉಪ ವಿಭಾಗಾಧಿ ಕಾರಿಗಳ ಕಚೇರಿಗೆ ಮನವಿ ಸಲ್ಲಿಸಲಾಯಿತು.
ಪ್ರಸ್ತುತ ರಾಜ್ಯ ಸರ್ಕಾರ ಕನ್ನಡ ವಿರೋಧಿ ನೀತಿ ಅನುಸರಿಸುತ್ತಿದೆ. ಕರ್ನಾಟಕದಲ್ಲಿ ಕನ್ನಡ ಭಾಷೆಗೆ ಮೊದಲ
ಮಾನ್ಯತೆ ಸಿಗಬೇಕು ಎನ್ನುವುದು ಪ್ರತಿಯೊಬ್ಬ ಕನ್ನಡಿಗ ಹಾಗೂ ಕನ್ನಡಪರ ಸಂಘಟನೆಗಳ ಒತ್ತಾಸೆಯಾಗಿದೆ. ಆದರೆ ರಾಜ್ಯ ಸರ್ಕಾರ ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ 5 ಕೋಟಿ ರೂ. ನೀಡಿ, ಮರಾಠಾ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡಿ ಅದಕ್ಕೆ 50 ಕೋಟಿ ರೂ. ಅನುದಾನ ನೀಡಿರುವುದು ಸರ್ಕಾರದ ಕನ್ನಡ ವಿರೋಧಿ ನೀತಿಗೆ ಸ್ಪಷ್ಟ ಉದಾಹರಣೆಯಾಗಿದೆ ಎಂದು ದೂರಲಾಗಿದೆ.
ವೇದಿಕೆಯ ಪ್ರಮುಖರಾದ ಮೋಹನ್, ಫಯಾಜ್, ಕಬೀರ್, ಸಚಿನ್, ಶಶಿಧರ್, ಸತೀಶ್ ಇನ್ನಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್ ಮಾದರಿಯಲ್ಲಿ ವಿಶೇಷ ಪೊಲೀಸ್ ಪಡೆ
Thirthahalli: ತೀರ್ಥಹಳ್ಳಿ ವ್ಯವಸ್ಥಿತವಾಗಿ ಎರಡನೇ ಭಟ್ಕಳ ಆಗುತ್ತಿದೆ.. ಪ್ರಮೋದ್ ಮುತಾಲಿಕ್
Anandapura: ನಿಂತಿದ್ದ ಕಾರಿಗೆ ಇನ್ನೊಂದು ಕಾರು ಡಿಕ್ಕಿ ಹೊಡೆದು ಕಾರು ಪಲ್ಟಿ
Sagara: ವಿದ್ಯುತ್ ಟ್ರಾನ್ಸ್ ಫಾರ್ಮರ್‌ಗೆ ನೇಣು ಬಿಗಿದು ಯುವಕ ಆತ್ಮಹತ್ಯೆ
Sagara: ಮಿಡಿ ಮಾವು, ವಿಶ್ವವಿದ್ಯಾಲಯದ ನಡೆದಾಡುವ ವಿಶ್ವಕೋಶ ಬಿ.ವಿ.ಸುಬ್ಬರಾವ್ ಇನ್ನಿಲ್ಲ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
SPB: ಎಸ್‌ಪಿಬಿ ಸ್ಮಾರಕ ನಿರ್ಮಾಣಕ್ಕಾಗಿ ಡಿ.8ರಂದು ಸಂಗೀತ ಕಛೇರಿ
Sandalwood: ನಿಮ್ಮ ನಿರೀಕ್ಷೆಗೆ ನಾವು ಜವಾಬ್ದಾರರು: ʼನಾ ನಿನ್ನ ಬಿಡಲಾರೆ’ ಇಂದು ತೆರೆಗೆ
ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?
Pension Fraud: ಕಲ್ಯಾಣ ಪಿಂಚಣಿ ಲಪಟಾವಣೆ; ಸಿಕ್ಕಿ ಬಿದ್ದ 1,458 ಸರಕಾರಿ ಸಿಬಂದಿ
Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಯಶಸ್ಸು, ಅನಿರೀಕ್ಷಿತ ಧನಾಗಮ ಸಂಭವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.