ಆಸ್ಪತ್ರೆಗಳಿಗೆ ಆಕ್ಸಿಜನ್ ಪೂರೈಸಲು ನೆರವು
Team Udayavani, Aug 23, 2020, 3:00 PM IST
ಶಿವಮೊಗ್ಗ/ ಭದ್ರಾವತಿ: ಭದ್ರಾವತಿಯ ವಿಎಸ್‌ಐಎಲ್ ಆಕ್ಸಿಜನ್ ತಯಾರಕಾ ಘಟಕದಿಂದ ಶಿವಮೊಗ್ಗದ ಖಾಸಗಿ ಆಸ್ಪತ್ರೆಗಳಿಗೆ ಆಕ್ಸಿಜನ್ ಪೂರೈಸಲು ಎಲ್ಲಾ ರೀತಿಯ ನೆರವು ಒದಗಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಅವರು ತಿಳಿಸಿದರು.
ಶುಕ್ರವಾರ ವಿಎಸ್‌ಐಎಲ್ ಆಕ್ಸಿಜನ್ ತಯಾರಕಾ ಘಟಕಕ್ಕೆ ಭೇಟಿ ನೀಡಿ ಈ ಕುರಿತು ಹಿರಿಯ ಅಧಿಕಾರಿಗಳೊಂದಿಗೆ ಅವರು ಸಮಾಲೋಚನಾ ಸಭೆ ನಡೆಸಿದರು. ಪ್ರಸ್ತುತ ವಿಎಸ್‌ಐಎಲ್‌ನಲ್ಲಿ ಸ್ಥಳೀಯ ಬಳಕೆಗಾಗಿ ಆಕ್ಸಿಜನ್ ಉತ್ಪಾದಿಸಲಾಗುತ್ತಿದೆ. ವೈದ್ಯಕೀಯ ಬಳಕೆಗೆ ಸೂಕ್ತವಾದ ಆಕ್ಸಿಜನ್ ಇಲ್ಲಿ ಉತ್ಪಾದಿಸಲಾಗುತ್ತಿದ್ದು, ಶಿವಮೊಗ್ಗ ನಗರದ ಆಸ್ಪತ್ರೆಗಳಿಗೆ ಇಲ್ಲಿಂದ ಆಕ್ಸಿಜನ್ ಪೂರೈಕೆ ಮಾಡಲು ಸರ್ಕಾರದಿಂದ ಪರವಾನಗಿ ಒದಗಿಸಲಾಗುವುದು. ಶಿವಮೊಗ್ಗ ನಗರದ ಆಸ್ಪತ್ರೆಗಳ ಶೇ.30ರಷ್ಟು ಆಕ್ಸಿಜನ್ ಬೇಡಿಕೆಯನ್ನು ಈ ಒಂದೇ ಘಟಕದಿಂದ ಪೂರೈಕೆ ಮಾಡಲು ಸಾಧ್ಯವಿದೆ ಎಂದು ಅವರು ಹೇಳಿದರು.
ಜಿಲ್ಲೆಯ ಆಸ್ಪತ್ರೆಗಳಿಗೆ ಅಗತ್ಯವಿರುವ ಆಕ್ಸಿಜನ್‌ಲಭ್ಯವಿರುವ ಕಡೆಗಳಿಂದ ತರಿಸಲು ಕ್ರಮ ಕೈಗೊಳ್ಳಲಾಗಿದೆ. ಆಕ್ಸಿಜನ್ ಸಾಗಾಟ ಮಾಡಲು ಟ್ಯಾಂಕರ್‌ಗಳ ಕೊರತೆ ಕಂಡು ಬಂದಿದ್ದು, ಉನ್ನತ ಮಟ್ಟದಲ್ಲಿ ಸಮಾಲೋಚನೆ ನಡೆಸಿ ಇದಕ್ಕೆ ಪರಿಹಾರ ಕಂಡುಕೊಳ್ಳಲಾಗುವುದು. ವಿಎಸ್ ಐಎಲ್ ಘಟಕದಲ್ಲಿ 300 ಗ್ಯಾಸ್ ಸಿಲಿಂಡರ್ ಗಳು ಸಹ ಲಭ್ಯವಿದ್ದು, ಇದನ್ನು ಸಹ ಜಿಲ್ಲೆಯಉಪಯೋಗಕ್ಕಾಗಿ ಬಳಸಿಕೊಳ್ಳಲಾಗುವುದು. ಇಲ್ಲಿ ಆಕ್ಸಿಜನ್ ಆನಿಲ ರೂಪದಲ್ಲಿ ಉತ್ಪಾದನೆ ಮಾಡಲಾಗುತ್ತಿದ್ದು, ಅದನ್ನು ದ್ರವ ರೂಪಕ್ಕೆ ರೂಪಾಂತರ ಮಾಡುವ ಸಾಧ್ಯತೆ ಬಗ್ಗೆ ಪರಿಶೀಲನೆ ನಡೆಸಲು ಸೂಚಿಸಿದರು.
ಯಾವುದೇ ಕಾರಣಕ್ಕೂ ಶಿವಮೊಗ್ಗ ಜಿಲ್ಲೆಯಲ್ಲಿ ಯಾವುದೇ ಕೊರೊನಾ ಪಾಸಿಟಿವ್ ವ್ಯಕ್ತಿಗಳಿಗೆ ಆಕ್ಸಿಜನ್ ಪೂರೈಕೆಯಲ್ಲಿ ಕೊರತೆಯಾಗದಂತೆ ವ್ಯವಸ್ಥೆ ಮಾಡಲಾಗುತ್ತಿದೆ. ಇದುವರೆಗೆ ಜಿಲ್ಲೆಯಲ್ಲಿ ಆಕ್ಸಿಜನ್ ಕೊರತೆ ಕುರಿತು ಯಾವುದೇ ದೂರು ಬಂದಿಲ್ಲ. ಆದರೆ ಕೋವಿಡ್ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗರೂಕತಾ ಕ್ರಮವಾಗಿ ಎಲ್ಲಾ ಮೂಲಗಳಿಂದ ಆಕ್ಸಿಜನ್ ಸಂಗ್ರಹಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಹೇಳಿದರು.
ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಮಾತನಾಡಿ, ಮೆಗ್ಗಾನ್ ಆವರಣದಲ್ಲಿ 12ಕೆಎಲ್ ಸಾಮರ್ಥ್ಯದ ಆಕ್ಸಿಜನ್ ಸಂಗ್ರಹಣಾ ಘಟಕವನ್ನು ಅಳವಡಿಸಲಾಗುತ್ತಿದ್ದು ಕೆಲವೇ ದಿನಗಳಲ್ಲಿ ಈ ಕಾರ್ಯ ಪೂರ್ಣಗೊಳ್ಳಲಿದೆ. ಖಾಸಗಿ ಆಕ್ಸಿಜನ್ ಸಾಗಾಟದಾರರ ನೆರವಿನಿಂದ ಪ್ರಸ್ತುತ ಬಳ್ಳಾರಿಯಿಂದ ವೈದ್ಯಕೀಯ ಸೇವೆಗೆ ಅಗತ್ಯವಾದ ಆಕ್ಸಿಜನ್ ತರಿಸಲಾಗುತ್ತಿದೆ. ಈಗ ಅಗತ್ಯಕ್ಕೆ ತಕ್ಕ ಆಕ್ಸಿಜನ್ ಜಿಲ್ಲೆಗೆ ಲಭ್ಯವಿದ್ದು, ಮುಂದಿನ ದಿನಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಆಕ್ಸಿಜನ್ ಅಗತ್ಯ ಬೀಳುವ ಸಾಧ್ಯತೆ ಹಿನ್ನೆಲೆಯಲ್ಲಿ ವಿಎಸ್‌ಐಎಲ್ ಘಟಕದಿಂದ ಆಕ್ಸಿಜನ್ ಪಡೆಯಲು ಉದ್ದೇಶಿಸಲಾಗಿದೆ ಎಂದು ಹೇಳಿದರು.
ಜಿಪಂ ಸದಸ್ಯ ಕಾಂತೇಶ್, ವಿಎಸ್‌ಐಎಲ್ ಘಟಕದ ಹಿರಿಯ ಅದàಕಾರಿಗಳು, ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಧರ್ಮಪ್ರಸಾದ್, ತಾಲೂಕು ಅಧ್ಯಕ್ಷ ಪ್ರಭಾಕರ್, ಮುಖಂಡರಾದ ಆನಂದಕುಮಾರ್, ಮುಂಗೋಟೆ ರುದ್ರೇಶ್, ಗಣೇಶ್, ಬಿ.ಕೆ.ಶ್ರೀನಾಥ್ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thirthahalli: ತೀರ್ಥಹಳ್ಳಿ ವ್ಯವಸ್ಥಿತವಾಗಿ ಎರಡನೇ ಭಟ್ಕಳ ಆಗುತ್ತಿದೆ.. ಪ್ರಮೋದ್ ಮುತಾಲಿಕ್
Anandapura: ನಿಂತಿದ್ದ ಕಾರಿಗೆ ಇನ್ನೊಂದು ಕಾರು ಡಿಕ್ಕಿ ಹೊಡೆದು ಕಾರು ಪಲ್ಟಿ
Sagara: ವಿದ್ಯುತ್ ಟ್ರಾನ್ಸ್ ಫಾರ್ಮರ್‌ಗೆ ನೇಣು ಬಿಗಿದು ಯುವಕ ಆತ್ಮಹತ್ಯೆ
Sagara: ಮಿಡಿ ಮಾವು, ವಿಶ್ವವಿದ್ಯಾಲಯದ ನಡೆದಾಡುವ ವಿಶ್ವಕೋಶ ಬಿ.ವಿ.ಸುಬ್ಬರಾವ್ ಇನ್ನಿಲ್ಲ
KFD Vaccine: ಮುಂಬರುವ ನವೆಂಬರ್‌ನಲ್ಲಿ ಮಂಗನ ಕಾಯಿಲೆಗೆ ಲಸಿಕೆ ಸಿದ್ಧ: ದಿನೇಶ್ ಗುಂಡೂರಾವ್
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.