ಪಠ್ಯದಲ್ಲಿ ಜನಪದ ಅಳವಡಿಸಿ

ಸಾಹಿತ್ಯ- ಸಂಸ್ಕೃತಿಗೆ ಜನಪದ ತಾಯಿಬೇರು ಇದ್ದಂತೆ: ಜಾನಪದ ಪರಿಷತ್‌ ಅಧ್ಯಕ್ಷ ತಿಮ್ಮೇಗೌಡ

Team Udayavani, Mar 2, 2020, 1:19 PM IST

2-March-13

ರಿಪ್ಪನ್‌ಪೇಟೆ: ವಿದೇಶೀಯರ ಆಚಾರ- ವಿಚಾರ, ಸಂಸ್ಕೃತಿಯನ್ನು ಇಂದಿನ ಪಠ್ಯದಲ್ಲಿ ಅಳವಡಿಸಿ ಹೆಚ್ಚು ಆಕಷಿತಗೊಳಿಸುವ ಬದಲು ನಮ್ಮ ನಾಡು-ನುಡಿಯ ಗ್ರಾಮೀಣ ಸಂಸ್ಕೃತಿ- ಸಂಸ್ಕಾರಗಳ ಜನಪದವನ್ನು ಪಠ್ಯಪುಸ್ತಕದಲ್ಲಿ ಅಳವಡಿಸಿ ಮುಂದಿನ ತಲೆಮಾರಿಗೆ ಪರಿಚಯಿಸಬೇಕಾದ ಕಾರ್ಯ ಮಾಡಬೇಕಾದ ಅನಿವಾರ್ಯತೆ ಎದುರಾಗಿದೆ ಎಂದು ಕರ್ನಾಟಕ ಜಾನಪದ ಪರಿಷತ್‌ ಅಧ್ಯಕ್ಷ ಟಿ.ತೀಮ್ಮೇಗೌಡರು ಹೇಳಿದರು.

ಸಮೀಪದ ಹೆದ್ದಾರಿಪುರ ಗ್ರಾಪಂ ಆವರಣದಲ್ಲಿ ಕರ್ನಾಟಕ ಜಾನಪದ ಪರಿಷತ್‌, ಜಿಲ್ಲಾ ಕನ್ನಡ ಸಾಹಿತ್ಯ ಸಂಸ್ಕೃತಿ ವೇದಿಕೆ, ಜಾನಪದ ಉತ್ಸವ ಸಮಿತಿ, ನೆಹರು ಯುವಕೇಂದ್ರದ ಆಶ್ರಯದಲ್ಲಿ ನಾಡೋಜ ಎಚ್‌. ಎಲ್‌. ನಾಗೇಗೌಡ ಸ್ಮರಣಾರ್ಥ ಜಾನಪದ ಲೋಕ ಬೆಳ್ಳಿಹಬ್ಬದ ಅಂಗವಾಗಿ ಅಯೋಜಿಸಲಾಗಿದ್ದ “ಜಿಲ್ಲಾ ಮಟ್ಟದ ಜಾನಪದೋತ್ಸವ’ ಕಾರ್ಯಕ್ರಮವನ್ನು ಡೊಳ್ಳು ಬಾರಿಸುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.

ಸಂಪನ್ಮೂಲ ಮುಖ್ಯವಲ್ಲ. ಸಂಘಟನೆ ಮತ್ತು ಪರಸ್ಪರ ಸಹಕಾರದಿಂದ ಎಲ್ಲರೂ ಬೆರೆತು ಜನಪದ ಹಾಡಿನೊಂದಿಗೆ ಗ್ರಾಮೀಣ ಕೃಷಿ, ಮನರಂಜನೆಯ ಮೂಲಕ ತಲೆ ತಲಾಂತರದಿಂದ ಜನಮಾನಸದಲ್ಲಿ ಉಳಿಯುವಂತಹ ಗ್ರಾಮೀಣ ಜನಪದ ಸಾಹಿತ್ಯಕ್ಕೆ ಅಪಾರ ಮಹತ್ವವಿದೆ. ಸಾಹಿತ್ಯ ಸತ್ತಿಲ್ಲ, ಶಾಲಾ- ಕಾಲೇಜುಗಳಲ್ಲಿ ಜನಪದ ಪ್ರಚಾರ ಏರ್ಪಡಿಸಬೇಕಾಗಿದ್ದು ಇತ್ತೀಚಿನ ದಿನಗಳಲ್ಲಿ ವಿದ್ಯಾರ್ಥಿಗಳು ಹೆಚ್ಚು ಜನಪದದ ಕಡೆ ಅಕಷಿತರಾಗಿದ್ದಾರೆ. ಇದನ್ನು ಉಳಿಸಿ, ಬೆಳೆಸಿ, ಪ್ರೋತ್ಸಾಹಿಸುವಲ್ಲಿ ಸರಕಾರ ಸಹ ಹೆಚ್ಚು ಅಸಕ್ತಿ ವಹಿಸಿದೆ ಎಂದರು.

ಸಾಹಿತ್ಯ ಸಂಸ್ಕೃತಿಗೆ ಜನಪದ ತಾಯಿ ಬೇರು ಇದ್ದಂತೆ. ಅದನ್ನು ನಶಿಸಿ ಹೋಗದಂತೆ ಮುಂದಿನ ತಲೆಮಾರಿಗೆ ಪರಿಚಯಿಸುವ ಗುರುತರ ಜವಾಬ್ದಾರಿ ಎಲ್ಲರದ್ದಾಗಬೇಕು ಎಂದರು.

ಹೊಸನಗರ ತಾಪಂ ಮಾಜಿ ಅಧ್ಯಕ್ಷ ತೊರೆಗದ್ದೆ ವಾಸಪ್ಪಗೌಡ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಜಾನಪದ ಸಮ್ಮೇಳನ ಸಾಂಸ್ಕೃತಿಕ ಉತ್ಸವ ಸಮಿತಿ ಸಮ್ಮೇಳನಾಧ್ಯಕ್ಷ ಹಾಗೂ ಹಿರಿಯ ಜನಪದ ಕಲಾವಿದ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಗುಡ್ಡಪ್ಪ ಜೋಗಿ, ತಾಪಂ ಅಧ್ಯಕ್ಷೆ ಸುಶೀಲ ರಘುಪತಿ, ಗ್ರಾಪಂ ಅಧ್ಯಕ್ಷೆ ರತ್ನಮ್ಮ, ಉಪಾಧ್ಯಕ್ಷೆ ಹೇಮಾ, ಕರ್ನಾಟಕ ಜಾನಪದ ಪರಿಷತ್‌ ತಾಲೂಕು ಅಧ್ಯಕ್ಷ ಸತೀಶ, ಜಿಲ್ಲಾ ನೆಹರು ಯುವ ಕೇಂದ್ರದ ಯುವ ಸಮನ್ವಯಾಧಿಕಾರಿ ಕೆ.ಕೆ. ಉಲ್ಲಾಸ, ಗ್ರಾಪಂ ಸದಸ್ಯ ಮಂಜಪ್ಪ, ವಿ.ಡಿ. ಲಿಂಗಪ್ಪ, ಮಂಜುನಾಥ ತಳಲೆ, ನೇತ್ರಾವತಿ, ಚಂದ್ರಶೇಖರ, ಪಾವತಮ್ಮ, ಗೌರಮ್ಮ, ನಾಗರತ್ನಮ್ಮ, ಶೋಭಾ, ಪ್ರವೀಣ್‌, ತಳಲೆ ಸಹಕಾರ ಬ್ಯಾಂಕ್‌ ಅಧ್ಯಕ್ಷ ದಿನೇಶ್‌ ಗೌಡ, ಉಪಾಧ್ಯಕ್ಷ ಮಂಜುನಾಥ ಇದ್ದರು.

ಸತೀಶ ಸ್ವಾಗತಿಸಿದರು. ಜಾನಪದ ಪರಿಷತ್‌ ಅಧ್ಯಕ್ಷ ಡಿ. ಮಂಜುನಾಥ ಅಶಯ ನುಡಿ ಸಲ್ಲಿಸಿದರು. ಕೆ.ಎಸ್‌. ಲೋಕಪ್ಪ ಗೌಡ  ಸ್ತಾವಿಕವಾಗಿ ಮಾತನಾಡಿದರು. ಅಶ್ವಿ‌ನಿ ಶಿವ ನಿರೂಪಿಸಿದರು.

ಟಾಪ್ ನ್ಯೂಸ್

parthagali

Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ

kalaranga

Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ

kapu-marigudi

Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ

K-H-Muniyappa

BPL ಕಾರ್ಡು ರದ್ದಾಗಲ್ಲ: ಮುನಿಯಪ್ಪ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

yadiyurappa

40 percent commission ಸುಳ್ಳು ಸಾಬೀತು : ಕಾಂಗ್ರೆಸಿಗರಿಗೆ ತಾಕೀತು ಮಾಡಿದ ಯಡಿಯೂರಪ್ಪ

Sagara: ಸಹಕಾರಿ ಚಳುವಳಿಯ ಭದ್ರ ಬೇರು ಕರ್ನಾಟಕದಲ್ಲಿದೆ: ಬಿ.ಎಸ್.ಯಡಿಯೂರಪ್ಪ

Sagara: ಸಹಕಾರಿ ಚಳುವಳಿಯ ಭದ್ರ ಬೇರು ಕರ್ನಾಟಕದಲ್ಲಿದೆ: ಬಿ.ಎಸ್.ಯಡಿಯೂರಪ್ಪ

Shimoga; Omini caught fire while filling with petrol

Shimoga; ಪೆಟ್ರೋಲ್ ಹಾಕುವಾಗ ಹೊತ್ತಿ ಉರಿದ ಓಮಿನಿ

bsy

Covid ವೇಳೆ ಜೀವ ಉಳಿಸುವ ಕೆಲಸ ಮಾಡಿದ್ದೇವೆ: ಬಿಎಸ್‌ವೈ

Sagara-Autrity

Sagara: ಹತ್ತು ಎಕರೆ ಜಾಗದಲ್ಲಿ ಆಶ್ರಯ ಲೇ ಔಟ್ ನಿರ್ಮಿಸಿ ಬಡವರಿಗೆ ಹಂಚಿಕೆ: ಶಾಸಕ ಬೇಳೂರು

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

parthagali

Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ

kalaranga

Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ

kapu-marigudi

Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

1-chuii

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಗೌರವಾರ್ಪಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.