ಮೆಗ್ಗಾನ್ ಆಸ್ಪತ್ರೆಗೆ ಸೌಲಭ್ಯ ನೀಡಿ: ಶ್ರೀಪಾಲ್
Team Udayavani, Aug 10, 2020, 3:10 PM IST
ಶಿವಮೊಗ್ಗ: ಜಿಲ್ಲಾ ಉಸ್ತುವಾರಿ ಸಚಿವರು, ಸಂಸದರು, ಶಾಸಕರು, ವಿಧಾನಪರಿಷತ್ ಸದಸ್ಯರು ಎಲ್ಲರೂ ಕೊರೊನಾ ವಿರುದ್ಧ ಹೋರಾಡುವುದಾಗಿ ತಿಳಿಸುತ್ತಿದ್ದಾರೆ. ಇವರೆಲ್ಲರೂ ತಲಾ ಒಂದೊಂದು ಆಕ್ಸಿಜನ್ ಯಂತ್ರವನ್ನು ದಾನವಾಗಿ ಮೆಗ್ಗಾನ್ ಆಸ್ಪತ್ರೆಗೆ ನೀಡಬೇಕು ಎಂದು ಸ್ವರಾಜ್ ಇಂಡಿಯಾ ಜಿಲ್ಲಾ ವಕ್ತಾರ ಕೆ.ಪಿ. ಶ್ರೀಪಾಲ್ ಪ್ರತಿಯೊಬ್ಬರಿಗೂ ಪತ್ರ ಬರೆದು ಆಗ್ರಹಿಸಿದ್ದಾರೆ.
ಶಿವಮೊಗ್ಗ ಜಿಲ್ಲೆಯಲ್ಲಿ ಕೋವಿಡ್ ಸೋಂಕು ತೀವ್ರವಾಗಿ ಹರಡುತ್ತಿದೆ. ಈಗಾಗಲೇ 2500 ದಾಟಿದೆ. ಗುಣ ಮುಖರಾಗುತ್ತಿದ್ದರೂ ಕೂಡ ಸೋಂಕಿತರ ಸಂಖ್ಯೆ ಮಾತ್ರ ಹೆಚ್ಚಾಗುತ್ತಿದ್ದು, ಸಾವಿನ ಸಂಖ್ಯೆಯೂ ಕೂಡ 50 ದಾಟಿರುವುದು ಆತಂಕ ಹುಟ್ಟಿಸುತ್ತಿದೆ. ಮೆಗ್ಗಾನ್ ಆಸ್ಪತ್ರೆಯಲ್ಲಿ 40 ವರ್ಷದ ಒಳಗಿನವರೂ ಸಹ ಉಸಿರಾಟದ ತೊಂದರೆಗೆ ಒಳಗಾಗುತ್ತಿದ್ದಾರೆ. ಈಗ ಅಲ್ಲಿ ಇರುವುದು ಕೇವಲ 7 ವೆಂಟಿಲೇಟರ್ ಮತ್ತು 7 ಆಕ್ಸಿಜನ್ ಯಂತ್ರಗಳು ಮಾತ್ರ. ಆದರೆ ರೋಗಿಗಳ ಸಂಖ್ಯೆ ಮಾತ್ರ ಸಾವಿರಕ್ಕೂ ಹೆಚ್ಚಿದೆ. ಹೀಗಾಗಿ ಆಕ್ಸಿಜನ್ ಕೊರತೆಯಿಂದ ಸಾಯುವವರ ಸಂಖ್ಯೆ ಹೆಚ್ಚಾಗುತ್ತಿರುವುದು ದುರಾದೃಷ್ಟಕರ. ಜಿಲ್ಲೆಯ ಪ್ರತಿನಿ ಧಿಗಳು ತಕ್ಷಣವೇ ಈ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದ್ದಾರೆ. ಒಂದು ಆಕ್ಸಿಜನ್ ಯಂತ್ರದ ಬೆಲೆ 2.5 ಲಕ್ಷ ಆಗಬಹುದು. ಇಷ್ಟೊಂದು ಹಣದ ಯಂತ್ರ ನೀಡುವ ಶಕ್ತಿ ನಿಮ್ಮಲ್ಲಿ ಖಂಡಿತಾ ಇದೆ ಎಂದು ಭಾವಿಸುತ್ತೇನೆ.
ಒಂದು ಪಕ್ಷ ಇಲ್ಲದಿದ್ದರೆ ನಿಮ್ಮ ಶಾಸಕರು, ಸಂಸದರ ನಿಧಿಯಿಂದ ನೀಡುವ ಮೂಲಕ ಮಾದರಿಯಾಗಿ. ನಿಮ್ಮ ಈ ಕಾರ್ಯದಿಂದ ಇಡೀ ಜಿಲ್ಲೆಯ ಜನರು ನಿಮ್ಮನ್ನು ಸ್ಮರಿಸುತ್ತಾರೆ. ಅಷ್ಟೇ ಅಲ್ಲ ನೀವು ದೇಶಕ್ಕೆ ಮಾದರಿಯಾಗಿ ನಿಲ್ಲುತ್ತೀರಿ. ಸ್ವರಾಜ್ ಇಂಡಿಯಾ ಮನವಿಯನ್ನು ನೀವು ಈಡೇರಿಸುತ್ತೀರೆಂಬ ನಂಬಿಕೆ ನಮಗಿದೆ ಎಂದು ಪತ್ರದಲ್ಲಿ ಅವರು ತಿಳಿಸಿದ್ದಾರೆ. ಜಿಲ್ಲೆಯಲ್ಲಿ ಕೋವಿಡ್ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು ಇದನ್ನು ಸಮರ್ಥವಾಗಿ ನಿಭಾಯಿಸುವಲ್ಲಿ ಮೆಗ್ಗಾನ್ ಆಸ್ಪತ್ರೆಯಲ್ಲಿ ಸೌಲಭ್ಯಗಳೇ ಇಲ್ಲವಾಗಿದೆ. ಹೀಗಾಗಿ ಕೂಡಲೇ 50 ವೆಂಟಿಲೇಟರ್ ಹಾಗೂ 50 ಆಕ್ಸಿಜನ್ ಸೌಲಭ್ಯ ಒದಗಿಸುವ (ಎಚ್‌ಎಫ್‌ಎನ್‌ಸಿ) ಯಂತ್ರಗಳ ವ್ಯವಸ್ಥೆ ಕಲ್ಪಿಸಲು ರಾಜ್ಯ ಸರ್ಕಾರ ಮುಂದಾಗಬೇಕು ಎಂದು ಕೆ.ಪಿ. ಶ್ರೀಪಾಲ್ ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CT Ravi Arrest; ಧೂರ್ತ ಸರ್ಕಾರ ನೀಚತನದ ಕೆಲಸ ಮಾಡಿದೆ: ಆರಗ ಜ್ಞಾನೇಂದ್ರ
Shimoga; ಇದು ಸಿ.ಟಿ.ರವಿ ಅವರನ್ನು ಸದೆಬಡಿಯುವ ಪ್ರಯತ್ನ;ಶಾಸಕ ಚನ್ನಬಸಪ್ಪ
Sakrebailu: ತಾಂತ್ರಿಕ ದೋಷದಿಂದ ಸುಟ್ಟು ಕರಕಲಾದ ಬಸ್
ಭದ್ರಾವತಿಯ ರೈಸ್ಮಿಲ್ನಲ್ಲಿ ಬಾಯ್ಲರ್ ಸ್ಫೋಟ: ಕಣ್ಮರೆಯಾಗಿದ್ದ ವ್ಯಕ್ತಿಯ ಶವ ಪತ್ತೆ
Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್‌ಮಿಲ್ ಕುಸಿತ:7 ಮಂದಿಗೆ ಗಾಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Hysteroscopy: ಸಂತಾನಹೀನತೆಯ ಪತ್ತೆ ಮತ್ತು ಚಿಕಿತ್ಸೆಗೆ ಒಂದು ಅತ್ಯವಶ್ಯಕ ಕಾರ್ಯವಿಧಾನ
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ
Puttur: ತೆಂಕಿಲದಲ್ಲಿ ರಿಕ್ಷಾ ಅಪಘಾತ: ಚಾಲಕ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.