ಸಾಗರ: ಮಳೆಗೆ ಬೆದರಿ ಶಾಲೆಯಷ್ಟೇ ಅಲ್ಲ, ಹಾಸ್ಟೆಲ್‌ಗೂ ರಜೆ!
Team Udayavani, Jul 9, 2022, 11:44 AM IST
ಸಾಗರ: ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆಗೆ ಸತತ ಮೂರು ದಿನದಿಂದ ಪ್ರಾಥಮಿಕ ಶಾಲೆ, ಪ್ರೌಢಶಾಲೆ. ಕಾಲೇಜುಗಳಿಗೆ ರಜೆ ನೀಡಲಾಗುತ್ತಿದ್ದರೂ, ತಾಲೂಕಿನ ಉಳ್ಳೂರಿನ ವಿದ್ಯಾರ್ಥಿನಿಯರ ಹಾಸ್ಟೆಲ್‌ಗೂ ಬಲವಂತದ ರಜೆ ಕೊಡುವ ಪರಿಸ್ಥಿತಿ ನಿರ್ಮಾಣವಾಗಿದೆ!
ಉಳ್ಳೂರಿನ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್‌ಪೂರ್ವ ಬಾಲಕಿಯರ ವಿದ್ಯಾರ್ಥಿ ನಿಲಯ ದೊಡ್ಡ ಪ್ರಮಾಣದಲ್ಲಿ ಸೋರುತ್ತಿದ್ದು, ಇದರೊಳಗೆ ಮಕ್ಕಳು ಉಳಿಯಲಾಗದ ಸ್ಥಿತಿ ನಿರ್ಮಾಣವಾಗಿದೆ. ನೀರು ಸೋರುವುದನ್ನು ಹಿಡಿಯಲು ಸ್ಟೀಲ್ ಪಾತ್ರೆ, ಪ್ಲಾಸ್ಟಿಕ್ ಟಬ್‌ಗಳನ್ನು ಇಡಲಾಗಿದೆ.
ಈ ಮಾಹಿತಿಯನ್ನು ಪಡೆದು ಶುಕ್ರವಾರ ಸ್ಥಳಕ್ಕೆ ಭೇಟಿ ನೀಡಿದ ಮಾಜಿ ಶಾಸಕ ಗೋಪಾಲಕೃಷ್ಣ ಬೇಳೂರು ಮಾತನಾಡಿ, ಇತ್ತೀಚೆಗೆ ನಿರ್ಮಾಣವಾದ ಈ ಹಾಸ್ಟೆಲ್‌ನ ಕಳಪೆ ಕಾಮಗಾರಿಯ ಕಾರಣದಿಂದ ಎಲ್ಲೆಡೆ ನೀರು ಸೋರುತ್ತಿದೆ. ವಿದ್ಯಾರ್ಥಿನಿಯರು ಮಲಗುವ ಸ್ಥಳ, ಅಡುಗೆ ಮನೆಯಲ್ಲಿಯೂ ದೊಡ್ಡ ಪ್ರಮಾಣದ ಸೋರಿಕೆ ಇದೆ. ಇಂತಹ ಸಂದರ್ಭದಲ್ಲಿ ಸೋರಿಕೆಯನ್ನು ತಡೆಯಲು ತಕ್ಷಣದ ಕ್ರಮಕ್ಕೆ ಆಡಳಿತ, ಶಾಸಕರು ಮುಂದಾಗಬೇಕಿತ್ತು. ಅದರ ಬದಲು ಮಕ್ಕಳನ್ನೇ ಮನೆಗೆ ಕಳುಹಿಸಲಾಗಿದೆ ಎಂದು ಆರೋಪಿಸಿದರು.
ಮಕ್ಕಳ ಹಾಸಿಗೆಗಳೆಲ್ಲ ನೀರಿನಿಂದ ಥಂಡಿಯಾಗಿವೆ. ಇಲ್ಲಿನ ಮಂಚಗಳನ್ನು ಕಬ್ಬಿಣದಿಂದ ನಿರ್ಮಿಸಲಾಗಿದ್ದು, ಕಟ್ಟಡದಲ್ಲಿನ ಆರ್ದತೆಯಿಂದ ವಿದ್ಯುತ್ ಶಾಕ್ ಸಂಭವಿಸುವ ಎಲ್ಲ ಸಾಧ್ಯತೆಗಳಿವೆ. ಈಗಾಗಲೇ ಹಲವು ಶಾಲೆಗಳು ಬೀಳುವ ಪರಿಸ್ಥಿತಿ ಇದೆ. ಇವುಗಳನ್ನು ಗಮನಿಸದಿರುವ ಸರ್ಕಾರ ಸತ್ತಿದೆಯೇ ಎಂಬ ಅನುಮಾನ ಕಾಡುತ್ತದೆ ಎಂದು ಬೇಳೂರು ಹರಿಹಾಯ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ಭೀಕರ ಅಪಘಾತ… ರಿಕ್ಷಾ ಚಾಲಕ ಸೇರಿ ಇಬ್ಬರು ಮೃತ್ಯು, ಮೂವರಿಗೆ ಗಾಯ
Anandapura: ಬಟ್ಟೆ ತೊಳೆಯಲು ಹೋದ ಮಹಿಳೆ ಕೆರೆಗೆ ಬಿದ್ದು ಮೃತ್ಯು
Hosanagara: ಬಿಸಿ ಟೀ ಮೈ ಮೇಲೆ ಬಿದ್ದು ಗಂಭೀರ ಗಾಯಗೊಂಡಿದ್ದ ಎರಡು ವರ್ಷದ ಮಗು ಸಾವು
Anandapura: ಚಾಲಕನ ನಿಯಂತ್ರಣ ತಪ್ಪಿದ ಬಸ್; ಹಲವರಿಗೆ ಗಾಯ
Hosanagara: ಹಾಡುಹಗಲೇ ಮನೆಯ ಬೀಗ ಮುರಿದು ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವು
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.