Shimoga ಪಾಲಿಕೆ ಆಯುಕ್ತರ ವಿರುದ್ದ ಪ್ರತಿಭಟನೆ; ಕಾರು ತಡೆದು ಹೈಡ್ರಾಮಾ
Team Udayavani, Dec 7, 2024, 2:57 PM IST
ಶಿವಮೊಗ್ಗ: ಮಹಾನಗರ ಪಾಲಿಕೆ ಆಯುಕ್ತರ ವಿರುದ್ದ ಕುವೆಂಪು ರಂಗಮಂದಿರದ ಎದುರು ಪ್ರತಿಭಟನೆ ನಡೆಸಲಾಗುತ್ತಿದೆ. ಪ್ರತಿಭಟನಾ ಸ್ಥಳದಲ್ಲಿ ಹೈಡ್ರಾಮ ನಡೆದಿದ್ದು, ಪಾಲಿಕೆ ಆಯುಕ್ತರ ಕಾರು ತಡೆದು ಪ್ರತಿಭಟನೆ ನಡೆಸಲಾಗಿದೆ.
ಆಶ್ರಯ ಮನೆಗಳ ಫಲಾನುಭವಿಗಳ ಆಯ್ಕೆ ಸಭೆ ರದ್ದುಗೊಳಿಸಿರುವುದನ್ನು ಖಂಡಿಸಿ ಪ್ರತಿಭಟನೆ ನಡೆಸಲಾಗುತ್ತಿದೆ. ಪಾಲಿಕೆ ಆಯುಕ್ತರ ಕಾರು ತಡೆದು ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನಾಕಾರರು ಗೇಟ್ ಹಾಕಿ ಆಯುಕ್ತರ ಕಾರು ತಡೆ ಹಿಡಿದರು. ಆಶ್ರಯ ಮನೆ ಹಂಚಿಕೆ ಮಾಡುವರೆಗೆ ಕಾರು ಬಿಡಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಸ್ಥಳಕ್ಕೆ ದೌಡಾಯಿಸಿದ ಕೋಟೆ ಪೋಲಿಸರು ಹಾಗೂ ಕೆಎಸ್ಆರ್ಪಿ ಪೊಲೀಸರು ಪ್ರತಿಭಟನಾಕಾರರನ್ನು ಮನವೊಲಿಸುವ ಪ್ರಯತ್ನ ಮಾಡಿದರೂ ಅದಕ್ಕೆ ಬಗ್ಗಲಿಲ್ಲ. ಆಯುಕ್ತೆ ಕವಿತಾ ಯೋಗಪ್ಪನವರ್ ಕಾರು ಇಳಿದು ನಡೆದುಕೊಂಡು ಹೋಗಲು ಮುಂದಾದಾಗ ಗೇಟ್ ಗೆ ಅಡ್ಡ ನಿಂತು ಪ್ರತಿಭಟನಾಕಾರರು ತಡೆದರು. ಪ್ರತಿಭಟನಾಕಾರರನ್ನು ತಡೆಯಲು ಪೋಲಿಸರು ಮುಂದಾದರು.
ಗೇಟ್ ತೆಗೆಯಲು ಬಿಡದೆ ಹೈ ಡ್ರಾಮಾ ನಡೆದಿದ್ದು, ಕೊನೆಗೂ ಗೇಟ್ ತೆಗೆದು ಭದ್ರತೆಯಲ್ಲಿ ಪೊಲೀಸರು ಆಯುಕ್ತರನ್ನು ಕಳುಹಿಸಿಕೊಟ್ಟರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga; ಕಾಲುವೆಗೆ ಬಿದ್ದ ಕುದುರೆಯನ್ನು ರಕ್ಷಣೆ ಮಾಡಿದ ಅಗ್ನಿಶಾಮಕ ಸಿಬ್ಬಂದಿ
Shimoga: ತ್ಯಾವರೆಕೊಪ್ಪ ಧಾಮದಲ್ಲಿ ಮೃತಪಟ್ಟ ಹೆಣ್ಣು ಹುಲಿ ಅಂಜನಿ
Shimoga; ಮನೆಯಂಗಳದಿಂದ ನಾಯಿ ಹೊತ್ತೊಯ್ದ ಚಿರತೆ; ಸಿಸಿಕ್ಯಾಮರಾದಲ್ಲಿ ದೃಶ್ಯ ಸೆರೆ
Anandapura: ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ; ತಪ್ಪಿದ ಅನಾಹುತ
ಸಾಗರಕ್ಕೆ ಆಗಮಿಸಿದ ಡಾ.ನಾ.ಡಿಸೋಜಾ ಪಾರ್ಥಿವ ಶರೀರ; ಗಣ್ಯರು, ಅಧಿಕಾರಿಗಳಿಂದ ಅಂತಿಮ ದರ್ಶನ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.