Hosanagara: ಭೂತನೋಣಿ ಬಳಿ ಧರೆ ಕುಸಿತ… 3 ಗಂಟೆ ರಾಣೇಬೆನ್ನೂರು-ಬೈಂದೂರು ಹೆದ್ದಾರಿ ಬಂದ್
Team Udayavani, Jul 3, 2024, 8:21 PM IST
ಹೊಸನಗರ: ಬುಧವಾರ ಸುರಿದ ಮಳೆಗೆ ತಾಲೂಕಿನ ನಗರ ಸಮಗೋಡು ಮಾರ್ಗ ಮಧ್ಯೆ ಭೂತನೋಣಿಯಲ್ಲಿ ಧರೆ ಕುಸಿದು 3 ಗಂಟೆ ಕಾಲ ಸಂಚಾರ ಬಂದ್ ಆಗಿತ್ತು.
ಭಾರೀ ಪ್ರಮಾಣದ ಧರೆ ಕುಸಿತ ಮತ್ತು ಮರಗಳು ರಸ್ತೆಗೆ ಅಡ್ಡಲಾಗಿ ಬಿದ್ದು ರಾಣಿಬೆನ್ನೂರು – ಬೈಂದೂರು ರಾಷ್ಟ್ರೀಯ ಹೆದ್ದಾರಿ-766c ಯಲ್ಲಿ ವಾಹನ ಸಂಚಾರ ಸ್ತಬ್ದಗೊಂಡಿತ್ತು.
ಮಾಹಿತಿ ತಿಳಿಯುತ್ತಿದ್ದಂತೆ ನಗರ ಪೊಲೀಸರು ದೌಡಾಯಿಸಿ ಜೆಸಿಬಿ ತರಿಸಿ ಕಾಮಗಾರಿ ಆರಂಭಿಸಲಾಯ್ತು. ಸ್ಥಳೀಯರ ಸಹಕಾರದಿಂದ ಸತತ ಕಾರ್ಯಾಚರಣೆ ಬಳಿಕ ಸಂಜೆ 4 ಗಂಟೆಯಿಂದ ಬಂದ್ ಹೆದ್ದಾರಿ ಮಾರ್ಗವನ್ನು 7 ಗಂಟೆಗೆ ಮುಕ್ತಗೊಳಿಸಲಾಯಿತು.
ವಾಹನಗಳ ಪರದಾಟ: ಹೆದ್ದಾರಿ ಸಂಚಾರ ಸ್ಥಗಿತಗೊಳಿಸುತ್ತಿದ್ದಂತೆ ಬಸ್ಸು, ಟೂರಿಸ್ಟ್ ಕಾರು, ಬಸ್ಸುಗಳಲ್ಲಿ ಸಂಚರಿಸುತ್ತಿದ್ದ ಪ್ರಯಾಣಿಕರು ಪರದಾಡುವಂತಾಯಿತು. ಕಾರ್ಯಾಚರಣೆ ವೇಳೆ ಮಳೆ ವ್ಯಾಪಕವಾಗಿ ಸುರಿಯುತ್ತಿದ್ದು ಪ್ರಯಾಣಿಕರು ತಮ್ಮ ವಾಹನಗಳಲ್ಲೇ ಜಾಮ್ ಆಗಿದ್ದು ಗಮನಸೆಳೆಯಿತು. ಅಲ್ಲದೇ ಶಾಲಾ ಕಾಲೇಜುಗಳಿಂದ ಮನೆಗೆ ತೆರಳುವ ಸಮಯವಾಗಿದ್ದರಿಂದ ಬಪ್ಪನಮನೆ, ಮತ್ತಿಮನೆ, ಸಂಪೇಕಟ್ಟೆ, ಬೈಸೆಗೆ ತೆರಳುತ್ತಿದ್ದ ವಿದ್ಯಾರ್ಥಿಗಳು ಪರದಾಡುವಂತಾಯ್ತು. 3 ಗಂಟೆ ಟ್ರಾಫಿಕ್ ಜಾಮ್ ಆದ ಕಾರಣ ಹೆದ್ದಾರಿಯ ಎರಡು ಕಡೆ ನೂರಾರು ವಾಹನಗಳು ಸಾಲುಗಟ್ಟಿ ನಿಂತಿದ್ದವು.
ವ್ಯಾಪಕ ಮಳೆ:
ಮಂಗಳವಾರ ರಾತ್ರಿಯಿಂದ ಹೊಸನಗರ ತಾಲೂಕು, ಅದರಲ್ಲೂ ನಗರ ಹೋಬಳಿ ವ್ಯಾಪ್ತಿಯಲ್ಲಿ ಬಾರೀ ಮಳೆಯಾಗುತ್ತಿದ್ದು ಜನಜೀವನ ಅಸ್ತವ್ಯಸ್ತವಾಗಿದೆ. ಹಳ್ಳ ತೊರೆಗಳು ತುಂಬಿಹರಿಯುತ್ತಿದ್ದು ಶರಾವತಿ ನದಿಗೆ ಯತೇಚ್ಚ ನೀರು ಹರಿದು ಹೋಗುತ್ತಿದೆ.
ರಜೆ ನೀಡುವುದು ಶಾಲೆಗಳ ಜವಾಬ್ದಾರಿ:
ವಾರದಿಂದ ಬಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ರಜೆ ನೀಡುವ ಸಂಬಂಧ ಆಯಾಯ ಶಾಲೆ ಮತ್ತು ಶಾಲಾಭಿವೃದ್ಧಿ ಸಮಿತಿಗಳಿಗೆ ಜವಾಬ್ದಾರಿ ನೀಡಲಾಗಿದೆ ಎಂದು ಬಿಇಒ ಕೃಷ್ಣಮೂರ್ತಿ ತಿಳಿಸಿದ್ದಾರೆ.
ಇದನ್ನೂ ಓದಿ: Mangaluru: ನಿರ್ಮಾಣ ಹಂತದ ಕಟ್ಟಡದ ಬಳಿ ಭೂಕುಸಿತ… ಮಣ್ಣಿನಡಿ ಸಿಲುಕಿದ್ದ ಕಾರ್ಮಿಕ ಮೃತ್ಯು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!
T20 Asia Cup: ಬಾಂಗ್ಲಾ ವಿರುದ್ದ ಅಂಡರ್ 19 ವನಿತಾ ಏಷ್ಯಾಕಪ್ ಚಾಂಪಿಯನ್ ಆದ ಭಾರತ
BBK11: ವೀಕ್ಷಕರಿಗೆ ಸರ್ಪ್ರೈಸ್; ಮತ್ತೆ ಬಿಗ್ ಬಾಸ್‌ಗೆ ಗೋಲ್ಡ್ ಸುರೇಶ್
BGT 2024: ಮೆಲ್ಬೋರ್ನ್ ಪಂದ್ಯಕ್ಕೂ ಟೀಂ ಇಂಡಿಯಾಗೆ ಗಾಯಾಳುಗಳ ಸಮಸ್ಯೆ
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.