ರಾಜೀವ್ ಗಾಂಧಿ ಯುವ ಸಮೂಹಕ್ಕೆ ಸ್ಫೂರ್ತಿ
Team Udayavani, May 22, 2021, 5:59 PM IST
ಶಿವಮೊಗ್ಗ: ಯುವ ಸಮೂಹಕ್ಕೆ ಸ್ಫೂರ್ತಿ ತುಂಬಿದವರು ಮಾಜಿ ಪ್ರಧಾನಿ ರಾಜೀವ್ ಗಾಂಧಿ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್.ಎಸ್. ಸುಂದರೇಶ್ ಹೇಳಿದರು.
ಶುಕ್ರವಾರ ಕಾಂಗ್ರೆಸ್ ಕಚೇರಿಯಲ್ಲಿ ಆಯೋಜಿಸಲಾಗಿದ್ದ ರಾಜೀವ್ ಗಾಂಧಿ ಪುಣ್ಯ ಸ್ಮರಣೆ ಕಾರ್ಯಕ್ರಮದಲ್ಲಿ ದಿ| ರಾಜೀವ್ ಗಾಂಧಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಅವರು ಮಾತನಾಡಿದರು.
ದೇಶ ಕಂಡ ಶ್ರೇಷ್ಟ ನಾಯಕರಲ್ಲಿ ರಾಜೀವ್ ಗಾಂಧಿ ಕೂಡ ಒಬ್ಬರು.ದೇಶದಲ್ಲಿ ಅಭಿವೃದ್ಧಿಯ ಹರಿಕಾರ ಎಂದೇಅವರು ಪ್ರಸಿದ್ಧಿಯಾಗಿದ್ದಾರೆ. ಬಹಳ ಮುಖ್ಯವಾಗಿ ಯುವ ಸಮೂಹಕ್ಕೆ ಅವರುನೀಡಿದ ಕೊಡುಗೆ ಅಪಾರವಾಗಿದೆ. ತಮ್ಮಚಿಕ್ಕ ವಯಸ್ಸಿನಲ್ಲಿಯೇ ಅಪಾರ ಜ್ಞಾನವನ್ನುಪಡೆದ ಅವರು ಪ್ರಧಾನಿಯಾದ ನಂತರದೇಶವನ್ನು ಜ್ಞಾನ ಮತ್ತು ತಂತ್ರಜ್ಞಾನದಮೂಲಕ ಸದೃಢವಾಗಿ ಬೆಳೆಸಿದವರು. ಅವರ ಸಾಕ್ಷರತಾ ಆಂದೋಲನ, ಪಂಚಾಯತ್ ರಾಜ್ ವ್ಯವಸ್ಥೆ, ಪಕ್ಷಾಂತರತಿದ್ದುಪಡಿ ಕಾಯ್ದೆ, ರೋಜ್‌ಗಾರ್‌ಯೋಜನೆ ಮುಂತಾದವು ಇಂದಿಗೂ ವರ್ತಮಾನ ಸ್ಥಿತಿಯಲ್ಲಿವೆ ಎಂದರು.
ಕೋವಿಡ್ ಹಿನ್ನೆಲೆಯಲ್ಲಿ ಅತ್ಯಂತಸರಳವಾಗಿ ಅವರ ಪುಣ್ಯಸ್ಮರಣೆಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಅವರ ಪುಣ್ಯಸ್ಮರಣೆಯ ಅಂಗವಾಗಿಜಿಲ್ಲಾ ಕಾಂಗ್ರೆಸ್ ವತಿಯಿಂದ ಅತಿ ಹೆಚ್ಚು ಕೋವಿಡ್ ಸೋಂಕಿತರ ಮನೆಗಳಿಗೆ ಊಟವನ್ನು ನೀಡಲಾಗುತ್ತಿದೆ. ಜಿಲ್ಲಾಕಾಂಗ್ರೆಸ್ ಸಮಿತಿ ವತಿಯಿಂದ ಕಳೆದ 19 ದಿನಗಳಿಂದ ನಿರಂತರವಾಗಿ ಮನೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕೊರೊನಾಸೋಂಕಿತರಿಗೆ ಹಾಗೂ ವಿವಿಧೆಡೆ ಇರುವ ಅನಾಥರಿಗೆ ಊಟ, ನೀರಿನ ವ್ಯವಸ್ಥೆಮಾಡುತ್ತಾ ಬಂದಿದ್ದೇವೆ ಎಂದರು.
ಪ್ರಮುಖರಾದ ಚೇತನ್, ಮಧುಸೂದನ್, ಮಹಮ್ಮದ್‌ನಿಹಾಲ್, ಪ್ರಮೋದ್, ಮಂಜುನಾಥ್,ಪುಷ್ಪ, ಮುಜೀದ್, ಶಶಿ, ಜಫರುಲ್ಲಾ,ಚನ್ನವೀರಪ್ಪ, ಸಂತೋಷ್, ವಿನೋದ್ದ, ಚಂದ್ರಶೇಖರ್, ಸತೀಶ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga: ಮಲೆನಾಡಿನಲ್ಲಿ ಮುಂದುವರಿದ ಕಾಡಾನೆ ಕಾಟ; ಇಲಾಖೆ ವಿರುದ್ದ ರೈತರ ಆಕ್ರೋಶ
B. Y. Raghavendra: 10 ವರ್ಷದಲ್ಲಿ ವಕ್ಫ್ ಆಸ್ತಿ ಶೇ.135 ಹೆಚ್ಚಳ
Thirthahalli: ಪಾದರಕ್ಷೆ, ಮೊಬೈಲ್ ನದಿ ದಡದಲ್ಲಿಟ್ಟು ವ್ಯಕ್ತಿ ನಾಪತ್ತೆ ಪ್ರಕರಣ; ಶವ ಪತ್ತೆ
ನಕ್ಸಲರನ್ನು ಮುಖ್ಯವಾಹಿನಿಗೆ ಕರೆತರುವ ಯತ್ನಕ್ಕೆ ಹಿನ್ನಡೆ?
Naxal: ವಿಕ್ರಂ ವಿರುದ್ಧ ಆಗುಂಬೆ, ತೀರ್ಥಹಳ್ಳಿ, ಚಿಕ್ಕಮಗಳೂರು ಠಾಣೆಗಳಲ್ಲಿ ಹಲವು ಪ್ರಕರಣ
MUST WATCH
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಹೊಸ ಸೇರ್ಪಡೆ
Thailand ನಲ್ಲಿ ಜೇನಿನ ಆಯುರ್ವೇದ ಔಷಧ ಕಥೆ ಹೇಳಿದ ಅಪ್ಪ,ಮಗಳು
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Belagavi: ಪೂರ್ಣಾವಧಿ ಅಧಿವೇಶನದಲ್ಲಿ ಸಮಸ್ಯೆಗಳ ಪೂರ್ಣ ಚರ್ಚೆಯಾಗಲಿ: ಡಾ.ಪ್ರಭಾಕರ್ ಕೋರೆ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 38 ಬ*ಲಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.