ಅವೈಜ್ಞಾನಿಕ ಕಾಮಗಾರಿ ತಡೆಗೆ ಒತ್ತಾಯಿಸಿ ಪ್ರತಿಭಟನೆ
Team Udayavani, Jan 5, 2022, 9:54 PM IST
ಶಿವಮೊಗ: ಸ್ಮಾರ್ಟ್ ಸಿಟಿ ಹೆಸರಲ್ಲಿ ಅವೈಜ್ಞಾನಿಕ ಕಾಮಗಾರಿ ನಡೆಸಲಾಗುತ್ತಿದೆ ಎಂದು ಆರೋಪಿಸಿ ಜಿಲ್ಲಾ ಜಾತ್ಯತೀತ ಜನತಾದಳ ಕಾರ್ಮಿಕ ವಿಭಾಗ ವತಿಯಿಂದ ನಗರದ ಸ್ಮಾರ್ಟ್ ಸಿಟಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.
ನಗರದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿಶೇಷ ಅನುದಾನದ ಅಡಿಯಲ್ಲಿ ನೂರಾರು ಕೋಟಿ ರೂ. ವೆಚ್ಚದಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿ ನಡೆಯುತ್ತಿದೆ. ನಗರದ ಬಹುತೇಕ ಕಡೆ ಕಾಮಗಾರಿ ಅವೈಜ್ಞಾನಿಕವಾಗಿದೆ. ಇದರಿಂದ ನಾಗರಿಕರಿಗೆ, ವ್ಯಾಪಾರಸ್ಥರಿಗೆ ತೀವ್ರ ತೊಂದರೆಯಾಗುತ್ತಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ನಗರದ ಹೃದಯ ಭಾಗದಲ್ಲಿರುವ ದುರ್ಗಿಗುಡಿ, ಹೊಸಮನೆ, ಶರಾವತಿ ನಗರ, ಜೈಲ್ ರಸ್ತೆ ಮುಂತಾದ ಕಡೆಗಳಲ್ಲಿ ಕಾಮಗಾರಿ ನಡೆಸುತ್ತಿರುವ ಇಲಾಖೆಗಳ ನಡುವೆ ಸಮನ್ವಯ ಕೊರತೆ ಇದೆ. ಇದರಿಂದ ಕಾಮಗಾರಿ ಸಂಪೂರ್ಣ ಅವೈಜ್ಞಾನಿಕವಾಗಿದ್ದು, ನೂರಾರು ಕೋಟಿ ರೂ. ಜನರ ತೆರಿಗೆ ಹಣ ಪೋಲಾಗುತ್ತಿದೆ ಎಂದು ಆರೋಪಿಸಿದರು. ಈ ಕೂಡಲೇ ಸ್ಮಾರ್ಟ್ ಸಿಟಿ ವ್ಯವಸ್ಥಾಪಕ ನಿರ್ದೇಶಕರು ಸ್ಮಾರ್ಟ್ ಸಿಟಿ ಕಾಮಗಾರಿಗಳಲ್ಲಿ ತೊಡಗಿರುವ ಸಂಬಂಧಿ ಸಿದ ಎಲ್ಲಾ ಇಲಾಖೆಗಳೊಂದಿಗೆ ಸಮನ್ವಯ ಸಾ ಧಿಸಿ ಜನರ ತೆರಿಗೆ ಹಣ ಪೋಲಾಗುತ್ತಿರುವುದನ್ನು ತಡೆಯಬೇಕೆಂದು ಒತ್ತಾಯಿಸಿದರು.
ಸ್ಮಾರ್ಟ್ ಸಿಟಿ ಮುಖ್ಯ ಇಂಜಿನಿಯರ್ ಗೆ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಶಾಮು ಡಿ., ನರಸಿಂಹ ಗಂಧದಮನೆ, ಎಚ್. ಪಾಲಾಕ್ಷಿ. ನಾಗರಾಜ ಕಂಕಾರಿ, ಎಸ್. ಬಸವರಾಜ, ಪರಶುರಾಂ ಬಿ., ಮಂಜುನಾಥ ನವುಲೆ, ಎಂ. ರಾಜಣ್ಣ, ದಿನೇಶ್, ಎಂ. ಮಂಜುನಾಥ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್ನ ಕೃಷ್ಣದಾಸ್ ಸೆರೆ
Parliament Session: ಗೂಂಡಾಗಿರಿ ಮೂಲಕ ಸಂಸತ್ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ
Sullia: ರಬ್ಬರ್ ಸ್ಮೋಕ್ ಹೌಸ್ಗೆ ಬೆಂಕಿ
Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ
Mosque survey: ಸಂಭಲ್ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.