ಅರಣ್ಯ ವಾಸಿಗಳಿಗೆ ಭೂಮಿ ಹಕ್ಕು ನೀಡಿ: ನಾಗರಾಜ್
Team Udayavani, Nov 6, 2021, 4:04 PM IST
ಶಿವಮೊಗ್ಗ: ಅರಣ್ಯ ವಾಸಿಗಳಿಗೆ ಭೂಮಿ ಹಕ್ಕು ನೀಡುವಲ್ಲಿ ಸರ್ಕಾರ ಮತ್ತು ಅಧಿಕಾರಿಗಳು ನಿರ್ಲಕ್ಷ್ಯ ತಾಳಿದ್ದು ತಕ್ಷಣವೇ ಭೂಮಿಹಕ್ಕು ನೀಡಬೇಕೆಂದು ಕಾಂಗ್ರೆಸ್ ಸೇವಾದಳದ ಜಿಲ್ಲಾಧ್ಯಕ್ಷ ವೈ.ಎಚ್. ನಾಗರಾಜ್ ಆಗ್ರಹಿಸಿದ್ದಾರೆ.
ಕೇಂದ್ರ ಸರ್ಕಾರ 2008ರಲ್ಲಿ ಜಾರಿಗೆ ತಂದ ಅನುಸೂಚಿತ ಬುಡಕಟ್ಟುಗಳು ಮತ್ತು ಇತರೆ ಪಾರಂಪರಿಕ ಅರಣ್ಯವಾಸಿಗಳಿಗೆ ಭೂಮಿ ಹಕ್ಕು ನೀಡುವ ಕಾಯ್ದೆ ಜಾರಿಯಲ್ಲಿದ್ದರೂ ಅ ಧಿಕಾರಿಗಳು ನಿರ್ಲಕ್ಷé ವಹಿಸುತ್ತಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.
ಶಿವಮೊಗ್ಗ ಜಿಲ್ಲೆ ,ಚೆನ್ನಗಿರಿ ಮತ್ತು ಹೊನ್ನಾಳಿ ತಾಲೂಕಿನ ಎಲ್ಲ ಗ್ರಾಪಂ ವ್ಯಾಪ್ತಿಯಲ್ಲಿ ಸುಮಾರು ಒಂದು ಲಕ್ಷ ಜನರು ಅರಣ್ಯಭೂಮಿ ಮಂಜೂರಾತಿಗಾಗಿ ಸಾಗುವಳಿದಾರರು ಅರ್ಜಿ ಸಲ್ಲಿಸಿದ್ದಾರೆ. ಆದರೆ ಸರ್ಕಾರ ಮಾತ್ರ ಯಾವ ಕ್ರಮವನ್ನೂ ಕೈಗೊಂಡಿಲ್ಲ. ಒಂದು ಕಡೆ ಸುಪ್ರೀಂಕೋರ್ಟ್ ಸಹ ಈ ಜನರಿಗೆ ಭೂಮಿ ಮಂಜೂರು ಮಾಡಲು ಬೇಕಾದ ದಾಖಲೆ ಪಡೆದು ರೈತರಿಗೆ ಸಹಾಯ ಮಾಡಬೇಕು ಎಂದು ಎಂದು ಆದೇಶ ಹೊರಡಿಸಿದ್ದರೂ ಕೂಡ ನ್ಯಾಯ ಸಿಗುತ್ತಿಲ್ಲ. ಹಲವು ದಶಕಗಳಿಂದ ಭೂಮಿ ಹಕ್ಕಿಗಾಗಿ ಸಾಗುವಳಿದಾರರು ಕಾಯುತ್ತಿದ್ದಾರೆ. ನ್ಯಾಯಕ್ಕಾಗಿ ಹೋರಾಟ ನಡೆಸುತ್ತಲೇ ಇದ್ದಾರೆ. ಉತ್ತರ ಮಾತ್ರ ಸಿಕ್ಕಿಲ್ಲ ಎಂದು ಅವರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga; ವಿಜಯೇಂದ್ರರನ್ನು ಕಟ್ಟಿ ಹಾಕಲು ಕಾಂಗ್ರೆಸ್ ನಿಂದ ಸುಳ್ಳು ಆರೋಪ: ರಾಘವೇಂದ್ರ
Anandapura: ಸಾಲ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ
Shimoga: ಎಸ್ಐಟಿ ರಚನೆ ಮೂಲಕ ಕಾಂಗ್ರೆಸ್ ಹಗೆ ತೀರಿಸಿಕೊಳ್ಳುತ್ತಿದೆ: ಆರಗ ಜ್ಞಾನೇಂದ್ರ
Anandapura: ಸಾಲದ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ
Shimoga; ಕಾಂಗ್ರೆಸ್-ಮುಸ್ಲಿಮರ ವಿರುದ್ದ ಹೇಳಿಕೆ: ಈಶ್ವರಪ್ಪ ವಿರುದ್ದ ಸುಮೋಟೋ ಪ್ರಕರಣ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.