ಜಮೀನಿಗೆ ಹಕ್ಕು ಪತ್ರ ನೀಡಲು ಒತ್ತಾಯ
Team Udayavani, Oct 9, 2020, 7:39 PM IST
ಸಾಗರ: ತಾಲೂಕಿನ ಕಸಬಾ ಹೋಬಳಿ ಪಡವಗೋಡು ಗ್ರಾಪಂ ವ್ಯಾಪ್ತಿಯ ಹಳವಗೋಡು ಗ್ರಾಮದ ಶರಾವತಿ ಮುಳುಗಡೆ ಸಂತ್ರಸ್ತರು ಮತ್ತು ತಾಲೂಕು ಯುವ ಒಕ್ಕೂಟದ ವತಿಯಿಂದ ಗುರುವಾರ ತಾವು ಸಾಗುವಳಿ ಮಾಡುತ್ತಿರುವ ಜಮೀನಿಗೆ ಹಕ್ಕುಪತ್ರನೀಡುವಂತೆ ಒತ್ತಾಯಿಸಿ ಶಿವಮೊಗ್ಗದಲ್ಲಿಜಿಲ್ಲಾ ಧಿಕಾರಿಗಳು ಹಾಗೂ ಶಿವಮೊಗ್ಗ ವೃತ್ತ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ತಾಲೂಕಿನ ಭಾರಂಗಿ ಹೋಬಳಿ ಹೆಬ್ಬೂರು ಮತ್ತು ಮಲವಳ್ಳಿ, ಬನಗೋಡಿ ಹಾಗೂ ಇಂಡುವಳ್ಳಿ ಗ್ರಾಮದಲ್ಲಿ ನಾವು ವಾಸವಾಗಿದ್ದೆವು.ನಮ್ಮ ಜಮೀನು ಹಿರೇಭಾಸ್ಕರ ನಂತರ ಶರಾವತಿ ವಿದ್ಯುತ್ ಯೋಜನೆಯಿಂದಎರಡು ಬಾರಿ ಮುಳುಗಡೆಯಾಗಿದೆ. ಆ ಸಂದರ್ಭದಲ್ಲಿ ನಮಗೆ ಸಾಗರ ತಾಲೂಕಿನ ಪಡವಗೋಡು ಗ್ರಾಪಂವ್ಯಾಪ್ತಿಯ ಹಳವಗೋಡು ಗ್ರಾಮದಲ್ಲಿಜಮೀನು ಸಾಗುವಳಿ ಮಾಡಿಕೊಳ್ಳಲುಸರ್ಕಾರ ಅವಕಾಶ ಮಾಡಿಕೊಟ್ಟಿತ್ತು ಎಂದು ತಿಳಿಸಲಾಗಿದೆ.
1959ರಿಂದ ನಾವು ಹಳವಗೋಡು ಗ್ರಾಮದ ಸರ್ವೇ ನಂ. 12ರಲ್ಲಿ 19 ಕುಟುಂಬಗಳು ಸುಮಾರು 52 ಎಕರೆಜಮೀನು ಸಾಗುವಳಿ ಮಾಡಿಕೊಂಡು ಜೀವನ ನಡೆಸಿಕೊಂಡು ಬರುತ್ತಿದ್ದೇವೆ.1995-96ರಲ್ಲಿ ನಮ್ಮ ಜಮೀನುಗಳನ್ನು ಅರಣ್ಯಭೂಮಿಯೆಂದು ಪರಿವರ್ತನೆ ಮಾಡಲಾಗಿದೆ. ಇದರಿಂದ ನಾವು ತೀವ್ರ ಸಂಕಷ್ಟಕ್ಕೆ ಒಳಗಾಗುವಂತೆ ಆಗಿದೆ ಎಂದು ಗ್ರಾಮಸ್ಥರು ದೂರಿದ್ದಾರೆ.
ರಾಜ್ಯಕ್ಕೆ ಬೆಳಕು ನೀಡಲು ನಮ್ಮಮನೆ, ಆಸ್ತಿ, ಜಮೀನು ಕಳೆದುಕೊಂಡು ಒಂದರ್ಥದಲ್ಲಿ ನಮ್ಮ ಬದುಕುನಿರಾಶ್ರಿತವಾಗಿದೆ. ಸರ್ಕಾರವೇ ನಮ್ಮನ್ನು ಮುಳುಗಡೆ ಸಂತ್ರಸ್ತರು ಎಂದುಪುನರ್ವಸತಿ ಕಲ್ಪಿಸಿದ ಜಾಗವನ್ನು ಅರಣ್ಯಇಲಾಖೆಗೆ ಸೇರಿಸಿ ಈತನಕ ಹಕ್ಕುಪತ್ರ ನೀಡದೆ ಇರುವುದು ಬಹಳ ನೋವಿನ ಸಂಗತಿ. ಹಳವಗೋಡು ಗ್ರಾಮದ ಸರ್ವೇ ನಂ. 12ರಲ್ಲಿ ವಾಸವಿರುವ 19 ಕುಟುಂಬಗಳು ಸಾಗುವಳಿ ಮಾಡಿಕೊಂಡು ಬಂದಿರುವ 52 ಎಕರೆಜಮೀನನ್ನು ಕಂದಾಯ ಭೂಮಿಯಾಗಿ ಪರಿವರ್ತಿಸಿ ಹಕ್ಕುಪತ್ರ ನೀಡುವಂತೆ ಒತ್ತಾಯಿಸಲಾಗಿದೆ. ಪ್ರಗತಿಪರ ಯುವ ಒಕ್ಕೂಟದ ತಾಲೂಕು ಅಧ್ಯಕ್ಷ ರಮೇಶ್ ಈ. ಕೆಳದಿ, ಮುಳುಗಡೆಸಂತ್ರಸ್ತರಾದ ಅಶೋಕ್, ಮಹಾಬಲೇಶ್, ಕನ್ನಪ್ಪ, ಗಿರೀಶ್, ಉಮೇಶ್ ಇನ್ನಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
Shimoga; ಕಾಂಗ್ರೆಸ್ ಸರಕಾರ ಹಿಂದೂ ಸಮಾಜದ ತಾಳ್ಮೆ ಪರೀಕ್ಷೆ ಮಾಡುತ್ತಿದೆ: ಈಶ್ವರಪ್ಪ
Shimoga; ತೇಜೋವಧೆ ಮಾಡಲು ನನ್ನ ಹೆಸರಲ್ಲಿ ಕಳಪೆ ಸ್ವೀಟ್ ಹಂಚಿಕೆ; ಡಾ.ಸರ್ಜಿ
Hosanagara: ರಸ್ತೆ ಅಪಘಾತದಲ್ಲಿ ಪತಿ ಮೃತಪಟ್ಟ ಸುದ್ದಿ ಕೇಳಿ ಆತ್ಮಹತ್ಯೆಗೆ ಶರಣಾದ ಪತ್ನಿ
Thirthahalli: ಅದ್ಧೂರಿಯಾಗಿ ನಡೆದ ಎಳ್ಳಮಾವಾಸ್ಯೆ ರಥೋತ್ಸವ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Test Cricket; ರೋಹಿತ್ ಆಯ್ತು, ಈಗ ವಿರಾಟ್..: ಬಿಸಿಸಿಐ ಕಳಿಸಿದ ʼಆʼ ಸಂದೇಶದಲ್ಲಿ ಏನಿದೆ?
Gangolli: ಪಂಚಾಯತ್‌ನೊಳಗೆ ನಮಾಜ್; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
ನಾನು ಶೀಶಮಹಲ್ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್
Venur; ಚಿರತೆ ಓಡಾಟ; ಸಾರ್ವಜನಿಕರಲ್ಲಿ ಆತಂಕ; ಅರಣ್ಯಾಧಿಕಾರಿ- ಸಾರ್ವಜನಿಕರ ಸಭೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.