Hosanagara; ಕೃಷಿ ಜಮೀನಿಗೆ ನುಗ್ಗಿದ ಮಳೆ ನೀರು: ಕಂಗಾಲಾದ ರೈತ
ನಷ್ಟ ತಪ್ಪಿಸಲು ತಡೆಗೋಡೆ ನಿರ್ಮಾಣಕ್ಕೆ ಒತ್ತಾಯ
Team Udayavani, Jul 25, 2024, 4:34 PM IST
ಹೊಸನಗರ: ಇತ್ತೀಚೆಗೆ ತಾಲೂಕಿನಲ್ಲಿ ಸುರಿಯುತ್ತಿರುವ ಮಳೆಗೆ ಅನೇಕ ಹಾನಿ ಸಂಭವಿಸಿದೆ. ಪಟ್ಟಣದ ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕಾ ಅಭಿವೃದ್ಧಿ ನಿಗಮದ ಲೇಔಟ್ ಗೆ ಅಂಟಿಕೊಂಡಿರುವ ಧರೆ ಕುಸಿಯುವ ಭೀತಿ ಎದುರಾಗಿದ್ದು, ಮಳೆ ಹೀಗೆ ಮುಂದುವರೆದಲ್ಲಿ ಹತ್ತಾರು ಎಕರೆ ಅಡಿಕೆ, ಭತ್ತದ ಗದ್ದೆಗಳಿಗೆ ವ್ಯಾಪಕ ಹಾನಿ ಉಂಟಾಗುವ ಆತಂಕ ರೈತರನ್ನು ಬೆಂಬಿಡದೆ ಕಾಡುತ್ತಿದೆ.
ಪಟ್ಟಣದ ಮಾರಿಗುಡ್ಡ, ಕೈಗಾರಿಕಾ ವಲಯ, ಎಪಿಎಂಸಿ, ಕೋರ್ಟ್ ಹಿಂಭಾಗ ಸೇರಿದಂತೆ ಹಲವೆಡೆ ಸುರಿದ ಮಳೆನೀರು ಮಾವಿನ ಕೊಪ್ಪ ಗ್ರಾಮದ ರತ್ನಾಕರ ಬಿನ್ ಹಿರಿಯಣ್ಣಯ್ಯ ಎಂಬವರ (ಸರ್ವೆ ನಂಬರ್ 18) ಕೃಷಿ ಜಮೀನಿನಲ್ಲಿರುವ ಹಳ್ಳದ ಮೂಲಕ ಹಾದು ಹೋಗುತ್ತಿದೆ. ಆದರೆ ಭಾರೀ ಮಳೆಯ ಹಿನ್ನಲೆ ನೀರು ಹೆಚ್ಚಾಗಿ ಹರಿದು ಬರುತ್ತಿರುವ ಕಾರಣ, ಜಮೀನಿನ ದಂಡೆ ಒಡೆದು ನೀರು ಕೃಷಿಭೂಮಿಗೆ ನುಗ್ಗಿ ಹಾನಿ ಉಂಟಾಗಿದೆ.
ಕೆ ಎಸ್ ಎಸ್ ಎಸ್ ಡಿ ಸಿ ಎಲ್ ಅವರ ಲೇಔಟ್ ನಲ್ಲಿ ಮಳೆನೀರು ಸರಾಗವಾಗಿ ಹರಿಯಲು ಸರಿಯಾದ ಚರಂಡಿ ವ್ಯವಸ್ಥೆ ಇಲ್ಲದಿರುವುದೇ ಈ ಎಲ್ಲಾ ಪ್ರಮಾದಗಳಿಗೆ ಕಾರಣವಾಗಿದೆ ಎಂಬುದು ಕೃಷಿಕರ ದೂರಾಗಿದೆ. ಸಂಭವನೀಯ ಹೆಚ್ಚಿನ ಅವಘಡ ತಪ್ಪಿಸಲು ಸಂಬಂಧ ಪಟ್ಟ ಇಲಾಖೆ ಅಧಿಕಾರಿ ವರ್ಗ ಸ್ಥಳಕ್ಕೆ ಭೇಟಿ ಸೂಕ್ತ ಕ್ರಮಕ್ಕೆ ಮುಂದಾಗುವಂತೆ ರೈತ ರತ್ನಾಕರ್ ತಾಲೂಕು ಆಡಳಿತವನ್ನು ಒತ್ತಾಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CT Ravi Arrest; ಧೂರ್ತ ಸರ್ಕಾರ ನೀಚತನದ ಕೆಲಸ ಮಾಡಿದೆ: ಆರಗ ಜ್ಞಾನೇಂದ್ರ
Shimoga; ಇದು ಸಿ.ಟಿ.ರವಿ ಅವರನ್ನು ಸದೆಬಡಿಯುವ ಪ್ರಯತ್ನ;ಶಾಸಕ ಚನ್ನಬಸಪ್ಪ
Sakrebailu: ತಾಂತ್ರಿಕ ದೋಷದಿಂದ ಸುಟ್ಟು ಕರಕಲಾದ ಬಸ್
ಭದ್ರಾವತಿಯ ರೈಸ್ಮಿಲ್ನಲ್ಲಿ ಬಾಯ್ಲರ್ ಸ್ಫೋಟ: ಕಣ್ಮರೆಯಾಗಿದ್ದ ವ್ಯಕ್ತಿಯ ಶವ ಪತ್ತೆ
Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್ಮಿಲ್ ಕುಸಿತ:7 ಮಂದಿಗೆ ಗಾಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್ ಸೂರ್ಯವಂಶಿ
BBMP Notice: ವಿರಾಟ್ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್ಗೆ ಬಿಬಿಎಂಪಿ ನೋಟಿಸ್
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್ಸಿ ಸಿ.ಟಿ.ರವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.