ಸಾಗರ: 15ರಂದು ಬಾವುಟ ಬೇಡ, ಭೂಮಿ ಹಕ್ಕು ಕೊಡಿ ಪ್ರತಿಭಟನೆ


Team Udayavani, Aug 9, 2022, 4:19 PM IST

17

ಸಾಗರ: ಜಿಲ್ಲೆಯ ಮೂರು ಲಕ್ಷಕ್ಕೂ ಹೆಚ್ಚು ಕುಟುಂಬಗಳಿಗೆ ಭೂಮಿ ಹಕ್ಕು ನೀಡದೆ ಸತಾಯಿಸುತ್ತಿರುವ ರಾಜ್ಯ ಸರ್ಕಾರದ ಧೋರಣೆ ಖಂಡಿಸಿ ಆ. 15 ರಂದು ಮಲೆನಾಡು ರೈತ ಹೋರಾಟ ವೇದಿಕೆ ವತಿಯಿಂದ ಬಾವುಟ ಬೇಡ, ಭೂಮಿ ಹಕ್ಕು ಕೊಡಿ ಎನ್ನುವ ವಿನೂತನ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ವೇದಿಕೆಯ ಜಿಲ್ಲಾ ಸಂಚಾಲಕ ತೀ.ನ.ಶ್ರೀನಿವಾಸ್ ತಿಳಿಸಿದ್ದಾರೆ.

ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಆಗಸ್ಟ್ 14 ರೊಳಗೆ ಶರಾವತಿ ಮುಳುಗಡೆ ಸಂತ್ರಸ್ತರಿಗೆ, ಅರಣ್ಯ ಭೂಮಿ ವಾಸಿಗಳಿಗೆ, ಬಗರ್‌ಹುಕುಂ ಸಾಗುವಳಿದಾರರಿಗೆ ಹಕ್ಕುಪತ್ರ ನೀಡಬೇಕು. ಇಲ್ಲವಾದಲ್ಲಿ ಜಿಲ್ಲೆಯ ಸಂತ್ರಸ್ತ 3 ಲಕ್ಷಕ್ಕೂ ಅಧಿಕ ಕುಟುಂಬಗಳು ಮನೆಯ ಮೇಲೆ ರಾಷ್ಟ್ರಧ್ವಜ ಹಾರಿಸದೆ ತಮ್ಮ ಪ್ರತಿರೋಧ ವ್ಯಕ್ತಪಡಿಸುವ ಮೂಲಕ ಸ್ವಾತಂತ್ರ್ಯ ಅಮೃತ ಮಹೋತ್ಸವವನ್ನು ಬಹಿಷ್ಕರಿಸುವ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಹೇಳಿದರು.

ನಮಗೆ ಬಾವುಟದ ಮಹತ್ವವನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರ ತಿಳಿಸುವ ಅಗತ್ಯವಿಲ್ಲ. ನಮ್ಮ ಎದೆಯಲ್ಲಿ ಬಾವುಟದ ಬಗ್ಗೆ ಅಪಾರ ಗೌರವವಿದೆ. ನಮಗೆ ಬೇಕಾಗಿರುವುದು ಭೂಮಿ ಹಕ್ಕು. ಕೇಂದ್ರ ಮತ್ತು ರಾಜ್ಯದಲ್ಲಿ ಎರಡೂ ಕಡೆ ಬಿಜೆಪಿ ಸರ್ಕಾರ ಇದ್ದರೂ ಅನೇಕ ವರ್ಷಗಳಿಂದ ನಮ್ಮ ಸಮಸ್ಯೆಯನ್ನು ಜೀವಂತವಾಗಿ ಇರಿಸುವ ಮೂಲಕ ನಮ್ಮನ್ನು ಸತಾಯಿಸುತ್ತಿರುವ ಕ್ರಮ ಖಂಡನೀಯ. ಈ ಹಿನ್ನೆಲೆಯಲ್ಲಿ ಆ. 15 ರಂದು ಬಾವುಟ ಬೇಡ, ಭೂಮಿ ಹಕ್ಕು ಕೊಡಿ ಎಂಬ ಹಕ್ಕೊತ್ತಾಯದ ಕರೆ ಜಿಲ್ಲಾದ್ಯಂತ ನೀಡಲಾಗಿದ್ದು, ಸಂತ್ರಸ್ತ ರೈತರು ಇದಕ್ಕೆ ಕೈಜೋಡಿಸಬೇಕು ಎಂದು ಕರೆ ನೀಡಿದರು.

ಶರಾವತಿ ಮುಳುಗಡೆ ಸಂತ್ರಸ್ತರಿಗೆ ಭೂಮಿ ಹಕ್ಕು ಕೊಡಲು 2021ರ ಸೆಪ್ಟೆಂಬರ್ 23 ಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸಭೆಯಲ್ಲಿ ತೀರ್ಮಾನ ಕೈಗೊಂಡು ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಲು ತೀರ್ಮಾನಿಸಲಾಗಿತ್ತು. ಈ ತನಕ ಪ್ರಸ್ತಾವನೆ ಕೇಂದ್ರಕ್ಕೆ ಸಲ್ಲಿಸಿಲ್ಲ. ಸಭೆಯ ನಡಾವಳಿಯನ್ನು ದಾಖಲಿಸುವ ಕೆಲಸ ಸಹ ಸರ್ಕಾರ ಮಾಡಿಲ್ಲ. ನಾಡಿಗೆ ಬೆಳಕು ನೀಡಿದ ಸಂತ್ರಸ್ತರಿಗೆ 9,600 ಎಕರೆ ಭೂಮಿ ಕೊಡಲು ಡಿನೋಟಿಫಿಕೇಶನ್ ಮಾಡಲಾಗಿದೆ. ಆದರೆ ನ್ಯಾಯಾಲಯ ಕೇಂದ್ರದ ಅನುಮತಿ ಪಡೆಯದೆ ಈ ನಿರ್ಣಯ ಕೈಗೊಳ್ಳಲಾಗಿದೆ. ಇದು ಕಾನೂನು ಬಾಹಿರ ಎಂದು 2021ರ ಮಾರ್ಚ್ 4ಕ್ಕೆ ತೀರ್ಪು ನೀಡಿದೆ. ಆದರೆ 18 ತಿಂಗಳು ಕಳೆದರೂ ರಾಜ್ಯ ಸರ್ಕಾರದ ವಕೀಲರು ಸಂತ್ರಸ್ತ ರೈತರ ಪರವಾಗಿ ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸಿಲ್ಲ ಎಂದು ದೂರಿದ ಅವರು, ಕಸ್ತೂರಿ ರಂಗನ್ ವರದಿ ಜಾರಿಗೆ ಬೇಡ ಎಂದು ನವದೆಹಲಿಗೆ ನಿಯೋಗ ಹೋಗಿದ್ದ ಮಲೆನಾಡಿನ ಸಂಸದರು ಮತ್ತು ಶಾಸಕರಿಗೆ ಶರಾವತಿ ಮುಳುಗಡೆ ಸಂತ್ರಸ್ತರ ಕಷ್ಟ ಕಾಣಿಸದೆ ಇರುವುದು ದುರದೃಷ್ಟಕರ ಎಂದರು.

ಒಂದರ್ಥದಲ್ಲಿ ಜಿಲ್ಲೆಯ ಸಚಿವರು, ಶಾಸಕರು ತುರ್ತು ನಿಗಾ ಘಟಕದಲ್ಲಿ ಇರುವಂತೆ ವರ್ತಿಸುತ್ತಿದ್ದಾರೆ. ಇವರಿಗೆ ಮಲೆನಾಡು ಭಾಗದ ರೈತರ ಬಗ್ಗೆ ಕಿಂಚಿತ್ ಕಾಳಜಿ ಇಲ್ಲ. ನ್ಯಾಯಾಲಯಕ್ಕೆ ವಾಸ್ತವ ಸ್ಥಿತಿಯನ್ನು ವಿವರಿಸಿ ಸಂತ್ರಸ್ತ ರೈತರನ್ನು ರಕ್ಷಣೆ ಮಾಡುವಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಅರಣ್ಯ ಹಕ್ಕು ಕಾಯ್ದೆಯಡಿ ಭೂ ಹಕ್ಕು ಕೋರಿ ಅರ್ಜಿ ಸಲ್ಲಿಸಿದ್ದ ೬೦ ಸಾವಿರ ಅರ್ಜಿಯನ್ನು ವಜಾ ಮಾಡಲಾಗಿದೆ. ನಮ್ಮನ್ನು ಪ್ರತಿನಿಧಿಸುವ ಜನಪ್ರತಿನಿಧಿಗಳಿಗೆ ಇಚ್ಛಾಸಕ್ತಿಯ ಕೊರತೆ ಇದೆ. ಭೂಕಬಳಿಕೆ ಹಿನ್ನೆಲೆಯಲ್ಲಿ ಅಮಾಯಕ ರೈತರಿಗೆ ನೋಟಿಸ್ ನೀಡಲಾಗುತ್ತಿದೆ. ವರಾಹಿ, ಚಕ್ರ, ಸಾವೆಹಕ್ಲು ಮುಳುಗಡೆ ಸಂತ್ರಸ್ತರಿಗೆ ನ್ಯಾಯ ಕೊಡಿಸಲು ಗೃಹ ಸಚಿವ ಆರಗ ಜ್ಞಾನೇಂದ್ರ ೨೦ಕ್ಕೂ ಹೆಚ್ಚು ಸಭೆಗಳನ್ನು ನಡೆಸಿದರೂ ಪ್ರಯೋಜನವಾಗಿಲ್ಲ. ಒಟ್ಟಾರೆ ಸರ್ಕಾರದ ಭೂಹೀನರ ವಿರುದ್ಧ ನೀತಿ ಅತ್ಯಂತ ಮಾರಕವಾಗಿ ಪರಿಣಮಿಸಿದೆ ಎಂದರು.

ಗೋಷ್ಠಿಯಲ್ಲಿ ವೇದಿಕೆ ಪ್ರಮುಖರಾದ ಪರಶುರಾಮ್, ಅಶೋಕ್, ನಾಗರಾಜ್, ವೀರೇಶಪ್ಪ ಇನ್ನಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ: ರವಿ

CT Ravi: ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

1-a-bb

Pro Kabaddi: ಬೆಂಗಳೂರು ಬುಲ್ಸ್‌ ಗೆ 18ನೇ ಸೋಲು

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

“ರವಿ ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

“CT Ravi ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

CT Ravi Arrest; ಧೂರ್ತ ಸರ್ಕಾರ ನೀಚತನದ ಕೆಲಸ ಮಾಡಿದೆ: ಆರಗ ಜ್ಞಾನೇಂದ್ರ

CT Ravi Arrest; ಧೂರ್ತ ಸರ್ಕಾರ ನೀಚತನದ ಕೆಲಸ ಮಾಡಿದೆ: ಆರಗ ಜ್ಞಾನೇಂದ್ರ

ಇದು ಸಿ.ಟಿ.ರವಿ ಅವರನ್ನು ಸದೆಬಡಿಯುವ ಪ್ರಯತ್ನ;ಶಾಸಕ ಚನ್ನಬಸಪ್ಪ

Shimoga; ಇದು ಸಿ.ಟಿ.ರವಿ ಅವರನ್ನು ಸದೆಬಡಿಯುವ ಪ್ರಯತ್ನ;ಶಾಸಕ ಚನ್ನಬಸಪ್ಪ

Sakrebailu: ತಾಂತ್ರಿಕ ದೋಷದಿಂದ ಸುಟ್ಟು ಕರುಕಲಾದ ಬಸ್

Sakrebailu: ತಾಂತ್ರಿಕ ದೋಷದಿಂದ ಸುಟ್ಟು ಕರಕಲಾದ ಬಸ್

ಭದ್ರಾವತಿಯ ರೈಸ್​ಮಿಲ್​ನಲ್ಲಿ ಬಾಯ್ಲರ್ ಸ್ಫೋಟ: ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಪತ್ತೆ

ಭದ್ರಾವತಿಯ ರೈಸ್​ಮಿಲ್​ನಲ್ಲಿ ಬಾಯ್ಲರ್ ಸ್ಫೋಟ: ಕಣ್ಮರೆಯಾಗಿದ್ದ ವ್ಯಕ್ತಿಯ ಶವ ಪತ್ತೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

1-sq

Squash event: ಭಾರತದ ಅನಾಹತ್‌,ಮಲೇಷ್ಯಾದ ಚಂದರನ್‌ ಚಾಂಪಿಯನ್‌

ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ: ರವಿ

CT Ravi: ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.