High Court ತಡೆಯಾಜ್ಞೆ ಮೀರಿ ರಸ್ತೆ ಅಗಲೀಕರಣ ಕಾಮಗಾರಿ; ನಗರ ಠಾಣೆಗೆ ದೂರು
Team Udayavani, Aug 16, 2023, 4:12 PM IST
ಸಾಗರ: ಇಲ್ಲಿನ ಬಿಎಚ್ ರಸ್ತೆಯ ರಿಲೆಯನ್ಸ್ ಪೆಟ್ರೋಲ್ ಬಂಕ್‌ನಿಂದ ಪೊಲೀಸ್ ಸ್ಟೇಷನ್‌ವರೆಗೆ ರಸ್ತೆ ಅಗಲೀಕರಣಕ್ಕೆ ಹೈಕೋರ್ಟ್ ತಡೆಯಾಜ್ಞೆ ಇದ್ದಾಗಲೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮತ್ತು ಗುತ್ತಿಗೆದಾರರು ಕದ್ದುಮುಚ್ಚಿ ಅಗಲೀಕರಣ ಕಾಮಗಾರಿ ನಡೆಸುತ್ತಿರುವುದರ ವಿರುದ್ಧ ನ್ಯಾಯವಾದಿ ನಾಗರಾಜ್ ಸಾಗರ ನಗರ ಠಾಣೆಗೆ ಬುಧವಾರ ದೂರು ನೀಡಿದ್ದಾರೆ.
ರಿಲಯನ್ಸ್ ಪೆಟ್ರೋಲ್ ಬಂಕ್‌ನಿಂದ ನಗರ ಠಾಣೆವರೆಗೆ ರಸ್ತೆ ಅಗಲೀಕರಣ ಮಾಡುವಾಗ ಎರಡೂ ಭಾಗದಲ್ಲೂ ಅಗಲೀಕರಣ ಮಾಡಬೇಕು. ಒಂದೇ ಭಾಗದಲ್ಲಿ ಅಗಲೀಕರಣ ಮಾಡುವುದರಿಂದ ಜ್ಯೂನಿಯರ್ ಕಾಲೇಜು, ತಹಶೀಲ್ದಾರ್ ಕಚೇರಿ, ನ್ಯಾಯಾಲಯ ಆವರಣ, ಪೊಲೀಸ್ ಸ್ಟೇಷನ್ ಜಾಗ ಹೆಚ್ಚು ರಸ್ತೆಗೆ ಹೋಗುತ್ತದೆ ಎಂಬ ಕುರಿತು ವಕೀಲರ ಸಂಘ, ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿದ್ದವು. ಎರಡೂ ಭಾಗದಲ್ಲೂ ಅಗಲೀಕರಣ ಕೈಗೊಳ್ಳಬೇಕು ಎಂದು ಹೈಕೋರ್ಟ್ ನ್ಯಾಯವಾದಿ ಕೆ.ದಿವಾಕರ್ ಸೇರಿದಂತೆ ಸ್ಥಳೀಯ ವಕೀಲರು ಹೈಕೋರ್ಟ್‌ಗೆ ದಾವೆ ಸಲ್ಲಿಸಿದ್ದರು. ರಾಜ್ಯ ಉಚ್ಚ ನ್ಯಾಯಾಲಯ ಯಥಾಸ್ಥಿತಿ ಕಾಪಾಡುವಂತೆ ಆದೇಶ ನೀಡಿತ್ತು.
ನ್ಯಾಯಾಲಯದ ಆದೇಶವಿದ್ದಾಗಲೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮತ್ತು ಗುತ್ತಿಗೆದಾರರು ಯಾರಿಗೂ ಗೊತ್ತಾಗದಂತೆ ರಸ್ತೆಯ ಒಂದೇ ಭಾಗದಲ್ಲಿ ಅಗಲೀಕರಣ ಕಾಮಗಾರಿ ನಡೆಸುತ್ತಿರುವುದು ಸರಿಯಲ್ಲ. ಹಿಟಾಜಿ ತಂದು ಜ್ಯೂನಿಯರ್ ಕಾಲೇಜು ಮತ್ತು ತಹಶೀಲ್ದಾರ್ ಕಚೇರಿ ಬಳಿ ಅಗಲೀಕರಣ ಕಾಮಗಾರಿ ತರಾತುರಿಯಲ್ಲಿ ನಡೆಸಲಾಗುತ್ತಿದೆ. ತಕ್ಷಣ ಅಗಲೀಕರಣ ಕಾಮಗಾರಿ ನಿಲ್ಲಿಸಬೇಕು. ಸಂಬಂಧಪಟ್ಟ ಗುತ್ತಿಗೆದಾರರಿಗೆ ಎಚ್ಚರಿಕೆ ನೀಡಬೇಕು ಎಂದು ನಾಗರಾಜ್ ನೀಡಿದ ದೂರಿನಲ್ಲಿ ಒತ್ತಾಯಿಸಿದ್ದಾರೆ.
ಇದನ್ನೂ ಓದಿ: Central Cabinet Seat Offer…ಕಾಂಗ್ರೆಸ್ ಹೇಳಿಕೆಗೆ ಸಂಸದೆ ಸುಪ್ರಿಯಾ ಸುಳೆ ಹೇಳಿದ್ದೇನು?
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
JDS ರಾಮನಗರದಿಂದಲೂ ಔಟ್: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ
Vikram Gowda Case: ವಿಕ್ರಂ ಗೌಡ ಎನ್‌ಕೌಂಟರ್; ತನಿಖೆ ಚುರುಕು
Karnataka Congress; ‘ಭ್ರಷ್ಟ’ಆರೋಪ ಮಧ್ಯೆ ವಿಪಕ್ಷಗಳಿಗೆ ಮರ್ಮಾಘಾತ
Mysuru: ಜೆಡಿಎಸ್ ವರಿಷ್ಠರಿಗೆ ನಾನು ಬೇಡ, ನನ್ನ ಮಗ ಬೇಕಾಗಿದ್ದಾನೆ: ಜಿ.ಟಿ.ದೇವೇಗೌಡ
BJP ಸಂಘಟನೆ, ತಂತ್ರಗಾರಿಕೆಯಲ್ಲಿ ವಿಫಲ: ವಿಜಯೇಂದ್ರ ಮೇಲೂ ಪರಿಣಾಮ?
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
COPD: ಕ್ರೋನಿಕ್ ಒಬ್‌ಸ್ಟ್ರಕ್ಟಿವ್ ಪಲ್ಮನರಿ ಡಿಸೀಸ್ (ಸಿಒಪಿಡಿ)
Maryade Prashne Review: ಮಧ್ಯಮ ವರ್ಗದ ಮರ್ಯಾದೆ ಹೋರಾಟ
Laparoscopic surgery: ಸಂತಾನೋತ್ಪತ್ತಿ ಹೆಚ್ಚಿಸುವ ಲ್ಯಾಪರೊಸ್ಕೋಪಿಕ್ ಶಸ್ತ್ರಚಿಕಿತ್ಸೆ
Renukaswamy Case: ಹತ್ಯೆ ಸ್ಥಳದಲ್ಲಿ ನಟ ದರ್ಶನ್: ಫೋಟೋ ಸಾಕ್ಷ್ಯ
Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.