Road Mishap ಟಿಪ್ಪರ್ -ಬೈಕ್ ಮುಖಾಮುಖಿ ಡಿಕ್ಕಿ: ಬೈಕ್ ಸವಾರ ಸಾವು
Team Udayavani, Aug 8, 2024, 8:50 PM IST
ಸಾಗರ: ನಗರದಿಂದ ಗೆಣಸಿನಕುಣಿ ಕಡೆಗೆ ಹೋಗುತ್ತಿದ್ದ ಟಿಪ್ಪರ್ ಹಾಗೂ ಕಟ್ಟಿನಕಾರು ಸಮೀಪದ ಪಡಬೀಡು ಗ್ರಾಮದಿಂದ ಸಾಗರಕ್ಕೆ ತೆರಳುತ್ತಿದ್ದ ಬೈಕ್ ನಡುವೆ ಗುರುವಾರ (ಆ.08) ಮಧ್ಯಾಹ್ನ ಆವಿನಹಳ್ಳಿ ಸಮೀಪದಲ್ಲಿ ಅಪಘಾತ ಸಂಭವಿಸಿದೆ.
ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಕಟ್ಟಿನಕಾರು ಗ್ರಾಮದ ಬೈಕ್ ಸವಾರ ಸಚಿನ್(19) ಶಿವಮೊಗ್ಗದ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.
ಸಹಸವಾರ ಸುಮಂತ್‌ರಿಗೆ ಗಾಯಗಳಾಗಿದ್ದು ಕುಂದಾಪುರದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಘಟನೆ ವಿವರ
ಗೆಣಸಿಕುಣಿಯ ಸಂಪೇಕೈ ಮಂಜು ಎನ್ನುವವರಿಗೆ ಸೇರಿದ್ದ ಟಿಪ್ಪರ್ ಸಾಗರದಲ್ಲಿ ರಿಪೇರಿ ಮಾಡಿಸಿಕೊಂಡು ವಾಪಾಸ್ ಬರುತ್ತಿರುವಾಗ ಈ ಘಟನೆ ಸಂಭವಿಸಿದೆ.
ಟಿಪ್ಪರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ತೀವ್ರವಾಗಿ ಗಾಯಗೊಂಡಿದ್ದ ಸಚಿನ್‌ರನ್ನು ತಕ್ಷಣ ಆಂಬ್ಯುಲೆನ್ಸ್‌ನಲ್ಲಿ ಶಿವಮೊಗ್ಗದ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ.
ಸಚಿನ್ ಕಾರ್ಪೆಂಟರ್ ಆಗಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ. ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್..? ವಿಡಿಯೋದಲ್ಲಿ ಸುಳಿವು
Kundapura: ಹೆಜ್ಜೇನು ದಾಳಿ; ವ್ಯಕ್ತಿ ಸಾವು
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್
Belagavi: ಮಹಿಳೆಯರ ಸಬಲರಾಗಿಸುವ ಗೃಹಲಕ್ಷ್ಮಿ ಯೋಜನೆ ನಿಲ್ಲಿಸುವ ಮಾತೇ ಇಲ್ಲ: ಸಿದ್ದರಾಮಯ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.