ಸಮಾಜಕ್ಕೆ ಸಾಧುಸಂತರ ಕೊಡುಗೆ ಅಪಾರ
Team Udayavani, Nov 16, 2020, 8:21 PM IST
ಭದ್ರಾವತಿ: ಜಗತ್ತಿಗೆ ಅನಾದಿ ಕಾಲದಿಂದಲೂ ಆಧ್ಯಾತ್ಮಿಕ ಮೌಲ್ಯ ಮತ್ತು ಸಂಸ್ಕೃತಿಯನ್ನು ಕೊಡುಗೆಯಾಗಿ ನೀಡಿದವರು ಸಾಧು ಸಂತರು ಎಂದು ಎಡೆಯೂರು ಕ್ಷೇತ್ರದ ಶ್ರೀ ರೇಣುಕಾ ಶಿವಾಚಾರ್ಯ ಸ್ವಾಮೀಜಿ ಹೇಳಿದರು.
ಶುಕ್ರವಾರ ತಾಲೂಕಿನ ಬಿಳಿಕಿ ಹಿರೇಮಠದಲ್ಲಿ ಶ್ರೀ ಮಠದ ಲಿಂಗೈಕ್ಯ ರಾಚೋಟೇಶ್ವರ ಶಿವಾಚಾರ್ಯರ ಮತ್ತುಲಿಂಗೈಕ್ಯ ಶ್ರೀ ಗುರುಸಿದ್ದ ಶಿವಾಚಾರ್ಯರ ಸ್ಮರಣೋತ್ಸವಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದ ಅವರು, ಸಂತರ ಸ್ಮರಣೆಯಿಂದ ಸಮಾಜದಲ್ಲಿ ಸಾಮರಸ್ಯ ಮೂಡಿಸಲುಸಾಧ್ಯ. ಹಿಂದೆ ಅವರ ಅನುಗಹ್ರದಿಂದ ಪರಿಸರ ಸೇರಿದಂತೆಸಮಾಜವು ಸುಸ್ಥಿತಿಯಲ್ಲಿತ್ತು. ಈಗಲೂ ಅಂತಹ ಪುಣ್ಯ ಪುರುಷರ ನಾಮ ಸ್ಮರಣೆಯಿಂದ ಶಾಂತಿ ನೆಮ್ಮದಿ ಕಾಣಲು ಸಾಧ್ಯವಾಗಿದೆ ಎಂದು ಹೇಳಿದರು.
ಬಿಳಿಕಿ ಶ್ರೀಮಠದ ಪೀಠಾಧ್ಯಕ್ಷ ಶ್ರೀ ರಾಚೋಟೇಶ್ವರಶಿವಾಚಾರ್ಯ ಸ್ವಾಮೀಜಿ ಸಮ್ಮುಖ ವಹಿಸಿದ್ದರು. ಮಠದ ಕಾರ್ಯಾಧ್ಯಕ್ಷ ಟಿ.ವಿ. ಈಶ್ವರಯ್ಯ ಅಧ್ಯಕ್ಷತೆ ವಹಿಸಿದ್ದರು.ತಾವರೆಕೆರೆ ಶಿಲಾಮಠದ ಡಾ| ಅಭಿನವ ಸಿದ್ದಲಿಂಗ ಶಿವಾಚಾರ್ಯ ಸ್ವಾಮೀಜಿ, ಹಾರನಹಳ್ಳಿ ಶ್ರೀಮಠದಶಿವಯೋಗಿ ಶಿವಾಚಾರ್ಯ ಸ್ವಾಮೀಜಿ ಇದ್ದರು. ಸುರೇಶ್ ಶಾಸ್ತ್ರಿ, ಲೋಕೇಶ್‌ರಾವ್, ಅರ್ಜುನ್‌ರಾವ್, ಬಸವರಾಜ್, ಕುಮಾರ್, ಮೋಹನ್ ಮತ್ತಿತರ ಗ್ರಾಮದ ಮುಖಂಡರು ಇದ್ದರು.
ಬೆಳಗ್ಗೆ ಲೋಕ ಕಲ್ಯಾಣಾರ್ಥವಾಗಿ ಮತ್ತು ವಿಶ್ವಶಾಂತಿಗಾಗಿ ಹಾಗು ಕೋವಿಡ್ ಮುಕ್ತಿಗಾಗಿ ಮಹಾರುದ್ರಾ ಭಿಷೇಕ, ರುದ್ರಹೋಮ, ಗಣಹೋಮ, ಶಾಂತಿ ಹೋಮಾದಿಗಳನ್ನು ಕೀರ್ತೀಕುಮಾರ್ ಶಾಸ್ತ್ರಿ, ಆನಂದ್ ಶಾಸ್ತ್ರಿ, ಗಿರೀಶ್ ಶಾಸ್ತ್ರಿ, ಮಂಜುನಾಥ ಶಾಸ್ತ್ರಿ ನೆರವೇರಿ ಸಿದರು. ಮಠದ ವ್ಯವಸ್ಥಾಪಕ ಚಿದಾನಂದ ಸ್ವಾಮಿ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mollywood: ʼಮಾರ್ಕೊʼ ಬಳಿಕ ಮೋಹನ್ ಲಾಲ್ ನಿರ್ದೇಶನದ ʼಬರೋಜ್ʼ ಚಿತ್ರಕ್ಕೂ ಪೈರಸಿ ಕಾಟ
BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್ ಗೆ ಆಹ್ವಾನವಿಲ್ಲ! ದಿಗ್ಗಜನ ಬೇಸರ
Gundlupete: ಅಕ್ರಮವಾಗಿ 3 ಕೆ.ಜಿ. 100 ಗ್ರಾಂ ಗಾಂಜಾ ಸಾಗಣೆ: ಬಂಧನ
Odisha: ಕಾರಿಗೆ ಟ್ರಕ್ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು
Delhi; ರಸ್ತೆಗಳು ಪ್ರಿಯಾಂಕಾ ಗಾಂಧಿ ಕೆನ್ನೆಯಂತಿರಬೇಕು: ಬಿಜೆಪಿ ನಾಯಕನ ಹೇಳಿಕೆಗೆ ಟೀಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.