ತಾಪಂ ಅಧಿಕಾರಿಗಳ ಕ್ರಮ ಖಂಡಿಸಿ ಪ್ರತಿಭಟನೆ

ತಮಟೆ ಬಡಿದು ಅಡುಗೆ ಮಾಡಿ ಊಟ ಬಡಿಸಿ ಆಕ್ರೋಶ

Team Udayavani, Apr 7, 2022, 2:55 PM IST

protest

ಸಾಗರ: ತ್ಯಾಗರ್ತಿ ಗ್ರಾಪಂ ಅಭಿವೃದ್ಧಿ ಅಧಿಕಾರಿಯನ್ನು ಬೇರೆ ಕಡೆ ವರ್ಗಾಯಿಸುತ್ತೇವೆ ಎಂದು ಭರವಸೆ ನೀಡಿ, ಮಾತು ತಪ್ಪಿದ ತಾಪಂ ಅಧಿಕಾರಿಗಳ ಕ್ರಮ ಖಂಡಿಸಿ ಬುಧವಾರ ರೈತಸಂಘದ ಡಾ| ಎಚ್‌.ಗಣಪತಿಯಪ್ಪ ಬಣದ ವತಿಯಿಂದ ತಾಲೂಕು ಕಚೇರಿ ಎದುರು ತಮಟೆ ಬಡಿದು, ಅಡುಗೆ ಮಾಡಿ ಊಟ ಮಾಡುವ ಮೂಲಕ ವಿನೂತನ ಪ್ರತಿಭಟನೆ ನಡೆಸಲಾಯಿತು.

ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ರೈತಸಂಘದ ತಾಲೂಕು ಅಧ್ಯಕ್ಷ ದಿನೇಶ್‌ ಶಿರವಾಳ, ತ್ಯಾಗರ್ತಿ ಗ್ರಾಪಂ ಪಿಡಿಒ ಅವರ ಸ್ವಜನ ಪಕ್ಷಪಾತ, ಸಾಕ್ಷಿನಾಶ, ಹಲ್ಲೆ ಇನ್ನಿತರ ಕೃತ್ಯ ಖಂಡಿಸಿ ದಾಖಲೆ ಸಹಿತವಾಗಿ ಕಳೆದ ಮಾ. 24ರಂದು ತಾಪಂ ಎದುರು ಪ್ರತಿಭಟನೆ ನಡೆಸಲಾಗಿತ್ತು. ಈ ಸಂದರ್ಭದಲ್ಲಿ ಜಿಪಂ ಸಿಇಒ, ತಾಪಂ ಇಒ ಪುಷ್ಪಾ ಎಂ. ಕಮ್ಮಾರ್‌ ಏ. 1ರಂದು ಪಿಡಿಒ ಅವರನ್ನು ಬೇರೆ ಕಡೆ ವರ್ಗಾವಣೆ ಮಾಡುವ ಭರವಸೆ ನೀಡಿದ್ದರು. ಭರವಸೆ ಹಿನ್ನೆಲೆಯಲ್ಲಿ ರೈತಸಂಘ ಅಹೋರಾತ್ರಿ ಪ್ರತಿಭಟನೆಯನ್ನು ಹಿಂದಕ್ಕೆ ಪಡೆದಿತ್ತು. ಆದರೆ ಈತನಕ ಪಿಡಿಒ ಅವರನ್ನು ವರ್ಗಾವಣೆ ಮಾಡುವತ್ತ ಅಧಿಕಾರಿಗಳು ಗಮನ ಹರಿಸದೆ ವಚನಭ್ರಷ್ಟರಾಗಿದ್ದಾರೆ. ರೈತಸಂಘ ಮತ್ತು ಸಾರ್ವಜನಿಕರನ್ನು ಅಧಿಕಾರಿಗಳು ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಎಂದು ದೂರಿದರು.

ತಾಪಂ ಇಒ ಪ್ರತಿ ಪಿಡಿಒನಿಂದ ಪ್ರತಿ ತಿಂಗಳು 15 ಸಾವಿರ ರೂ. ಮಾಮೂಲಿ ಪಡೆಯುತ್ತಿದ್ದಾರೆ. ತ್ಯಾಗರ್ತಿ ವ್ಯಾಪ್ತಿಯಲ್ಲಿ ಬೃಹತ್‌ ಲೇಔಟ್‌ ನಿರ್ಮಾಣವಾಗುತ್ತಿದೆ. ಇದರಿಂದಾಗಿ ಅಧಿಕಾರಿಗಳಿಗೆ ಪಿಡಿಒ ಅವರನ್ನು ವರ್ಗಾವಣೆ ಮಾಡಲು ಮನಸ್ಸಿದ್ದಂತೆ ಕಾಣುತ್ತಿಲ್ಲ. ತಾಲೂಕಿನ ಅಧಿಕಾರಿಗಳ ಭ್ರಷ್ಟಾಚಾರ ಮಿತಿಮೀರಿದೆ. ಪಂಚಾಯತ್‌ ರಾಜ್‌ ಸಚಿವ ಈಶ್ವರಪ್ಪ ಸಹ ಕಮಿಷನ್‌ ಪಡೆಯುತ್ತಾರೆ ಎನ್ನುವ ದೂರುಗಳಿವೆ. ಶಾಸಕರು ಅಧಿಕಾರಿಗಳನ್ನು ನಿಯಂತ್ರಣದಲ್ಲಿರಿಸಿಕೊಳ್ಳಲು ವಿಫಲವಾಗಿದ್ದು, ವಿಪಕ್ಷ ಹಾಗೂ ಮಾಜಿ ಶಾಸಕ ಗೋಪಾಲಕೃಷ್ಣ ಬೇಳೂರು ರೈತರ ಸಮಸ್ಯೆ ಸಂಬಂಧ ಪ್ರತಿಭಟನೆ ಮಾಡುತ್ತಿಲ್ಲ. ರೈತಸಂಘ ಪಿಡಿಒ ಅವರನ್ನು ವರ್ಗಾವಣೆ ಮಾಡುವ ತನಕ ತನ್ನ ಹೋರಾಟ ಕೈಬಿಡುವುದಿಲ್ಲ ಎಂದು ಎಚ್ಚರಿಕೆ ನೀಡಿದರು.

ಹೊಯ್ಸಳ ಗಣಪತಿಯಪ್ಪ, ದೇವರಾಜ್‌, ರವಿ ಬೆಳಂದೂರು, ಭದ್ರೇಶ್‌ ಬಾಳಗೋಡು, ನಿತ್ಯಾನಂದ, ಕನ್ನಪ್ಪ, ಚಂದ್ರು, ಮಹೇಂದ್ರ, ಕಿರಣ್‌, ಟಿ.ವಿ. ಮಲ್ಲೇಶಪ್ಪ ಇನ್ನಿತರರು ಇದ್ದರು.

ಟಾಪ್ ನ್ಯೂಸ್

Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ

Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ

yathanal-jarakiholi

Waqf Notice: ಬಸನಗೌಡ ಪಾಟೀಲ್‌ ಯತ್ನಾಳ್‌ ತಂಡದಿಂದ 1 ತಿಂಗಳು ಜನ ಜಾಗೃತಿ

BYV-yathnal

Waqf Issue: ಕಾಂಗ್ರೆಸ್‌ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ

IT employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ

Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ

HD-Kumaraswmy

Black Days: ಜಮೀರ್‌+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್‌.ಡಿ.ಕುಮಾರಸ್ವಾಮಿ

Delhi-Air

Air Pollution: ದಿಲ್ಲಿ ಗಾಳಿಯೇ ವಿಷ, ಒಂದು ದಿನದ ಉಸಿರಾಟ 25 ಸಿಗರೇಟಿಗೆ ಸಮ!

north

Kim Jong Un: ಉತ್ತರ ಕೊರಿಯಾದಿಂದ ಆತ್ಮಹತ್ಯಾ ಡ್ರೋನ್‌ ಪರೀಕ್ಷೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

SMG-Shikaripura

Shivamogga: ಆಸ್ಪತ್ರೆಯಲ್ಲಿನ ತೆರೆದ ನೀರಿನ ತೊಟ್ಟಿಗೆ ಬಿದ್ದು ಮಗು ಮೃತ್ಯು!

raghav

Shimoga; ವಿಜಯೇಂದ್ರರನ್ನು ಕಟ್ಟಿ ಹಾಕಲು ಕಾಂಗ್ರೆಸ್‌ ನಿಂದ ಸುಳ್ಳು ಆರೋಪ: ರಾಘವೇಂದ್ರ

9

Anandapura: ಸಾಲ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ

Congress is taking revenge by forming SIT: Araga Jnanendra

Shimoga: ಎಸ್ಐಟಿ ರಚನೆ ಮೂಲಕ ಕಾಂಗ್ರೆಸ್ ಹಗೆ ತೀರಿಸಿಕೊಳ್ಳುತ್ತಿದೆ: ಆರಗ ಜ್ಞಾನೇಂದ್ರ

Anandapura: ಸಾಲದ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ

Anandapura: ಸಾಲದ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ

Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ

yathanal-jarakiholi

Waqf Notice: ಬಸನಗೌಡ ಪಾಟೀಲ್‌ ಯತ್ನಾಳ್‌ ತಂಡದಿಂದ 1 ತಿಂಗಳು ಜನ ಜಾಗೃತಿ

BYV-yathnal

Waqf Issue: ಕಾಂಗ್ರೆಸ್‌ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ

IT employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ

Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ

HD-Kumaraswmy

Black Days: ಜಮೀರ್‌+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್‌.ಡಿ.ಕುಮಾರಸ್ವಾಮಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.