ರಿಂಗ್ರೋಡ್ ಕಾಮಗಾರಿ ವೀಕ್ಷಣೆ
Team Udayavani, May 16, 2020, 7:56 AM IST
ಶಿವಮೊಗ್ಗ: ನಗರ ರೈಲ್ವೆ ಕಾಂಪೌಂಡ್ನಿಂದ ಹೊಸಪೇಟೆ-ಶಿವಮೊಗ್ಗ ರಸ್ತೆ ಸಂಪರ್ಕಿಸುವ 100ಅಡಿ ವರ್ತುಲ ರಸ್ತೆ ಕಾಮಗಾರಿ ಸ್ಥಳವನ್ನು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಹಾಗೂ ಸಂಸದ ಬಿ.ವೈ.ರಾಘವೇಂದ್ರ ಅವರು ಶುಕ್ರವಾರ ಪರಿಶೀಲಿಸಿದರು.
ಸದರಿ ರಸ್ತೆಯ ಎರಡು ಬದಿಯಲ್ಲಿ 750ಮೀಟರ್ ಉದ್ದಕ್ಕೆ ಸಿಮೆಂಟ್ ಕಾಂಕ್ರಿಟ್ ಚತುಷ್ಪಥ ರಸ್ತೆ, ರಸ್ತೆಯ ಎರಡೂ ಬದಿಗಳಲ್ಲಿ ಬಾಕ್ಸ್ ಚರಂಡಿ ನಿರ್ಮಾಣ, ರೈಲ್ವೆ ನಿಲ್ದಾಣಕ್ಕೆ ಸಂಪರ್ಕಿಸುವ 100ಮೀಟರ್ ಸಿಸಿ ರಸ್ತೆ ನಿರ್ಮಾಣ ಮತ್ತು ರೈಲ್ವೆ ನಿಲ್ದಾಣದಿಂದ ಹೊರಗೆ ಹೋಗಲು 400ಮೀಟರ್ ಡಾಂಬರ್ ರಸ್ತೆ ನಿರ್ಮಾಣ ಕಾಮಗಾರಿ ಇದರಲ್ಲಿ ಸೇರಿದೆ.
ರಸ್ತೆ ನಿರ್ಮಾಣಕ್ಕೆ ಅಡ್ಡಲಾಗಿರುವ ವಸತಿಗೃಹಗಳ ಭೂಸ್ವಾಧೀನಕ್ಕಾಗಿ ರೈಲ್ವೆ ಇಲಾಖೆಗೆ ಈಗಾಗಲೇ 2.36 ಕೋಟಿ ರೂ. ಪಾವತಿಸಲಾಗಿದ್ದು, ಸದರಿ ಕಟ್ಟಡಗಳನ್ನು ರೈಲ್ವೆ ಇಲಾಖೆ ಲೋಕೋಪಯೋಗಿ ಇಲಾಖೆ ಸ್ವಾಧೀನಕ್ಕೆ ನೀಡಿದೆ. ಖಾಸಗಿ ಒಡೆತನದ ಒಟ್ಟು 14 ವಸತಿಗೃಹಗಳ ಭೂಸ್ವಾಧೀನ ಪ್ರಕ್ರಿಯೆಗಾಗಿ 3.78 ಕೋಟಿ ರೂ. ಪಾವತಿಸಲು ಉಪವಿಭಾಗಾಧಿಕಾರಿ ಅವರು ಸೂಚಿಸಿದ್ದು, ಈಗಾಗಲೇ 2.40ಕೋಟಿ ರೂ. ಪಾವತಿಸಲಾಗಿದೆ. ಇನ್ನುಳಿದ ಮೆಸ್ಕಾಂನ ಜಾಗದ ಭೂಸ್ವಾಧೀನ ಪ್ರಕ್ರಿಯೆ ಪ್ರಗತಿಯಲ್ಲಿದ್ದು, ಅದನ್ನು ಆದಷ್ಟು ಬೇಗನೆ ಪೂರ್ಣಗೊಳಿಸುವಂತೆ ಸಚಿವರು ತಿಳಿಸಿದರು.
ರಸ್ತೆ ನಿರ್ಮಾಣಕ್ಕೆ ಅಡ್ಡಲಾಗಿರುವ ವಿದ್ಯುತ್ ಕಂಬಗಳ ತೆರವು ಪ್ರಕ್ರಿಯೆ ಆರಂಭಿಸಬೇಕು. ಅದರಂತೆ ಯುಜಿಡಿ ಪೈಪ್ಲೈನ್ ಸ್ಥಳಾಂತರಿಸುವ ಕಾಮಗಾರಿಗೆ ಅಂದಾಜುಪಟ್ಟಿಯಲ್ಲಿ 28ಲಕ್ಷ ರೂ. ಒದಗಿಸಲಾಗಿದೆ. ನೀರು ಸರಬರಾಜು ಕೊಳವೆಗಳ ಸ್ಥಳಾಂತರಕ್ಕಾಗಿ 18.50ಲಕ್ಷ ರೂ. ಪಾವತಿಸಲಾಗಿದ್ದು, ಟೆಂಡರ್ ಪ್ರಕ್ರಿಯೆ ಪ್ರಗತಿಯಲ್ಲಿದೆ. ಭೂಸ್ವಾ ಧೀನಗೊಂಡಿರುವ ರೈಲ್ವೆ ಇಲಾಖೆಯ ವಸತಿಗೃಹಗಳು ಮತ್ತು ಖಾಸಗಿ ವಸತಿಗೃಹ ಕಟ್ಟಡದ ನೆಲಸಮ ಮಾಡುವ ಕಾಮಗಾರಿ ಪ್ರಗತಿಯಲ್ಲಿದೆ ಎಂದು ಅವರು ಹೇಳಿದರು.
ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shivamogga: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಓ ಈಶ್ವರಪ್ಪ
Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!
CT Ravi Arrest; ಧೂರ್ತ ಸರ್ಕಾರ ನೀಚತನದ ಕೆಲಸ ಮಾಡಿದೆ: ಆರಗ ಜ್ಞಾನೇಂದ್ರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ದೆಹಲಿ ಪರೇಡ್ಗೆ ಬ್ರಹ್ಮ ಜಿನಾಲಯ ಸ್ತಬ್ಧಚಿತ್ರ; ಗತ ವೈಭವ ಸಾರಲಿದೆ ಟ್ಯಾಬ್ಲೊ
SriLanka ನೌಕಾಪಡೆಯಿಂದ ತಮಿಳುನಾಡಿನ 17 ಮೀನುಗಾರರ ಬಂಧನ; ಬಿಡುಗಡೆಗೆ ಸ್ಟಾಲಿನ್ ಮನವಿ
Year Ender 2024: ಗೂಗಲ್ ನಲ್ಲಿ ಈ ವರ್ಷ ಅತೀ ಹೆಚ್ಚು ಹುಡುಕಲ್ಪಟ್ಟ ವಿಷಯ ಯಾವುದು ಗೊತ್ತಾ?
ಪಾರ್ಟಿಗೆ ಕರೆದು ಬಟ್ಟೆ ಬಿಚ್ಚಿಸಿ, ಮೂತ್ರ ವಿಸರ್ಜಿಸಿ ಅವಮಾನ… ಮನನೊಂದ ಬಾಲಕ ಆತ್ಮಹತ್ಯೆ
OTT Release Date: ಸೂಪರ್ ಹಿಟ್ ʼಭೈರತಿ ರಣಗಲ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.